IND vs SA Test: ಮೊದಲ ಟೆಸ್ಟ್‌ನಿಂದ ಸ್ಟಾರ್ ಪ್ಲೇಯರ್ ಹೊರಕ್ಕೆ
ಭಾರತ ಹಾಗೂ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಈ ಟೆಸ್ಟ್ ಆರಂಭಕ್ಕೂ ಮುನ್ನವೇ ಭಾರತ ತಂಡದ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಭಾರತೀಯ ತಂಡದಿಂದ ಕೈ ಬಿಡಲಾಗಿದೆ. ನಿತೀಶ್ ಕುಮಾರ್ ಅವರನ್ನು ಕೈ ಬಿಟ್ಟ ಬಗ್ಗೆ ಕಾರಣಗಳನ್ನು ತಿಳಿಸಿದೆ.
ವರದಿಗಳ ಪ್ರಕಾರ ನವೆಂಬರ್ 13 ರ ಗುರುವಾರ ರಾಜ್‌ಕೋಟ್‌ನಲ್ಲಿ ಆರಂಭವಾಗಲಿರುವ ಭಾರತ "ಎ" ಹಾಗೂ ದಕ್ಷಿಣ ಆಫ್ರಿಕಾ "ಎ" ಏಕದಿನ ಪಂದ್ಯಗಳಲ್ಲಿ ನಿತೀಶ್ ಕುಮಾರ್ ಆಡಲಿದ್ದಾರೆ. ಹೀಗಾಗಿ ಇವರು ಮೊದಲ ಟೆಸ್ಟ್ ಪಂದ್ಯದಲ್ಲಿ ನಿತೀಶ್ ಕುಮಾರ್ ಮೈದಾನಕ್ಕೆ ಇಳಿಯಲು ಸಾಧ್ಯವಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಭಾರತ "ಎ" ಹಾಗೂ ದಕ್ಷಿಣ ಆಫ್ರಿಕಾ "ಎ" ಏಕದಿನ ಸರಣಿ ಮುಗಿದ ಬಳಿಕ ನಿತೀಶ್ ಕುಮಾರ್ ರೆಡ್ಡಿ ಮತ್ತೆ ಭಾರತ ಟೆಸ್ಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ.

ನಿತೀಶ್ ಕುಮಾರ್ ರೆಡ್ಡಿ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುತ್ತಿದ್ದಂತೆ, ಕೋಲ್ಕತ್ತಾದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಇಬ್ಬರು ವಿಕೆಟ್ ಕೀಪರ್‌ಗಳು ಕಣಕ್ಕೆ ಇಳಿಯಬಹುದು. ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಪಾದದ ಗಾಯಕ್ಕೆ ತುತ್ತಾಗಿದ್ದ ರಿಷಭ್ ಪಂತ್ ಚೇತರಿಸಿಕೊಂಡಿದ್ದು, ಮೊದಲ ಟೆಸ್ಟ್‌ನಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾ "ಎ" ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಫಲವಾಗಿ ಇವರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ.
ಭಾರತ "ಎ" ಸೇರಿದ ನಿತೀಶ್ ಕುಮಾರ್
ನ.12 ರಂದು ಬುಧವಾರ ಟೀಮ್ ಇಂಡಿಯಾ ಅಭ್ಯಾಸವನ್ನು ಆರಂಭಿಸಿದ್ದಾರೆ. ಈ ವೇಳೆ ಜಸ್ಪ್ರೀತ್ ಬುಮ್ರಾ, ನಿತೀಶ್ ರೆಡ್ಡಿ, ಮೊಹಮ್ಮದ್ ಸಿರಾಜ್ ಅವರೊಂದಿಗೆ ಬೌಲಿಂಗ್ ಮಾಡುತ್ತಿದ್ದರು. ಆದರೂ ಸಹ ಬಿಸಿಸಿಐ ಇವರನ್ನು ತಂಡದಿಂದ ಬಿಡುಗಡೆ ಮಾಡಿದ ಬಳಿಕ ಅವರನ್ನು ರಾಜಕೋಟ್‌ಗೆ ತೆರಳಿದರು. ವಿಂಡೀಸ್ ಪರ ಎರಡನೇ ಟೆಸ್ಟ್‌ನಲ್ಲಿ ಆಡಿದ್ದ ನಿತೀಶ್ ಕುಮಾರ್ 4 ಓವರ್ ಬೌಲಿಂಗ್ ಮಾಡಿದ್ದು ವಿಕೆಟ್ ಪಡೆಯುವಲ್ಲಿ ವಿಫಲರಾಗಿದ್ದರು. ಇನ್ನು ಬ್ಯಾಟಿಂಗ್‌ನಲ್ಲಿ 43 ರನ್ ಸಿಡಿಸಿದ್ದರು. ಅಲ್ಲದೆ ಆಸೀಸ್ ವಿರುದ್ಧದ ಏಕದಿನ ಸರಣಿಯಲ್ಲಿ 19, 8 ರನ್ ಸಿಡಿಸಿದ್ದರು.

ಮೊದಲ ಟೆಸ್ಟ್‌ಗೆ ಭಾರತದ ತಂಡ: ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್ (ವಿಕೆಟ್ ಕೀಪರ್, ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ಆಕಾಶ್ ದೀಪ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications