ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ವಿಂಡೀಸ್, ಆಸೀಸ್ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟ, ಧೋನಿ ಔಟ್!

INDIA v/s WEST INDIES :ಟಿ 20 ಪಂದ್ಯವಾಳಿಗೆ ಭಾರತ ತಂಡ ಪ್ರಕಟ | Oneindia Kannada
No Ms Dhoni for T20i against West Indies and Australia

ಮುಂಬೈ, ಅಕ್ಟೋಬರ್ 26: ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿಲ್ಲ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಅವರು ಪ್ರಕಟಿಸಿದ ತಂಡಕ್ಕೆ ರೋಹಿತ್ ಶರ್ಮ ನಾಯಕರಾಗಿದ್ದಾರೆ.

ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ 3 ಟಿ20ಐ ಪದ್ಯಗಳನ್ನಾಡಲಿದೆ.

ಆಸ್ಟ್ರೇಲಿಯಾಕ್ಕೂ ಧೋನಿ ಇಲ್ಲ: ನಂತರ ನವೆಂಬರ್ 21ರಂದು ಬ್ರಿಸ್ಬೇನ್ ನ ಗಬ್ಬಾದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಟಿ20 ಸರಣಿ ಆರಂಭವಾಗಲಿದೆ. ಈ ಸರಣಿಗೆ ಕೊಹ್ಲಿ ಮರಳಲಿದ್ದಾರೆ. ಆದರೆ, ಧೋನಿಯನ್ನು ಈ ಸರಣಿಗೂ ಆಯ್ಕೆಗೆ ಪರಿಗಣಿಸಲಾಗಿಲ್ಲ. ಈ ಮೂಲಕ ಧೋನಿ ಅವರ ಟಿ20 ವೃತ್ತಿ ಬದುಕಿಗೆ ಫುಲ್ ಸ್ಟಾಪ್ ಇಡಲು ಬಿಸಿಸಿಐ ಯತ್ನಿಸುತ್ತಿದೆಯೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಉಳಿದಂತೆ, ರಿಷಬ್ ಪಂತ್ ವಿಕೆಟ್ ಕೀಪರ್ ಆಗಿದ್ದರೆ, ದಿನೇಶ್ ಕಾರ್ತಿಕ್ ಬದಲಿ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್ ಮನ್ ಆಗಿ ತಂಡದಲ್ಲಿದ್ದಾರೆ. ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದಿಂದ ಗುಣಮುಖರಾಗದ ಕಾರಣ ತಂಡಕ್ಕೆ ಆಯ್ಕೆಯಾಗಿಲ್ಲ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ, ರೋಹಿತ್ ಇನ್ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ, ರೋಹಿತ್ ಇನ್

ಎಡಗೈ ಸ್ಪಿನ್ನರ್ ಶಾಬಾದ್ ನದೀಂ ಹಾಗೂ ವೇಗಿ ಖಲೀಲ್ ಅಹ್ಮದ್ ಅವರು ಟಿ20ಐ ತಂಡದಲ್ಲಿ ಹೊಸ ಮುಖಗಳಾಗಿದ್ದರೆ, ವಾಷಿಂಗ್ಟನ್ ಸುಂದರ್, ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದಿದ್ದಾರೆ.

ಸುರೇಶ್ ರೈನಾ, ಸಿದ್ದಾರ್ಥ್ ಕೌಲ್ ತಂಡಕ್ಕೆ ಆಯ್ಕೆಯಾಗುವಲ್ಲಿ ವಿಫಲರಾಗಿದ್ದಾರೆ. ಮಯಾಂಕ್ ಅಗರವಾಲ್ ಆಯ್ಕೆ ಬಗ್ಗೆ ಸುದ್ದಿಯೇ ಇಲ್ಲ. ದೀಪಕ್ ಚಾಹರ್ ಆಯ್ಕೆಗೆ ಪರಿಗಣಿಸಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧ ಟಿ20ಐ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮ (ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಖಲೀಲ್ ಅಹ್ಮದ್, ಉಮೇಶ್ ಯಾದವ್, ಶಾಬಾಜ್ ನದೀಂ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮ (ಉಪ ನಾಯಕ), ಶಿಖರ್ ಧವನ್, ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಖಲೀಲ್ ಅಹ್ಮದ್, ಉಮೇಶ್ ಯಾದವ್.

Story first published: Saturday, October 27, 2018, 1:01 [IST]
Other articles published on Oct 27, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X