IND vs NZ 2nd ODI: ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ
ರಾಜ್‌ಕೋಟ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಏಕದಿನ ಪಂದ್ಯ ಬುಧವಾರ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸುವುದು ಪ್ರವಾಸಿ ನ್ಯೂಜಿಲೆಂಡ್ ತಂಡಕ್ಕೆ ಅನಿವಾರ್ಯವಾಗಿದೆ. ಭಾರತ ಈಗಾಗಲೇ ಮೊದಲ ಪಂದ್ಯವನ್ನು ಗೆದ್ದು ಬಿಗಿದ್ದು, ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಕಿವೀಸ್‌ಗೆ ಜಯ ಅನಿವಾರ್ಯವಾಗಿದೆ. ಎರಡನೇ ಏಕದಿನ ಪಂದ್ಯದಲ್ಲೂ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಮಾಡಲು ಮುಂದಾಗಿದೆ.
ಮೊದಲ ಏಕದಿನ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದ ವಾಷಿಂಗ್ಟನ್ ಸುಂದರ್ ಸರಣಿಯಿಂದ ಹೊರ ನಡೆದಿದ್ದಾರೆ. ಇವರ ಬದಲಿಗೆ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಅವಕಾಶ ನೀಡಲಾಗಿದೆ. ಉಳಿದಂತೆ ಭಾರತ ತಂಡದಲ್ಲಿ ಬೇರೆ ಬದಲಾವಣೆಗಳು ಕಂಡು ಬಂದಿಲ್ಲ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ವಿಲ್ ಯಂಗ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಹಾಯ್ (ವಿಕೆಟ್ ಕೀಪರ್), ಮೈಕೆಲ್ ಬ್ರೇಸ್‌ವೆಲ್ (ನಾಯಕ), ಝಾಕ್ ಫೌಲ್ಕ್ಸ್, ಕ್ರಿಸ್ಟಿಯನ್ ಕ್ಲಾರ್ಕ್, ಕೈಲ್ ಜಾಮಿಸನ್, ಜೇಡನ್ ಲೆನಾಕ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications