Aus vs NZ: ಏಕದಿನ ಕದನಕ್ಕೆ ಸಜ್ಜಾಗುತ್ತಿದೆ ಎರಡು ಬಲಿಷ್ಠ ತಂಡಗಳು

ಇತ್ತ ಏಷ್ಯಾ ಕಪ್ ಟೂರ್ನಿಯಲ್ಲಿ ಏಷ್ಯಾ ಖಂಡದ ಬಲಾಢ್ಯ ತಂಡಗಳು ಟಿ20 ಮಾದರಿಯಲ್ಲಿ ತಮ್ಮ ಮಧ್ಯೆ ಯಾರು ಬಲಿಷ್ಠರು ಎಂಬ ಕಾದಾಟಕ್ಕೆ ಇಳಿದಿವೆ. ಆದರೆ ಅತ್ತ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಏಕದಿನ ಮಾದರಿಯ ದ್ವಿಪಕ್ಷೀಯ ಸರಣಿಯಲ್ಲಿ ಮುಖಾಮುಖಿಯಾಗುತ್ತಿದೆ. ಟಿ20 ವಿಶ್ವಕಪ್‌ನ ಸನಿಹದಲ್ಲಿರುವಾಗ ಈ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದು ಕಿವೀಸ್ ಪಡೆ ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾಗಿಯಾಗುತ್ತಿದೆ.
ಆಸ್ಟ್ರೇಲಿಯಾದ ಕೈರ್ನ್ಸ್‌ನಲ್ಲಿರುವ ಕೆಜೆಲಿಸ್ ಸ್ಟೇಡಿಯಂನಲ್ಲಿ ಈ ಸರಣಿಯ ಮೂರು ಪಂದ್ಯಗಳು ಕೂಡ ಆಯೋಜನೆಯಾಗಲಿದೆ. ಮಂಗಳವಾರ ಸೆಪ್ಟೆಂಬರ್ 6ರಂದು ಸರಣಿಯ ಮೊದಲ ಪಂದ್ಯ ಆಯೋಜನೆಯಾಗಲಿದ್ದು ಸೆಪ್ಟೆಂಬರ್ 8 ಹಾಗೂ 10ರಂದು ಕೊನೆಯ ಎರಡು ಪಂದ್ಯಗಳು ಆಯೋಜನೆಯಾಗಲಿದೆ.
ಎರಡು ತಂಡಗಳು ಕೂಡ ಪೂರ್ಣ ಸಾಮರ್ಥ್ಯದ ಪಡೆಯೊಂದಿಗೆ ಕಣಕ್ಕಿಳಿಯುತ್ತಿದ್ದು ತೀವ್ರ ಪೈಪೋಟಿಯ ಕದನ ನಡೆಯುವುದು ನಿಶ್ಚಿತ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ಕೂಡ ಬಲಿಷ್ಠವಾಗಿದ್ದು ಜಿದ್ದಾಜಿದ್ದಿನ ಕದನದಲ್ಲಿ ಯಾವ ತಂಡ ಮೇಲುಗೈ ಸಾಧಿಸಲಿದೆ ಎಂಬುದು ಕುತೂಹಲ ಮೂಡಿಸಿದೆ. ಆರೋನ್ ಫಿಂಚ್ ಆಸಿಸ್ ಪಡೆಯ ನಾಯಕತ್ವ ವಹಿಸಿಕೊಂಡರೆ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.
ತಂಡಗಳು: ಆಸ್ಟ್ರೇಲಿಯಾ ತಂಡ: ಆರೋನ್ ಫಿಂಚ್ (ನಾಯಕ), ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್, ಸೀನ್ ಅಬಾಟ್
ನ್ಯೂಜಿಲೆಂಡ್ ತಂಡ: ಮಾರ್ಟಿನ್ ಗಪ್ಟಿಲ್, ಫಿನ್ ಅಲೆನ್, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಮೈಕೆಲ್ ಬ್ರೇಸ್ವೆಲ್, ಬೆನ್ ಸಿಯರ್ಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications