ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಒಂದು ಪಂದ್ಯ ಗೆದ್ದು ಒಂದು ಪಂದ್ಯ ಡ್ರಾ ಮಾಡಿಕೊಳ್ಳಲು ನೋಡುತ್ತಿಲ್ಲ: ಕೊಹ್ಲಿ

Not looking to win one and draw one, looking to win both Tests, says Virat Kohli

ಅಹ್ಮದಾಬಾದ್: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವರ್ಲ್ಡ್ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಭಾರತ ಪ್ರವೇಶಿಸಬೇಕಾದರೆ ಇಂಗ್ಲೆಂಡ್ ವಿರುದ್ಧದ ಉಳಿದ ಎರಡು ಟೆಸ್ಟ್‌ ಪಂದ್ಯಗಳಲ್ಲಿ ಒಂದರಲ್ಲಿ ಗೆದ್ದು ಒಂದರಲ್ಲಿ ಡ್ರಾ ಮಾಡಿಕೊಳ್ಳಬೇಕು. ಆದರೆ ಎರಡೂ ಪಂದ್ಯಗಳನ್ನು ಗೆದ್ದುಕೊಳ್ಳುವತ್ತ ನಾವು ಯೋಚಿಸುತ್ತಿದ್ದೇವೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

100 ಟೆಸ್ಟ್ ಪಂದ್ಯಗಳ ಸಾಧನೆ ಅಸಾಮಾನ್ಯ: ಇಶಾಂತ್ ಕೊಡುಗೆಗೆ ಕೊಹ್ಲಿ, ರೋಹಿತ್ ಮೆಚ್ಚುಗೆ100 ಟೆಸ್ಟ್ ಪಂದ್ಯಗಳ ಸಾಧನೆ ಅಸಾಮಾನ್ಯ: ಇಶಾಂತ್ ಕೊಡುಗೆಗೆ ಕೊಹ್ಲಿ, ರೋಹಿತ್ ಮೆಚ್ಚುಗೆ

ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಈಗ 1-1ರಿಂದ ಸರಣಿ ಸಮಬಲಗೊಂಡಿದೆ. ಇದರಲ್ಲಿ ಮೂರನೇ ಟೆಸ್ಟ್ ಪಂದ್ಯವಾಗಿ ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಂನಲ್ಲಿ ಪಿಂಕ್‌ ಬಾಲ್ ಟೆಸ್ಟ್‌ ಪಂದ್ಯ ನಡೆಯಲಿದೆ. ಫೆಬ್ರವರಿ 24ರಂದು ಪಂದ್ಯ 2.30 pmಗೆ ಆರಂಭಗೊಳ್ಳಲಿದೆ.

ಪಂದ್ಯಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, 'ನೀವು ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳಬೇಕು ಅನ್ನೋ ಒಂದೇ ಕಾರಣಕ್ಕೆ ಆಡಲಾಗುವುದಿಲ್ಲ. ನಾವು ಒಂದು ಪಂದ್ಯ ಗೆದ್ದು ಮತ್ತೊಂದು ಪಂದ್ಯ ಡ್ರಾ ಮಾಡಿಕೊಳ್ಳಲು ಎದುರು ನೋಡುತ್ತಿಲ್ಲ. ಬದಲಿಗೆ ಎರಡೂ ಪಂದ್ಯಗಳನ್ನು ಗೆದ್ದುಕೊಳ್ಳಲು ಎದುರು ನೋಡುತ್ತಿದ್ದೇವೆ,' ಎಂದಿದ್ದಾರೆ.

ವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ದಾಖಲೆ ಬರೆಯಲು ಕ್ರಿಸ್ ಗೇಲ್ ಸಜ್ಜುವಿಶ್ವ ಕ್ರಿಕೆಟ್‌ನಲ್ಲಿ ಅತ್ಯಂತ ಅಪರೂಪದ ದಾಖಲೆ ಬರೆಯಲು ಕ್ರಿಸ್ ಗೇಲ್ ಸಜ್ಜು

ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಈಗಾಗಲೇ ನ್ಯೂಜಿಲೆಂಡ್ ತಂಡ ಫೈನಲ್‌ಗೆ ಪ್ರವೇಶಿಸಿದೆ. ಈಗ ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ ತಂಡಗಳ ಮಧ್ಯೆ ಸ್ಪರ್ಧೆ ಸಡೆಯುತ್ತಿದೆ. ಈ ಸ್ಪರ್ಧೆ ಭಾರತ-ಇಂಗ್ಲೆಂಡ್ ಟೆಸ್ಟ್‌ ಸರಣಿ ಫಲಿತಾಂಶವನ್ನು ಅವಲಂಭಿಸಿದೆ. ಸರಣಿ 3-1, 2-1ರಿಂದ ಗೆದ್ದರೆ ಭಾರತ ಫೈನಲ್‌ಗೆ ಪ್ರವೇಶಿಸಲಿದೆ.

Story first published: Wednesday, February 24, 2021, 11:27 [IST]
Other articles published on Feb 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X