Asia Cup 2023: ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ದಿಗ್ಗಜನನ್ನು ಸರಿಗಟ್ಟಿದ ಹ್ಯಾರಿಸ್ ರೌಫ್
ಬುಧವಾರ, ಸೆಪ್ಟೆಂಬರ್ 6ರಂದು ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ 2023ರ ಏಷ್ಯಾ ಕಪ್‌ನ ಸೂಪರ್ 4 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಪಾಕಿಸ್ತಾನ ವೇಗದ ಬೌಲರ್ ಹ್ಯಾರಿಸ್ ರೌಫ್ ದೊಡ್ಡ ಮೈಲಿಗಲ್ಲು ಸಾಧಿಸಿದರು.
ಏಕದಿನ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡದ ವೇಗದ ಬೌಲರ್ ಹ್ಯಾರಿಸ್ ರೌಫ್ ಹೊಸ ದಾಖಲೆಯನ್ನು ನಿರ್ಮಿಸಿದರು ಮತ್ತು ಪಾಕಿಸ್ತಾನ ತಂಡದ ಪರ 50 ಏಕದಿನ ವಿಕೆಟ್‌ಗಳನ್ನು ಗಳಿಸಿದ ಮೂರನೇ ವೇಗದ ಬೌಲರ್ ಎನಿಸಿಕೊಂಡರು.

ಬಾಂಗ್ಲಾದೇಶ ಯುವ ಬ್ಯಾಟರ್ ತೌಹಿದ್ ಹೃದೋಯ್ ಅವರನ್ನು ಎರಡು ರನ್‌ಗಳ ಅಲ್ಪ ರನ್‌ಗಳಿಗೆ ಪೆವಿಲಿಯನ್‌ಗೆ ವಾಪಸ್ ಕಳುಹಿಸಲು ಹ್ಯಾರಿಸ್ ರೌಫ್ 145 ಕಿಮೀ ವೇಗದಲ್ಲಿ ಚೆಂಡು ಎಸೆಯುವ ಮೂಲಕ ಬೇಲ್ಸ್ ಎಗರಿಸಿದರು.
ಪಾಕಿಸ್ತಾನ ವೇಗಿ ಹ್ಯಾರಿಸ್ ರೌಫ್ ಏಕದಿನ ಸ್ವರೂಪದ 27 ಪಂದ್ಯಗಳಲ್ಲಿ 50 ವಿಕೆಟ್‌ಗಳ ಮೈಲಿಗಲ್ಲನ್ನು ಸ್ಥಾಪಿಸಿದರು. ಆ ಮೂಲಕ ಪಾಕಿಸ್ತಾನದ ಮಾಜಿ ದಿಗ್ಗಜ ವಕಾರ್ ಯೂನಿಸ್ ಅವರನ್ನು ಸರಿಗಟ್ಟಿ, ಮೂರನೇ ಸ್ಥಾನವನ್ನು ಹಂಚಿಕೊಂಡರು.

ಇದಕ್ಕೂ ಮುನ್ನ ಹಸನ್ ಅಲಿ 24 ಪಂದ್ಯಗಳಲ್ಲಿ ಪಾಕಿಸ್ತಾನ ತಂಡದ ಪರ ವೇಗವಾಗಿ 50 ಏಕದಿನ ವಿಕೆಟ್‌ಗಳನ್ನು ಪಡೆದ ದಾಖಲೆಯನ್ನು ಹೊಂದಿದ್ದಾರೆ. ಇದೇ ವೇಳೆ ಪಾಕಿಸ್ತಾನ ಸ್ಟಾರ್ ವೇಗಿ ಶಾಹೀನ್ ಶಾ ಆಫ್ರಿದಿ 25 ಪಂದ್ಯಗಳಲ್ಲಿ 50 ವಿಕೆಟ್‌ಗಳ ಸಾಧನೆಯನ್ನು ಮಾಡುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
7 ವಿಕೆಟ್‌ಗಳಿಂದ ಬಾಂಗ್ಲಾದೇಶ ತಂಡವನ್ನು ಮಣಿಸಿದ ಪಾಕಿಸ್ತಾನ
ಇನ್ನು ಬಾಂಗ್ಲಾದೇಶ ವಿರುದ್ಧದ ಪಂದ್ಯದ ಕುರಿತು ಮಾತನಾಡುವುದಾದರೆ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ತಂಡದ ಅಗ್ರಕ್ರಮಾಂಕ ಪಾಕಿಸ್ತಾನದ ಬೌಲಿಂಗ್ ದಾಳಿಗೆ ಸಿಲುಕಿ ಪತರುಗುಟ್ಟಿತು.
ಹ್ಯಾರಿಸ್ ರೌಫ್ ಮತ್ತು ನಸೀಮ್ ಶಾ ಪಾಕಿಸ್ತಾನ ತಂಡದ ವೇಗದ ಬೌಲಿಂಗ್ ದಾಳಿಯನ್ನು ಮುನ್ನಡೆಸಿದರು. ಹ್ಯಾರಿಸ್ ರೌಫ್ 19 ರನ್‌ಗೆ 4 ವಿಕೆಟ್ ಮತ್ತು ನಸೀಮ್ ಶಾ 34 ರನ್‌ಗೆ 3 ವಿಕೆಟ್‌ಗಳ ಅಂಕಿಅಂಶ ಪಡೆದರು.
ಅಂತಿಮವಾಗಿ ಪಾಕಿಸ್ತಾನದ ಬೌಲರ್‌ಗಳು ಬಾಂಗ್ಲಾದೇಶ ತಂಡವನ್ನು 38.4 ಓವರ್‌ಗಳಲ್ಲಿ 193 ರನ್‌ಗಳಿಗೆ ಸಾಧಾರಣ ಮೊತ್ತಕ್ಕೆ ಆಲೌಟ್ ಮಾಡಿದರು.
ಏತನ್ಮಧ್ಯೆ, ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ 57 ಎಸೆತಗಳಲ್ಲಿ 53 ರನ್ ಗಳಿಸಿದರೆ, ವಿಕೆಟ್ ಕೀಪರ್-ಬ್ಯಾಟರ್ ಮುಶ್ಫಿಕರ್ ರಹೀಂ ಕೂಡ 64 ರನ್ ಬಾರಿಸಿದರು. ಈ ಜೋಡಿ 5 ವಿಕೆಟ್‌ಗೆ 100 ರನ್‌ಗಳ ಜೊತೆಯಾಟ ನೀಡಿದರು. ಉಳಿದ ಯಾವುದೇ ಬಾಂಗ್ಲಾದೇಶ ಬ್ಯಾಟರ್‌ಗಳು ಪಾಕಿಸ್ತಾನದ ವೇಗದ ದಾಳಿಯನ್ನು ಪ್ರತಿರೋಧ ತೋರಲಿಲ್ಲ.
194 ರನ್‌ಗಳ ಗುರಿ ಬೆನ್ನಟ್ಟಿದ ಆತಿಥೇಯ ಪಾಕಿಸ್ತಾನ ಉತ್ತಮ ಆರಂಭ ಪಡೆಯಿತು. ಇಮಾಮ್-ಉಲ್-ಹಕ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಅತ್ಯುತ್ತಮ ಬ್ಯಾಟಿಂಗ್‌ನೊಂದಿಗೆ ಬಾಬರ್ ಅಜಂ ನಾಯಕತ್ವದ ತಂಡವು 39.3 ಓವರ್‌ಗಳಲ್ಲಿ ಗುರಿ ತಲುಪಿತು.
ಆರಂಭಿಕ ಬ್ಯಾಟರ್ ಇಮಾಮ್-ಉಲ್-ಹಕ್ 84 ಎಸೆತಗಳಲ್ಲಿ 5 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಸೇರಿದಂತೆ 78 ರನ್ ಗಳಿಸಿದರೆ, ಮೊಹಮ್ಮದ್ ರಿಜ್ವಾನ್ 79 ಎಸೆತಗಳಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ ಅಜೇಯ 63 ರನ್ ಗಳಿಸಿದರು. ಇನ್ನು ಬಾಂಗ್ಲಾದೇಶ ಪರ ಬೌಲಿಂಗ್‌ನಲ್ಲಿ ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ ಮತ್ತು ಮೆಹಿದಿ ಹಸನ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications