ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಗೆ ರೋಹಿತ್ ಶರ್ಮಾ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ.
ಇದೇ ವೇಳೆ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎನಲ್ಲಿ ನಡೆಯಲಿರುವ ಐಸಿಸಿ ಪಂದ್ಯಾವಳಿಗೆ ರೋಹಿತ್ ಶರ್ಮಾ ಅವರನ್ನು ನಾಯಕನಾಗಿ ಆಯ್ಕೆ ಮಾಡುವ ಮೂಲಕ ಭಾರತ ತಂಡದ ಮ್ಯಾನೇಜ್‌ಮೆಂಟ್ ಸರಿಯಾದ ನಿರ್ಧಾರ ಮಾಡಿದೆ ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.
ಒಂದು ವರ್ಷಕ್ಕೂ ಅಧಿಕ ವಿರಾಮದ ನಂತರ, ವಿರಾಟ್ ಕೊಹ್ಲಿಯೊಂದಿಗೆ ಇತ್ತೀಚೆಗೆ ಟಿ20 ಸ್ವರೂಪಕ್ಕೆ ಮರಳಿದ ರೋಹಿತ್ ಶರ್ಮಾ, ಅಫ್ಘಾನಿಸ್ತಾನ ವಿರುದ್ಧ 3-0 ಅಂತರದಲ್ಲಿ ಸರಣಿಯನ್ನು ಗೆಲ್ಲಲು ಭಾರತ ತಂಡವನ್ನು ಮುನ್ನಡೆಸಿದರು.

ಮಿಡ್-ಡೇ ಜೊತೆ ಮಾತನಾಡಿದ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, 2024ರ ಟಿ20 ವಿಶ್ವಕಪ್‌ಗೆ ನಾಯಕನಾಗಲು ಆರಂಭಿಕ ಆಟಗಾರನೇ ಸರಿಯಾದ ಆಯ್ಕೆ ಎಂದು ಹೇಳಿದರು.
ಟೀಮ್ ಇಂಡಿಯಾ ಆರಂಭಿಕ ಬ್ಯಾಟರ್ ಹೇಗೆ ಮುಂಭಾಗದಿಂದ ತಂಡವನ್ನು ಮುನ್ನಡೆಸಿದರು ಮತ್ತು ಸತತವಾಗಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ 2023ರ ಏಕದಿನ ವಿಶ್ವಕಪ್‌ನ ಫೈನಲ್‌ಗೆ ಮಾರ್ಗದರ್ಶನ ನೀಡಿದರು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದರು.
"ಟಿ20 ವಿಶ್ವಕಪ್‌ಗೆ ಭಾರತ ತಂಡದ ನಾಯಕನಾಗಿ ರೋಹಿತ್ ಶರ್ಮಾ ಸರಿಯಾದ ಆಯ್ಕೆಯಾಗಿದೆ. ಏಕದಿನ ವಿಶ್ವಕಪ್‌ನಲ್ಲಿ 10 ಪಂದ್ಯಗಳನ್ನು ಗೆದ್ದ ರೀತಿ ನಮ್ಮ ನೆನಪಿನಲ್ಲಿ ಉಳಿದಿದೆ. ಅವರು ಭಾರತ ತಂಡವನ್ನು ಹೇಗೆ ಮುನ್ನಡೆಸಿದರು. ಹಾಗಾಗಿ, ರೋಹಿತ್ ಅತ್ಯುತ್ತಮ ಆಯ್ಕೆಯಾಗಿದ್ದಾರೆ," ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟರು.

2024ರ ಟಿ20 ವಿಶ್ವಕಪ್ ಪಂದ್ಯಾವಳಿಯಲ್ಲಿ ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಘೋಷಿಸಿದರು.
ರಾಜ್‌ಕೋಟ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮುನ್ನಾದಿನದಂದು, ವೆಸ್ಟ್ ಇಂಡೀಸ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡವು ಟ್ರೋಫಿಯನ್ನು ಎತ್ತುವ ವಿಶ್ವಾಸವಿದೆ ಎಂದು ಜಯ್ ಶಾ ಘೋಷಿಸಿದರು.
"ನಾವು 2023ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ನಾವು ಸತತ 10 ಪಂದ್ಯಗಳನ್ನು ಗೆಲ್ಲುವ ಮೂಲಕ ಅಭಿಮಾನಿಗಳ ಹೃದಯಗಳನ್ನು ಗೆದ್ದಿದ್ದೇವೆ. ಬಾರ್ಬಡೋಸ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು 2024ರ ಟಿ20 ವಿಶ್ವಕಪ್ ಮೇಲಕ್ಕೆತ್ತಲಿದೆ ಎಂದು ನನಗೆ ವಿಶ್ವಾಸವಿದೆ," ಎಂದು ಜಯ್ ಶಾ ಹೇಳಿದರು.
2022ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ನ ವಿರುದ್ಧ ಸೋತು ಭಾರತ ನಿರ್ಗಮಿಸಿದ ನಂತರ, ರೋಹಿತ್ ಶರ್ಮಾ ಟಿ20 ಪಂದ್ಯವನ್ನು ಆಡಿರಲಿಲ್ಲ. ಆದರೆ ಇತ್ತೀಚಿಗೆ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಶತಕ ಬಾರಿಸಿ ಪುನರಾಗಮನ ಮಾಡಿದರು.
ಮೊದಲ ಎರಡು ಪಂದ್ಯಗಳಲ್ಲಿ ಡಕ್‌ಗೆ ಔಟಾದ ಬಳಿಕ, ಬೆಂಗಳೂರಿನಲ್ಲಿ ನಡೆದ ರೋಚಕ ಸರಣಿಯ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ 5ನೇ ಟಿ20 ಶತಕ ಬಾರಿಸಿದರು.
ಟಿ20 ತಂಡದಿಂದ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಚುಟುಕು ಕ್ರಿಕೆಟ್ ಸ್ವರೂಪದಲ್ಲಿ ಭಾರತ ತಂಡದ ನಾಯಕರಾಗಿರುತ್ತಾರೆ. 2024ರ ಐಪಿಎಲ್ ಅಭಿಯಾನದ ಮೊದಲು ರೋಹಿತ್ ಶರ್ಮಾ ಬದಲು ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದ ನಾಯಕನನ್ನಾಗಿ ನೇಮಿಸಲಾಯಿತು.
ಆದಾಗ್ಯೂ, 2023ರ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡ ನಂತರ ಯಾವುದೇ ಪಂದ್ಯವನ್ನು ಆಡಿಲ್ಲ.