For Quick Alerts
ALLOW NOTIFICATIONS  
For Daily Alerts
 

IPL MVP: ಕೆಕೆಆರ್ ಬೌಲರ್‌ಗಳಿಗೆ ಹಿಗ್ಗಾಮುಗ್ಗಾ ಹೊಡೆದ ಪೂರನ್

ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ರೋಚಕ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಲಕ್ನೋ ಸೂಪರ್ ಜೆಂಟ್ಸ್ 4 ರನ್‌ಗಳಿಂದ ಸೋಲಿಸಿತು. ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಕೆಕೆಆರ್‌ನ ಬೌಲರ್‌ಗಳು ಎಲ್‌ಎಸ್‌ಜಿ ಬ್ಯಾಟರ್‌ಗಳನ್ನು ನಿಯಂತ್ರಿಸಲು ಹೆಣಗಾಡಿದರು. ಲಕ್ನೋ ಪರ ವಿದೇಶಿ ಬ್ಯಾಟರ್‌ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಸುಡುವ ಬಿಸಿಲಿನಲ್ಲಿ ಕೆಕೆಆರ್ ಬೌಲರ್‌ಗಳನ್ನು ಎಲ್‌ಎಸ್‌ಜಿ ಬ್ಯಾಟರ್‌ಗಳು ಬೆಂಡೆತ್ತಿದರು.

ಲಕ್ನೋ ವಿರುದ್ಧ ಕೆಕೆಆರ್ ವೇಗಿ ಹರ್ಷಿತ್ ರಾಣಾ ಎರಡು ವಿಕೆಟ್‌ಗಳೊಂದಿಗೆ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡರೂ, ನಾಲ್ಕು ಓವರ್‌ಗಳಲ್ಲಿ 51 ರನ್‌ಗಳನ್ನು ಬಿಟ್ಟುಕೊಟ್ಟು ದುಬಾರಿಯಾದರು. ಸುನಿಲ್ ನರೈನ್ ಮತ್ತು ವರುಣ್ ಚಕ್ರವರ್ತಿ ತಮ್ಮ ಸ್ಪಿನ್‌ ಬೌಲಿಂಗ್ ಮೂಲಕ ವಿಶೇಷವಾದುದ್ದನ್ನು ಮಾಡಲು ಸಾಧ್ಯವಾಗಲಿಲ್ಲ. ಈ ಇಬ್ಬರೂ ಕೂಡ ವಿಕೆಟ್ ಪಡೆಯದೆ ಹೆಚ್ಚು ರನ್‌ಗಳನ್ನು ನೀಡಿದರು.

Nicholas Pooran won the MVP award in Kolkata Knight Riders vs Lucknow Supergiants IPL 2025 match

ಎಲ್‌ಎಸ್‌ಜಿ ಬ್ಯಾಟರ್‌ಗಳು ಕೆಕೆಆರ್‌ನ ಬೌಲರ್‌ಗಳು ಪಂದ್ಯದ ಮೇಲೆ ಪ್ರಾಬಲ್ಯ ಸಾಧಿಸದಂತೆ ನೋಡಿಕೊಂಡರು. ಅಷ್ಟರ ಮಟ್ಟಿಗೆ ಎಲ್‌ಎಸ್‌ಜಿ ಬ್ಯಾಟರ್‌ಗಳು ಈಡನ್ ಗಾರ್ಡನ್ಸ್‌ ಮೈದಾನದಲ್ಲಿ ಅಬ್ಬರಿಸಿದರು. ಅದರಲ್ಲೂ ಸ್ಪೋಟಕ ಬ್ಯಾಟರ್ ನಿಕೋಲಸ್ ಪೂರನ್ ಬ್ಯಾಟಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಇದಕ್ಕಾಗಿ ಅವರಿಗೆ ಅತ್ಯುತ್ತಮ ಆಟಗಾರ ಪ್ರಶಸ್ತಿ ಕೂಡ ಸಿಕ್ಕತು.

ಈಡನ್ ಗಾರ್ಡನ್ಸ್‌ನಲ್ಲಿ ಪೂರನ್ ಬಿರುಗಾಳಿಯ ಇನ್ನಿಂಗ್ಸ್ ಆಡಿದರು. ಅವರು 21 ಎಸೆತಗಳಲ್ಲಿ 2 ಬೌಂಡರಿ ಮತ್ತು 6 ಸಿಕ್ಸರ್‌ಗಳೊಂದಿಗೆ 50 ರನ್ ಗಳಿಸಿ ಅರ್ಧಶತಕ ಗಳಿಸಿದರು. ಈ ಮೂಲಕ ಹಲವು ದಾಖಲೆ ಸೃಷ್ಟಿಸಿದರು. ಈ ಪಂದ್ಯದಲ್ಲಿ, ಪೂರನ್ ಒಟ್ಟು 36 ಎಸೆತಗಳಲ್ಲಿ 7 ಬೌಂಡರಿ ಮತ್ತು 8 ಸಿಕ್ಸರ್‌ಗಳೊಂದಿಗೆ 87 ರನ್ ಗಳಿಸಿ ಅಜೇಯರಾಗುಳಿದರು. ಈ ಮೂಲಕ ಅವರು ಲಕ್ನೋ ತಂಡದ ಅಗ್ರ ಸ್ಕೋರರ್ ಎನಿಸಿಕೊಂಡರು. ಇದಲ್ಲದೆ, ಲಕ್ನೋ ತಂಡ 230 ರನ್‌ಗಳ ಗಡಿ ದಾಟಲು ನೆರವಾದರು.

Story first published: Tuesday, April 8, 2025, 22:32 [IST]
Other articles published on Apr 8, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+