Nicholas Pooran: ರೋಹಿತ್-ಕೊಹ್ಲಿ ಮಾಡಲಾಗದ ದಾಖಲೆ ಸೃಷ್ಟಿಸಿದ ಪೂರನ್
ವೆಸ್ಟ್ ಇಂಡೀಸ್‌ನ ಎಡಗೈ ಸ್ಟಾರ್ ಬ್ಯಾಟರ್ ನಿಕೋಲಸ್ ಪೂರನ್ ಟಿ20 ಕ್ರಿಕೆಟ್‌ನಲ್ಲಿ ಇತಿಹಾಸ ಬರೆದಿದ್ದಾರೆ. ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.
2024ರ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪೂರನ್ ಈ ಮೈಲಿಗಲ್ಲು ಸಾಧಿಸಿದ್ದಾರೆ. ಟ್ರಿನ್‌ಬಾಗೊ ನೈಟ್ ರೈಡರ್ಸ್ ಪರ ಆಡುತ್ತಿರುವ ಅವರು, ಎಸ್‌ಕೆಎನ್ ಪೇಟ್ರಿಯಾಟ್ಸ್ ವಿರುದ್ಧ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಅವರು ಅಜೇಯ 93 ರನ್‌ಗಳ ಬಾರಿಸಿದರು. ಈ ಇನ್ನಿಂಗ್ಸ್‌ನಲ್ಲಿ ಅವರು ಬರೋಬ್ಬರಿ 7 ಸಿಕ್ಸರ್‌ಗಳನ್ನು ಚಚ್ಚಿದರು.

ಈ ಭರ್ಜರಿ ಇನ್ನಿಂಗ್ಸ್ ಮೂಲಕ ಪೂರನ್ ತಮ್ಮದೇ ದೇಶದ ಮಾಜಿ ಸ್ಫೋಟಕ ಬ್ಯಾಟರ್ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದೊಡ್ಡ ದಾಖಲೆಯನ್ನು ಮುರಿದಿದ್ದಾರೆ. ಇದೀಗ ಅವರು ಒಂದು ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಒಂದು ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ 150 ಸಿಕ್ಸರ್ ಬಾರಿಸುವ ಮೂಲಕ ಮಾಡಿರುವ ಪೂರನ್ ದಾಖಲೆಯನ್ನು ವಿಶ್ವದ ಯಾವುದೇ ಬ್ಯಾಟರ್‌ಗಳು ಇಲ್ಲಿಯವರೆಗೆ ಸಾಧನೆ ಮಾಡಲು ಸಾಧ್ಯವಾಗಿಲ್ಲ.
ಒಂದು ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ಕ್ರಿಸ್ ಗೇಲ್ ಹೊಂದಿದ್ದು, 2015ರ ಕ್ಯಾಲೆಂಡರ್ ವರ್ಷದಲ್ಲಿ ಗೇಲ್ 135 ಸಿಕ್ಸರ್ ಸಿಡಿಸಿದ್ದಾರೆ. ಇದೀಗ 9 ವರ್ಷಗಳ ನಂತರ ನಿಕೋಲಸ್ ಪೂರನ್ ಒಂದು ವರ್ಷದೊಳಗೆ ಟಿ20 ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಪೂರನ್ ವಿಶ್ವ ಹಲವು ಕಡೆ ನಡೆಯುವ ಟಿ20 ಲೀಗ್‌ಗಳಲ್ಲಿ ಆಡುತ್ತಿದ್ದಾರೆ. ಹಲವು ವರ್ಷಗಳಿಂದ ಐಪಿಎಲ್‌ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಸ್ಟಾರ್ ಆಟಗಾರರು ಕೂಡ ಒಂದೇ ವರ್ಷದಲ್ಲಿ 150 ಸಿಕ್ಸರ್‌ಗಳನ್ನು ಬಾರಿಸಲು ಸಾಧ್ಯವಾಗಲಿಲ್ಲ.
2024ರ ಕೆರಿಬಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಟ್ರಿನ್‌ಬಾಗೊ ನೈಟ್ ರೈಡರ್ಸ್ ಮತ್ತು ಎಸ್‌ಕೆಎನ್ ಪೇಟ್ರಿಯಾಟ್ಸ್ ನಡುವಿನ ಪಂದ್ಯ ಕುತೂಹಲ ಮೂಡಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಎಸ್‌ಕೆಎನ್ ಪೇಟ್ರಿಯಾಟ್ಸ್ ನಿಗದಿತ 20 ಓವರ್‌ಗಳಲ್ಲಿ 193 ರನ್ ಗಳಿಸಿತು. ಕೈಲ್ ಮೈಯರ್ಸ್ 60 ರನ್‌ಗಳ ಇನಿಂಗ್ಸ್ ಆಡಿದರು. ಈ ಗುರಿಯನ್ನು ಬೆನ್ನಟ್ಟಿದ ಟ್ರಿನ್‌ಬಾಗೊ ನೈಟ್ ರೈಡರ್ಸ್ 46 ಎಸೆತಗಳಲ್ಲಿ 19.3 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ನಿಕೋಲಸ್ ಪೂರನ್ ಸಿಡಿಸಿದ ಅಜೇಯ 93 ರನ್‌ಗಳ ನೆರವಿನಿಂದ ಪಂದ್ಯವನ್ನು ಗೆಲ್ಲಲು ಸಾಧ್ಯವಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications