ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯಗೆ ಪೈಪೋಟಿ ನೀಡಲು ಬಂದ ಯುವ ಆಲ್‌ರೌಂಡರ್
ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ ಬಳಿಕ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಲು ಆಟಗಾರರ ನಡುವೆ ಪೈಪೋಟಿ ಹೆಚ್ಚಾಗಿದೆ. ಬಹಳ ಸಮಯದ ನಂತರ, ಹಾರ್ದಿಕ್ ಪಾಂಡ್ಯ ಅವರಿಗೆ ಪೈಪೋಟಿ ನೀಡಲು ಟೀಮ್ ಇಂಡಿಯಾಕ್ಕೆ ವೇಗದ ಬೌಲಿಂಗ್ ಆಲ್‌ರೌಂಡರ್ ಬಂದಿದ್ದಾರೆ.
ಈ ಆಲ್‌ರೌಂಡರ್ ತನ್ನ ಎರಡನೇ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್‌ನಿಂದ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕೋಟ್ಯಂತರ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಈ ಆಲ್‌ರೌಂಡರ್ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬುಧವಾರದಂದು ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸಿದೆ. ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದ್ದು, ಸರಣಿಯನ್ನು ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಯುವ ಆಲ್‌ರೌಂಡರ್ 'ಮ್ಯಾನ್ ಆಫ್ ದಿ ಮ್ಯಾಚ್' ಪ್ರಶಸ್ತಿ ಗೆದ್ದಿದ್ದಾರೆ. ಇದರೊಂದಿಗೆ ಹಾರ್ದಿಕ್ ಪಾಂಡ್ಯ ಅವರಿಗೆ ಪೈಪೋಟಿ ನೀಡಲು ಸಜ್ಜಾಗುತ್ತಿದ್ದಾರೆ.
ಪಾಂಡ್ಯ ಜೊತೆ ಪೈಪೋಟಿ
21 ವರ್ಷದ ವೇಗದ ಬೌಲಿಂಗ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ತಮ್ಮ ಎರಡನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎಲ್ಲರ ಮನ ಗೆದ್ದಿದ್ದಾರೆ. ಬಾಂಗ್ಲಾದೇಶ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದರು ಅವರು ಕೇವಲ 34 ಎಸೆತಗಳಲ್ಲಿ 4 ಬೌಂಡರಿ ಮತ್ತು 7 ಸಿಕ್ಸರ್‌ಗಳ ನೆರವಿನಿಂದ 217.65 ಸ್ಟ್ರೈಕ್ ರೇಟ್‌ನಲ್ಲಿ 74 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಅಷ್ಟೇ ಅಲ್ಲ ಬೌಲಿಂಗ್‌ನಲ್ಲೂ ಅವರು ಮಿಂಚಿದ್ದಾರೆ. ತಮ್ಮ ಕೋಟಾದ 4 ಓವರ್‌ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.
ಇದೀಗ ನಿತೀಶ್ ಕುಮಾರ್ ರೆಡ್ಡಿ ಆಟವನ್ನು ಸ್ಟಾರ್ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರೊಂದಿಗೆ ಹೋಲಿಕೆ ಮಾಡಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಅವರಿಗೆ ಪೈಪೋಟಿ ನೀಡಲು ನಿತೀಶ್ ಕುಮಾರ್ ರೆಡ್ಡಿ ತಯಾರಾಗುತ್ತಿದ್ದಾರೆ. ಭಾರತ ಟಾಪ್ ಆರ್ಡರ್ ಬ್ಯಾಟರ್‌ಗಳ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಕ್ರೀಸ್‌ಗೆ ಬಂದ ನಿತೀಶ್ ಕುಮಾರ್ ರೆಡ್ಡಿ ಜಬಾವ್ದಾರಿಯುತ ಆಟವಾಡಿದರು. ಈ ಆಟ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಶೈಲಿಯನ್ನು ನೆನಪಿಸಿದೆ.
ಅಕ್ಟೋಬರ್ 6ರಂದು ಗ್ವಾಲಿಯರ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ಟೀಮ್ ಇಂಡಿಯಾ ಪರ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಪ್ರಾರಂಭಿಸಿದರು. ಈ ಪಂದ್ಯದಲ್ಲಿ ಅವರಿಗೆ ವಿಶೇಷವಾದುದ್ದನ್ನು ಮಾಡಲು ಸಾಧ್ಯವಾಗಲಿಲ್ಲ. ಅವರು 15 ಎಸೆತಗಳಲ್ಲಿ 16 ರನ್‌ಗಳ ನಿಧಾನಗತಿಯ ಇನ್ನಿಂಗ್ಸ್ ಆಡಿದ್ದರು. ಬೌಲಿಂಗ್‌ನಲ್ಲಿಯೂ ಅವರು ಯಾವುದೇ ವಿಕೆಟ್ ಪಡೆದಿರಲಿಲ್ಲ. ಆದರೆ, ಎರಡನೇ ಟಿ20 ಪಂದ್ಯದಲ್ಲಿ ನಿತೀಶ್ ಕುಮಾರ್ ರೆಡ್ಡಿ ತಾನೊಬ್ಬ ವಿಶೇಷ ಪ್ರತಿಭೆ ಎಂಬುದನ್ನು ವಿಶ್ವ ಕ್ರಿಕೆಟ್‌ಗೆ ತೋರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications