For Quick Alerts
ALLOW NOTIFICATIONS  
For Daily Alerts
 

ತಮ್ಮ ನೆಚ್ಚಿನ ಬ್ಯಾಟಿಂಗ್ ಕ್ರಮಾಂಕ ಬಹಿರಂಗಪಡಿಸಿದ ಶ್ರೇಯಸ್ ಐಯ್ಯರ್

No.3 is my favourite batting position says Sheyas Iyer

ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ಟಿ ಟ್ವೆಂಟಿ ಹಾಗೂ ಟೆಸ್ಟ್ ಸರಣಿಗಳಲ್ಲಿ ಟೀಮ್ ಇಂಡಿಯಾ ವಿರುದ್ಧ ಕಣಕ್ಕಿಳಿಯುತ್ತಿದೆ. ಇತ್ತ ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಹಾಗೂ ಟಿ ಟ್ವೆಂಟಿ ಎರಡೂ ಸರಣಿಗಳಲ್ಲಿಯೂ ಕೂಡ ವೈಟ್ ವಾಷ್ ಸಾಧನೆ ಮಾಡಿರುವ ಟೀಂ ಇಂಡಿಯಾ ಸದ್ಯ ಭಾರತ ಪ್ರವಾಸವನ್ನು ಕೈಗೊಂಡಿರುವ ಶ್ರೀಲಂಕಾ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿದೆ. ವೆಸ್ಟ್ ಇಂಡೀಸ್ ವಿರುದ್ಧ ಸಾಲು ಸಾಲು ಗೆಲುವುಗಳನ್ನು ಸಾಧಿಸಿರುವ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ ಮೊದಲಿಗೆ 3 ಪಂದ್ಯಗಳ ಟ್ವೆಂಟಿ ಸರಣಿಯಲ್ಲಿ ಸೆಣಸಾಟವನ್ನು ನಡೆಸುತ್ತಿದ್ದು, ಈ ಸರಣಿಯಲ್ಲಿಯೂ ಕೂಡ ಸಾಲು ಸಾಲು ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ.

ಹೌದು, ಶ್ರೀಲಂಕಾ ವಿರುದ್ಧದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ 62 ರನ್‌ಗಳ ಭರ್ಜರಿ ಜಯ ಸಾಧಿಸಿದ್ದ ಟೀಮ್ ಇಂಡಿಯಾ ಫೆಬ್ರವರಿ 26ರಂದು ಧರ್ಮಶಾಲಾ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ 7 ವಿಕೆಟ್‍ಗಳ ಭರ್ಜರಿ ಜಯ ಸಾಧಿಸಿತು. ಹೀಗೆ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲೆರಡು ಟಿ ಟ್ವೆಂಟಿ ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದ ಟೀಮ್ ಇಂಡಿಯಾ ಫೆಬ್ರವರಿ 27ರಂದು ನಡೆದ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿಯೂ ಸಹ ಜಯ ಸಾಧಿಸಿದೆ.

ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವಿನ ಅಂತಿಮ ಟಿ ಟ್ವೆಂಟಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಶ್ರೀಲಂಕಾ ತಂಡ ನಾಯಕ ದಸುನ್ ಶನಕ 38 ಎಸೆತಗಳಲ್ಲಿ ಅಜೇಯ 74 ರನ್ ಬಾರಿಸುವುದರ ಮೂಲಕ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 146 ರನ್ ಕಲೆಹಾಕಿತು. ಶ್ರೀಲಂಕಾ ನೀಡಿದ 147 ರನ್‌ಗಳ ಗುರಿಯನ್ನು ಬೆನ್ನತ್ತಿದ ಭಾರತ ತಂಡಕ್ಕೆ ಶ್ರೇಯಸ್ ಐಯ್ಯರ್ 45 ಎಸೆತಗಳಿಗೆ ಅಜೇಯ 73 ರನ್ ಬಾರಿಸಿ ಆಸರೆಯಾದರು. ಶ್ರೇಯಸ್ ಐಯ್ಯರ್ ಅಬ್ಬರದಿಂದ ಟೀಮ್ ಇಂಡಿಯಾ 16.5 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಬಾರಿಸಿ ಇನ್ನೂ 19 ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ಕೇಕೆ ಹಾಕಿತು. ಹೀಗೆ ಶ್ರೀಲಂಕಾ ವಿರುದ್ಧದ ತೃತೀಯ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿದ ಶ್ರೇಯಸ್ ಐಯ್ಯರ್ ಇದಕ್ಕೂ ಮುನ್ನ ನಡೆದಿದ್ದ ಪ್ರಥಮ ಹಾಗೂ ದ್ವಿತೀಯ ಟಿ ಟ್ವೆಂಟಿ ಪಂದ್ಯಗಳಲ್ಲಿಯೂ ಸಹ ಅರ್ಧಶತಕಗಳನ್ನು ಬಾರಿಸಿದ್ದರು. ಹೀಗೆ ಶ್ರೀಲಂಕಾ ವಿರುದ್ಧದ ಈ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಒಟ್ಟು 204 ರನ್ ಕಲೆಹಾಕಿದ ಶ್ರೇಯಸ್ ಐಯ್ಯರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಹೀಗೆ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಶ್ರೇಯಸ್ ಐಯ್ಯರ್ ಪಂದ್ಯ ಮುಗಿದ ನಂತರ ಮಾತನಾಡಿದ್ದು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ತನಗೆ ಬಲು ಇಷ್ಟ ಎಂದಿದ್ದಾರೆ. ಮಧ್ಯಮ ಕ್ರಮಾಂಕ ಅಥವಾ ಕೆಳ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿ ಕಣಕ್ಕಿಳಿದರೆ ನೆಲಕಚ್ಚಿ ನಿಲ್ಲಲು ಹೆಚ್ಚಿನ ಸಮಯ ಸಿಗುವುದಿಲ್ಲ ಎಂದಿರುವ ಶ್ರೇಯಸ್ ಅಯ್ಯರ್ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುವುದು ತನಗೆ ವೈಯಕ್ತಿಕವಾಗಿ ಇಷ್ಟ ಎಂದು ಹೇಳಿಕೆ ನೀಡಿದ್ದಾರೆ.

Story first published: Monday, February 28, 2022, 20:48 [IST]
Other articles published on Feb 28, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+