ಪಾಕ್ ವಿರುದ್ಧದ ಟಿ20ಗೆ ಕಿವೀಸ್ ತಂಡ ಪ್ರಕಟ, ವಿಲಿಯಮ್ಸನ್ ವಾಪಸ್

ವೆಲ್ಲಿಂಗ್ಟನ್: ಪಾಕಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟಗೊಂಡಿದೆ. ಈ ತಂಡದಲ್ಲಿ ರಾಸ್ ಟೇಲರ್ ಅವರನ್ನು ಕೈ ಬಿಡಲಾಗಿದೆ. ಆದರೆ ನಾಯಕ ಕೇನ್ ವಿಲಿಯಮ್ಸನ್ ತಂಡಕ್ಕೆ ವಾಪಸ್ಸಾಗಿದ್ದಾರೆ. ಕಳೆದ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಬಳಿಕ ವಿಶ್ರಾಂತಿಯಲ್ಲಿದ್ದ ಟ್ರೆಂಟ್ ಬೌಲ್ಟ್ ಕೂಡ ಮತ್ತೆ ತಂಡಕ್ಕೆ ಮರಳಿದ್ದಾರೆ.
ಸದ್ಯಕ್ಕೆ ಸ್ಫೋಟಕ ಬ್ಯಾಟ್ಸ್‌ಮನ್ ರಾಸ್ ಟೇಲರ್ ಫಾರ್ಮ್‌ಗಿಂತ ಡೆವೊನ್ ಕಾನ್ವೇ ಮತ್ತು ಗ್ಲೆನ್ ಫಿಲಿಪ್ಸ್ ಫಾರ್ಮ್ ಚೆನ್ನಾಗಿರೋದು ಅವರ ಆಯ್ಕೆಗೆ ಕಾರಣ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಆಯ್ಕೆದಾರ ಗೇವಿನ್ ಲಾರ್ಸೆನ್ ಶನಿವಾರ (ಡಿಸೆಂಬರ್ 12) ಹೇಳಿಕೆ ಮೂಲಕ ತಿಳಿಸಿದ್ದಾರೆ. 3 ಪಂದ್ಯಗಳ ಟಿ20 ಸರಣಿ ಡಿಸೆಂಬರ್ 18, 20 ಮತ್ತು 22ರಂದು ನಡೆಯಲಿದೆ.
1ನೇ ಟಿ20ಐ ಪಂದ್ಯಕ್ಕೆ ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಟಾಡ್ ಆಸ್ಟಲ್, ಡೌಗ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫ್ಫಿ, ಮಾರ್ಟಿನ್ ಗುಪ್ಟಿಲ್, ಸ್ಕಾಟ್ ಕುಗ್ಗೆಲೀಜ್ನ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ, ಬ್ಲೇರ್ ಟಿಕ್ನರ್.
2ನೇ ಮತ್ತು 3ನೇ ಟಿ20ಐಗೆ ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಮಾರ್ಟಿನ್ ಗುಪ್ಟಿಲ್, ಕೈಲ್ ಜೇಮಿಸನ್, ಸ್ಕಾಟ್ ಕುಗ್ಲೆಜೀನ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಟಿಮ್ ಸೀಫರ್ಟ್, ಇಶ್ ಸೋಧಿ, ಟಿಮ್ ಸೌಥಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications