ಕೊಹ್ಲಿ ವಿಕೆಟ್ ಪಡೆಯುವ ರಹಸ್ಯ ಬಿಚ್ಚಿಟ್ಟ ಟ್ರೆಂಟ್ ಬೋಲ್ಟ್

ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧ ಪದೇ ಪದೆ ಎಡವುತ್ತಿದ್ದಾರೆ. ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 3 ರನ್‌ಗಳಿಗೆ ವಿಕೆಟ್ ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 14 ರನ್‌ಗಳಿಸಲಷ್ಟೇ ಶಕ್ತರಾದರು.
ಈ ವಿಚಾರವಾಗಿ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೋಲ್ಡ್ ಹೇಳಿಕೆಯನ್ನು ನೀಡಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒತ್ತಡದಲ್ಲಿ ತಪ್ಪುಗಳನ್ನು ನೋಡಲು ಖುಷಿಯಾಗುತ್ತದೆ ಎಂಬ ಮಾತನ್ನು ಬೋಲ್ಟ್ ನೀಡಿದ್ದಾರೆ.
ಎರಡನೇ ಇನ್ನಿಂಗ್ಸ್‌ನಲ್ಲಿ ಬೋಲ್ಟ್ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 90 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಇದರಲ್ಲಿ ಟ್ರೆಂಟ್ ಬೋಲ್ಟ್ 3 ವಿಕೆಟ್ ಪಡೆದುಕೊಳ್ಳಯವಲ್ಲಿ ಯಶಸ್ವಿಯಾಗಿದ್ದಾರೆ.
ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಲು ನ್ಯೂಜಿಲೆಂಡ್ ಬೌಲರ್‌ಗಳು ಯಶಸ್ವಿಯಾಗಿದ್ದಾರೆ. ಈ ವಿಚಾರವಾಗಿ ಕಿವೀಸ್ ಅನುಭವಿ ವೇಗಿ ಬೋಲ್ಟ್ ಅವರು ಕೊಹ್ಲಿ ಶ್ರೇಷ್ಟ ಆಟಗಾರ, ಆತನನ್ನು ಒತ್ತಡದಲ್ಲಿ ಸಿಲುಕಿಸಿ ಔಟ್ ಮಾಡಲು ಯಶಸ್ವಿಯಾಗುತ್ತಿದ್ದೇವೆ ಎಂದಿದ್ದಾರೆ.
ಬೌಂಡರಿಗೆ ಬಾಲ್ ಹೋಗದಂತೆ ನೋಡಿಕೊಳ್ಳುವ ಮೂಲಕ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಮೇಲೆ ಒತ್ತಡವನ್ನು ಹೇರುತ್ತೇವೆ ಎಂಬ ಸೀಕ್ರೆಟನ್ನು ನ್ಯೂಜಿಲೆಂಡ್ ತಂಡದ ಅನುಭವಿ ಬೌಲರ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಈ ಮೂಲಕ ಕೊಹ್ಲಿಯನ್ನು ಯಾವ ರೀತಿ ಔಟ್ ಮಾಡಲು ರಣತಂತ್ರ ಹೆಣೆಯಲಾಗಿದೆ ಎಂದು ಕೊಹ್ಲಿ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications