ಗಂಗೂಲಿ ಜೊತೆ ಕೊಹ್ಲಿಯನ್ನು ಹೋಲಿಕೆ ಮಾಡುವವರಿಗೆ ಸರಿಯಾದ ಉತ್ತರ ಕೊಟ್ಟ ಅಗರ್ಕರ್

ಸದ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮಳೆಯ ಆಗಮನದಿಂದಾಗಿ ಯಾವುದೇ ಫಲಿತಾಂಶ ಸಿಗದೇ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು.
ತದನಂತರ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಡೆ ಇಂಗ್ಲೆಂಡ್ ವಿರುದ್ಧ 151 ರನ್‌ಗಳ ಗೆಲುವನ್ನು ಸಾಧಿಸುವುದರ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆಯನ್ನು ಕಾಯ್ದುಕೊಂಡಿದೆ.
ಹೀಗೆ ಲಾರ್ಡ್ಸ್ ಅಂಗಳದಲ್ಲಿ ವಿರಾಟ್ ಕೊಹ್ಲಿ ಪಡೆ ಇಂಗ್ಲೆಂಡ್ ತಂಡವನ್ನು ಸದೆ ಬಡಿಯುವುದರ ಮೂಲಕ ಭರ್ಜರಿ ಗೆಲುವು ಸಾಧಿಸಿ ಹೊಸ ಮೈಲಿಗಲ್ಲನ್ನು ನಿರ್ಮಿಸಿತು. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಕೆಲ ಆಟಗಾರರು ಮತ್ತು ಭಾರತ ತಂಡದ ಕೆಲವು ಆಟಗಾರರ ನಡುವೆ ಆಗಾಗ ಮಾತಿನ ಚಕಮಕಿಗಳು ನಡೆಯುತ್ತಲೇ ಇದ್ದವು. ಎರಡೂ ತಂಡಗಳ ಆಟಗಾರರ ನಡುವಿನ ಮಾತಿನ ಚಕಮಕಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಭಾಗಿಯಾಗಿದ್ದರು. ಅದರಲ್ಲಿಯೂ ಜೇಮ್ಸ್ ಆ್ಯಂಡರ್ಸನ್ ಜೊತೆ ತುಸು ಹೆಚ್ಚಾಗಿಯೇ ವಾಕ್ಸಮರ ನಡೆಸಿದ ವಿರಾಟ್ ಕೊಹ್ಲಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪರ ಮತ್ತು ವಿರೋಧ ಎರಡೂ ಸಹ ವ್ಯಕ್ತವಾದವು.
ಹೀಗೆ ಲಾರ್ಡ್ಸ್ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಕೋಪದಿಂದ ವರ್ತಿಸುತ್ತಾ ಇಂಗ್ಲೆಂಡ್ ಆಟಗಾರರ ವಿರುದ್ಧ ಕಿಡಿಕಾರಿದ್ದ ವಿರಾಟ್ ಕೊಹ್ಲಿಯನ್ನು ಕೆಲ ಕ್ರೀಡಾಭಿಮಾನಿಗಳು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿಗೆ ಹೋಲಿಕೆ ಮಾಡಿದ್ದರು. ಮೈದಾನದಲ್ಲಿ ಎದುರಾಳಿ ಆಟಗಾರರು ಕೆಣಕಿದಾಗ ಕೋಪದಿಂದ ವರ್ತಿಸುವ ವಿಷಯದಲ್ಲಿ ವಿರಾಟ್ ಕೊಹ್ಲಿ ಸೌರವ್ ಗಂಗೂಲಿ ಅವರನ್ನು ಹೋಲುತ್ತಾರೆ ಎಂದು ಕ್ರೀಡಾಭಿಮಾನಿಗಳು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಈ ವಿಷಯ ಇದೀಗ ಭಾರತದ ಮಾಜಿ ವೇಗಿ ಅಜಿತ್ ಅಗರ್ಕರ್ ಪಾಲ್ಗೊಂಡಿದ್ದ ಸಂದರ್ಶನದಲ್ಲಿಯೂ ಕೂಡ ಚರ್ಚಿಸಲ್ಪಟ್ಟಿದ್ದು ಅಜಿತ್ ಅಗರ್ಕರ್ ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿಯನ್ನು ಹೋಲಿಕೆ ಮಾಡಿ ಮಾತನಾಡುವವರ ಕುರಿತು ಈ ಕೆಳಕಂಡಂತೆ ಪ್ರತಿಕ್ರಿಯಿಸಿದ್ದಾರೆ.

ಇಬ್ಬರನ್ನೂ ಹೋಲಿಕೆ ಮಾಡಿ ಮಾತನಾಡುವುದು ತಪ್ಪು ಎಂದ ಅಗರ್ಕರ್
ಸೌರವ್ ಗಂಗೂಲಿ ಮತ್ತು ವಿರಾಟ್ ಕೊಹ್ಲಿಯನ್ನು ಹೋಲಿಕೆ ಮಾಡಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರ ಕುರಿತು ಮಾತನಾಡಿರುವ ಅಜಿತ್ ಅಗರ್ಕರ್ ಇಬ್ಬರ ನಡುವೆಯೂ ಹೋಲಿಕೆ ಮಾಡಿ ಮಾತನಾಡುವುದೇ ತಪ್ಪು ಎಂದಿದ್ದಾರೆ. ಸೌರವ್ ಗಂಗೂಲಿಯವರ ವ್ಯಕ್ತಿತ್ವವೇ ಬೇರೆ, ಅದೇ ರೀತಿ ವಿರಾಟ್ ಕೊಹ್ಲಿ ತನ್ನದೇ ಆದ ವ್ಯಕ್ತಿತ್ವವನ್ನು ಹೊಂದಿದ್ದಾರೆ ಮತ್ತು ಎಂಎಸ್ ಧೋನಿ ಅವರು ಸಹ ತಮ್ಮದೇ ಆದ ವಿಭಿನ್ನ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಹೀಗಾಗಿ ನಾಯಕರುಗಳ ನಡುವೆ ಹೋಲಿಕೆಗಳನ್ನು ಮಾಡಿ ಮಾತನಾಡುವುದು ಅಷ್ಟೊಂದು ಸರಿಯಲ್ಲ ಎಂಬ ಅಭಿಪ್ರಾಯವನ್ನು ಅಜಿತ್ ಅಗರ್ಕರ್ ವ್ಯಕ್ತಪಡಿಸಿದರು.

ಇಬ್ಬರ ನಡುವೆ ಹೋಲಿಕೆ ಮಾಡುವುದರಲ್ಲಿ ಅರ್ಥವಿಲ್ಲ
ಸೌರವ್ ಗಂಗೂಲಿ ಕ್ರಿಕೆಟ್ ಆಡುತ್ತಿದ್ದ ಕಾಲವೇ ಬೇರೆ ಮತ್ತು ವಿರಾಟ್ ಕೊಹ್ಲಿ ಕ್ರಿಕೆಟ್ ಆಡುತ್ತಿರುವ ಕಾಲವೇ ಬೇರೆ, ಹೀಗಾಗಿ ಇಬ್ಬರ ನಡುವೆ ಹೋಲಿಕೆಗಳನ್ನು ಮಾಡುವುದರಲ್ಲಿ ಅರ್ಥವೇನಿದೆ ಎಂಬ ಪ್ರಶ್ನೆಯನ್ನು ಅಜಿತ್ ಅಗರ್ಕರ್ ಹಾಕಿದ್ದಾರೆ. ಇಬ್ಬರೂ ಸಹ ಬೇರೆ ಬೇರೆ ಕಾಲಗಳಲ್ಲಿ ಭಾರತ ತಂಡದ ನಾಯಕರಾಗಿ ಆಟವನ್ನು ಆಡಿದ್ದಾರೆ, ಹೀಗಾಗಿ ಇಬ್ಬರನ್ನೂ ಸಹ ಹೋಲಿಕೆ ಮಾಡಿರುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಜಿತ್ ಅಗರ್ಕರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಸರಣಿಯಲ್ಲಿ ಮುನ್ನಡೆ ಸಾಧಿಸಿರುವ ಕೊಹ್ಲಿ ಪಡೆ
ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಮೊದಲನೇ ಪಂದ್ಯ ಡ್ರಾನಲ್ಲಿ ಅಂತ್ಯವಾದರೂ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯವನ್ನು ಸಾಧಿಸಿತು ಮತ್ತು ಮೂರನೇ ಪಂದ್ಯ ಇದೀಗ ಲೀಡ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಮೊದಲನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲಿಯೂ ಕಳಪೆ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications