ವೈಭವ್ ಸೂರ್ಯವಂಶಿಗೆ ಇಲ್ಲ ಟೀಮ್ ಇಂಡಿಯಾದಲ್ಲಿ ಸ್ಥಾನ; ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಭಾರತ ಹಾಗೂ ಐರ್ಲೆಂಡ್ ನಡುವಣ ಮೊದಲ ಟಿ20 ಪಂದ್ಯ ಶುಕ್ರವಾರ ಆರಂಭವಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ಮಾಡಿದೆ. ಈ ಪಂದ್ಯದಲ್ಲಿ ಮೊದಲ ಬಾರಿಗೆ ಶ್ರೇಯಸ್ ಅಯ್ಯರ್ ಟೀಮ್ ಇಂಡಿಯಾದ ನಾಯಕರಾಗಿ ಕಣಕ್ಕೆ ಇಳಿದಿದ್ದಾರೆ. ಆದರೆ ಭಾರತೀಯ ಅಭಿಮಾನಿಗಳಿಗೆ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಕಣಕ್ಕೆ ಇಳಿಯದಿರುವುದು ನಿರಾಸೆ ಮೂಡಿಸಿದೆ.
ಬೆಲ್‌ಫಾಸ್ಟ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮಹತ್ವದ ಟಾಸ್ ಟೀಮ್ ಇಂಡಿಯಾದ ಪಾಲಾಯಿತು. ಈ ವೇಳೆ ಟಾಸ್ ಗೆದ್ದ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ನಿರ್ಧಾರವನ್ನು ತೆಗೆದುಕೊಂಡರು. ಆದರೆ ಎಲ್ಲರ ಚಿತ್ತ ತಂಡದಲ್ಲಿ ವೈಭವ್ ಸೂರ್ಯವಂಶಿ ಅವರಿಗೆ ತಂಡದಲ್ಲಿ ಸ್ಥಾನ ಸಿಗುತ್ತಾ ಎಂಬುದರ ಮೇಲೆ ನೆಟ್ಟಿತ್ತು. ಆದರೆ ವೈಭವ್ ಸೂರ್ಯವಂಶಿ ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಇವರು ಟೀಮ್ ಇಂಡಿಯಾದ ಜೆರ್ಸಿ ತೊಟ್ಟು ಅಂಗಳಕ್ಕೆ ಇಳಿಯುವ ಆಸೆ ಇನ್ನು ಮುಂದಕ್ಕೆ ಹೋಗಿದೆ.

19ನೇ ಆವೃತ್ತಿಯ ಐಪಿಎಲ್‌ನಲ್ಲಿ 776 ರನ್ ಬಾರಿಸಿ ಆರೆಂಜ್ ಕ್ಯಾಪ್ ಗೆದ್ದುಕೊಂಡಿದ್ದ ವೈಭವ್ ಸೂರ್ಯವಂಶಿ, ಶ್ರೀಲಂಕಾ ಪ್ರವಾಸದಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಲೀಗ್ ಹಂತದ ಪಂದ್ಯಗಳಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ವೈಭವ್ ಫೈನಲ್ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದರು. ಹೀಗಾಗಿ ಇವರಿಗೆ ಭಾರತದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ನೀಡಬಹುದು ಎಂದು ಅಭಿಮಾನಿಗಳು ಲೆಕ್ಕಾಚಾರ ಹಾಕಿಕೊಂಡಿದ್ದರು. ಆದರೆ ಅಭಿಮಾನಿಗಳ ಆಸೆಗೆ ಪೆಟ್ಟು ಬಿದ್ದಿದೆ.
ಪ್ರಸಿದ್ಧ್‌ಗೆ ಸ್ಥಾನ
ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರಸಿದ್ಧ್ ಕೃಷ್ಣ ಅವರಿಗೂ ಟಿ20 ತಂಡದಲ್ಲಿ ಸ್ಥಾನ ಲಭಿಸಿದೆ. ಉಳಿದಂತೆ ಭಾರತ ತಂಡ ಮೂವರು ಆಲ್‌ರೌಂಡರ್‌ಗಳೊಂದಿಗೆ ಕಣಕ್ಕೆ ಇಳಿದಿದೆ.
ಭಾರತ ತಂಡ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ಐರ್ಲೆಂಡ್ ತಂಡ: ಟಿಮ್ ಟೆಕ್ಟರ್, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ಕಾಲಿಟ್ಜ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಲಿಯಾಮ್ ಮೆಕಾರ್ಥಿ, ಮ್ಯಾಥ್ಯೂ ಹಂಫ್ರೈಸ್, ಜೈ ಮೂಂದ್ರಾ, ಮ್ಯಾಟ್ ಹಾಲಾರ್ಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications