ENG vs NZ: ಇಂಗ್ಲೆಂಡ್ ಸೋಲಿಸಿ ಟೆಸ್ಟ್ ಸರಣಿ ಗೆದ್ದ ನ್ಯೂಜಿಲೆಂಡ್; ತವರಿನಲ್ಲೇ ಇಂಗ್ಲೆಂಡ್‌ಗೆ ಮುಖಭಂಗ!

ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನಾಡಲು ಕಳೆದ 3 ವಾರಗಳ ಹಿಂದೆಯೇ ಇಂಗ್ಲೆಂಡ್ ತಲುಪಿತ್ತು. ಭಾರತದ ವಿರುದ್ಧದ ಈ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನು ಆಡುವ ಮುನ್ನ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿದೆ.

WTC Final: ನ್ಯೂಜಿಲೆಂಡ್‌ನ ಈ ಆಟಗಾರ ಭಾರತಕ್ಕೆ ತಲೆನೋವಾಗಿ ಪರಿಣಮಿಸಲಿದ್ದಾನೆ ಎಂದ ಪನೇಸರ್

ಲಂಡನ್‌ನಲ್ಲಿ ನಡೆದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್ ತಂಡ 8 ವಿಕೆಟ್‍ಗಳಿಂದ ಗೆಲುವು ಸಾಧಿಸುವುದರ ಮೂಲಕ ಸರಣಿಯನ್ನು 1-0 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

WTC Final: ಭಾರತ ತಂಡದ ಈ ಮೂವರಿಂದ ಗೆಲುವು ಖಚಿತ ಎಂದ ವಿರೇಂದ್ರ ಸೆಹ್ವಾಗ್

ಎರಡನೇ ಟೆಸ್ಟ್ ಪಂದ್ಯದ ಮೊದಲನೇ ಇನ್ನಿಂಗ್ಸ್‌ನಲ್ಲಿ ರಾಯ್ ಬರ್ನ್ಸ್ 81, ಲಾರೆನ್ಸ್ ಅಜೇಯ 81 ಹಾಗೂ ಮಾರ್ಕ್ ವುಡ್ 41 ರನ್ ಗಳಿಸಿದ ಕಾರಣ ಇಂಗ್ಲೆಂಡ್ ತಂಡ ಎಲ್ಲಾ ವಿಕೆಟ್‍ಗಳನ್ನು ಕಳೆದುಕೊಂಡು 303 ರನ್ ಗಳಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡದ ಟ್ರೆಂಟ್ ಬೌಲ್ಟ್ 4, ಮ್ಯಾಟ್ ಹೆನ್ರಿ 3 ಹಾಗೂ ಅಜಜ಼್ ಪಟೇಲ್ 2 ವಿಕೆಟ್ ಪಡೆದು ಮಿಂಚಿದರು. ನಂತರ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 388 ರನ್‌ಗಳಿಗೆ ಆಲ್ಔಟ್ ಆಗಿ 85 ರನ್ ಲೀಡ್ ಗಳಿಸಿತು. ಮೊದಲನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ತಂಡದ ಪರ ಸ್ಟುವರ್ಟ್ ಬ್ರಾಡ್ 4, ಮಾರ್ಕ್ ವುಡ್ 2 ಹಾಗೂ ಓಲಿ ಸ್ಟೋನ್ 2 ವಿಕೆಟ್‍ಗಳನ್ನು ಪಡೆದು ಮಿಂಚಿದರು.

ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಆಶ್ಚರ್ಯವನ್ನುಂಟುಮಾಡಿದ ಜಾನ್ ಸೀನಾ

ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡ ನ್ಯೂಜಿಲೆಂಡ್ ಬೌಲಿಂಗ್ ದಾಳಿಗೆ ತತ್ತರಿಸಿತು. ಇಂಗ್ಲೆಂಡ್ ತಂಡದ ಯಾವುದೇ ಬ್ಯಾಟ್ಸ್‌ಮನ್‌ ಕೂಡ 30 ರನ್ ಗಡಿ ದಾಟುವ ಪ್ರಯತ್ನವನ್ನು ಮಾಡಲೇ ಇಲ್ಲ, ಇಂಗ್ಲೆಂಡ್ 122 ರನ್‌ಗಳಿಗೆ ಆಲ್ಔಟ್ ಆಗುವ ಮೂಲಕ ನ್ಯೂಜಿಲೆಂಡ್ ತಂಡಕ್ಕೆ 38 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್ ತಂಡ 2 ವಿಕೆಟ್ ಕಳೆದುಕೊಂಡು 41 ರನ್ ಗಳಿಸುವುದರ ಮೂಲಕ 8 ವಿಕೆಟ್‍ಗಳ ಜಯವನ್ನು ಸಾಧಿಸುವುದರ ಮೂಲಕ ಎರಡನೇ ಪಂದ್ಯವನ್ನು ಗೆದ್ದಿತು ಮತ್ತು ಸರಣಿಯನ್ನು ವಶಪಡಿಸಿಕೊಂಡಿತು. ಎರಡನೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ತಂಡದ ಪರ ಮ್ಯಾಟ್ ಹೆನ್ರಿ 3, ಬೌಲ್ಟ್ 2, ವ್ಯಾಗ್ನರ್ 3 ಹಾಗೂ ಅಜಜ್ ಪಟೇಲ್ 2 ವಿಕೆಟ್ ಪಡೆದರು. ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಮ್ಯಾಟ್ ಹೆನ್ರಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇಬ್ಬರಿಗೆ ಸರಣಿಶ್ರೇಷ್ಠ ಪ್ರಶಸ್ತಿ

ಇಬ್ಬರಿಗೆ ಸರಣಿಶ್ರೇಷ್ಠ ಪ್ರಶಸ್ತಿ

ಮೊದಲನೇ ಇನ್ನಿಂಗ್ಸ್‌ನಲ್ಲಿ ಅಬ್ಬರದ ದ್ವಿಶತಕ ಸಿಡಿಸಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಟಗಾರ ಡಿವೋನ್ ಕಾನ್ವೆ ಮತ್ತು ಇಂಗ್ಲೆಂಡ್ ತಂಡದ ಪರ ಜವಾಬ್ದಾರಿಯುತ ಆಟವಾಡಿದ ರಾಯ್ ಬರ್ನ್ಸ್ ಇಬ್ಬರೂ ಸಹ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬ್ಯಾಟಿಂಗ್‌ನಲ್ಲಿ ಎಡವಿದರೂ ನಾಯಕತ್ವದಲ್ಲಿ ಗೆದ್ದ ಟಾಮ್ ಲಾಥಮ್

ಬ್ಯಾಟಿಂಗ್‌ನಲ್ಲಿ ಎಡವಿದರೂ ನಾಯಕತ್ವದಲ್ಲಿ ಗೆದ್ದ ಟಾಮ್ ಲಾಥಮ್

ಗಾಯದ ಸಮಸ್ಯೆಯಿಂದ ಎರಡನೇ ಟೆಸ್ಟ್ ಪಂದ್ಯದಿಂದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಹೊರಗುಳಿದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದ ನಾಯಕತ್ವವನ್ನು ಟಾಮ್ ಲಾಥಮ್ ವಹಿಸಿಕೊಂಡರು. ಲಾಥಮ್ ಬ್ಯಾಟಿಂಗ್‌ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡದೇ ಇದ್ದರೂ ನಾಯಕನಾಗಿ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಹೀಗಾಗಿಯೇ ಇನ್ನೂ ಒಂದು ದಿನ ಬಾಕಿ ಇರುವಾಗಲೇ ಇಂಗ್ಲೆಂಡ್ ತಂಡವನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಕಡಿಮೆ ರನ್‌ಗಳಿಗೆ ಕಟ್ಟು ಹಾಕಿ ಜಯವನ್ನು ಸಾಧಿಸಿದೆ ನ್ಯೂಜಿಲೆಂಡ್.

ಜೂನ್ 18ರಿಂದ ಶುರುವಾಗುವ ಮಹಾಕಾಳಗಕ್ಕೆ ವಿಶ್ವಾಸ

ಜೂನ್ 18ರಿಂದ ಶುರುವಾಗುವ ಮಹಾಕಾಳಗಕ್ಕೆ ವಿಶ್ವಾಸ

ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದಿರುವ ನ್ಯೂಜಿಲೆಂಡ್ ತಂಡ ಜೂನ್ 18-22ರವರೆಗೆ ಭಾರತ ತಂಡದ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯವನ್ನಾಡಲಿದ್ದು ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವು ನ್ಯೂಜಿಲೆಂಡ್ ಆಟಗಾರರಲ್ಲಿ ವಿಶ್ವಾಸವನ್ನು ಮೂಡಿಸಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Sunday, June 13, 2021, 16:55 [IST]
Other articles published on Jun 13, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X