ಟಿ20 ತ್ರಿಕೋನ ಸರಣಿ: ನ್ಯೂಜಿಲೆಂಡ್ vs ಪಾಕಿಸ್ತಾನ Live ಸ್ಕೋರ್, ಆಡುವ ಬಳಗ

ನ್ಯೂಜಿಲೆಂಡ್ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ತ್ರಿಕೋನ ಸರಣಿಯಲ್ಲಿ ಇಂದು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಮಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಆತಿಥೇಯ ನ್ಯೂಜಿಲೆಂಡ್ ತಂಡ ರನ್ ಬೆನ್ನಟ್ಟುವ ಸವಾಲು ಸ್ವೀಕರಿಸಿದೆ.

ಪಾಕಿಸ್ತಾನ ತಂಡ ಈ ಸರಣಿಯಲ್ಲಿ ಅದ್ಬುತ ಪ್ರದರ್ಶನ ನೀಡಿ ಮಿಂಚಿತ್ತು. ಮೊದಲ ಹಂತದ ಪಂದ್ಯದಲ್ಲಿ ಬಾಂಗ್ಲಾದೇಶ ಹಾಗೂ ಆತಿಥೆಯ ನ್ಯೂಜಿಲೆಂಡ್ ಎರಡು ತಂಡಗಳಿಗೂ ಸೋಲಿನ ರುಚಿ ತೋರಿಸುವಲ್ಲಿ ಯಶಸ್ವಿಯಾಗಿತ್ತು. ಈ ಮೂಲಕ ಸರಣಿಯಲ್ಲಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಪಾಕಿಸ್ತಾನದ ಆರಂಭಿಕ ಆಟಗಾರರಾದ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಮೊದಲ ಎರಡು ಪಂದ್ಯಗಳಲ್ಲಿಯೂ ಮಿಂಚಿದ್ದರು.

ಸ್ಕೋರ್‌ಕಾರ್ಡ್ ಹೀಗಿದೆ

1
54233

ಭರ್ಜರಿ ಪ್ರದರ್ಶನ ನೀಡಿದೆ ಪಾಕಿಸ್ತಾನ: ಈ ಸರಣಿಯಲ್ಲಿ ಪಾಕಿಸ್ತಾನ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಮೊದಲ ಎರಡು ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದೆ. ಈ ತ್ರಿಕೋನ ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಿದ್ದ ಪಾಕಿಸ್ತಾನ ತಂಡ ಆ ಪಂದ್ಯದಲ್ಲಿ 21 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಅದಾದ ಬಳಿಕ ಎರಡನೇ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಎದುರಿಸಿದ ಸಂದರ್ಭದಲ್ಲಿಯೂ ಮೇಲುಗೂ ಸಾಧಿಸಿದೆ. ಈ ಪಂದ್ಯದಲ್ಲಿ ಭರ್ಜರಿ 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಬ್ಲೇರ್ ಟಿಕ್ನರ್
ಬೆಂಚ್: ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಡೇನ್ ಕ್ಲೀವರ್, ಮಾರ್ಟಿನ್ ಗಪ್ಟಿಲ್

ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್,
ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ
ಬೆಂಚ್: ಹಾರಿಸ್ ರೌಫ್, ಉಸ್ಮಾನ್ ಖಾದಿರ್, ಶಾಹೀನ್ ಅಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್

For Quick Alerts
ALLOW NOTIFICATIONS
For Daily Alerts
Story first published: Tuesday, October 11, 2022, 8:35 [IST]
Other articles published on Oct 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X