ಟಿ20 ತ್ರಿಕೋನ ಸರಣಿ: ಕಾನ್ವೆ ಮಿಂಚು; ಬಾಂಗ್ಲಾದೇಶ ವಿರುದ್ಧ ಕಿವೀಸ್ ಪಡೆಗೆ ಭರ್ಜರಿ ಗೆಲುವು

ಟಿ20 ತ್ರಿಕೋನ ಸರಣಿಯ ಮೂರನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಆತಿಥೇಯ ನ್ಯೂಜಿಲೆಂಡ್ ತಂಡ ಭರ್ಜರಿ ಪ್ರದರ್ಶನ ನೀಡಿದ್ದು ಗೆಲುವು ಸಾಧಿಸಿದೆ. ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಮಾಡಿದ ನ್ಯೂಜಲೆಂಡ್ ತಂಡ ಬೌಲಿಂಗ್‌ನಲ್ಲಿ ಉತ್ತಮ ಯಶಸ್ಸು ಸಾಧಿಸಿತ್ತು. 137 ರನ್‌ಗಳ ಸಾಧಾರಣ ಮೊತ್ತಕ್ಕೆ ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಡೆವೋನ್ ಕಾನ್ವೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಸುಲಭವಾಗಿ ಪಂದ್ಯವನ್ನು ಗೆದ್ದುಕೊಂಡಿದೆ ನ್ಯೂಜಿಲೆಂಡ್.
ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಈ ಸರಣಿಯಲ್ಲಿ ಮೊದಲ ಗೆಲುವು ಸಾಧಿಸಿದಂತಾಗಿದೆ. ಇದಕ್ಕೂ ಮುನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಸೋಲು ಅನುಭವಿಸುವ ಮೂಲಕ ಆತೋಥೆಯ ತಂಡ ಹಿನ್ನಡೆ ಅನುಭವಿಸಿತ್ತು. ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಗೆದ್ದು ನೀಗಿದ್ದು ಮುನ್ನಡೆ ಸಾಧಿಸಿದೆ.

ಬಾಂಗ್ಲಾ ನೀರಸ ಬ್ಯಾಟಿಂಗ್
ಈ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡದ ಬ್ಯಾಟಿಂಗ್ ಅತ್ಯಂತ ನೀರಸವಾಗಿತ್ತು. ಕ್ರೈಸ್ಟ್ ಚರ್ಚ್‌ನ ಹಾಗ್ಲೆ ಓವಲ್‌ನಲ್ಲಿ ನಡೆದ ಪಂದ್ಯದಲ್ಲಿ ಯಾವ ಜೋಡಿಯಿಂದಲೂ ಪ್ರಮುಖ ಜೊತೆಯಾ ಬಾರಲೇ ಇಲ್ಲ. ಆರಂಭಿಕ ಆಟಗಾರ ನಜ್ಮುಲ್ ಹುಸೈನ್ ಶಾಂತೋ ಅವರ 33 ರನ್ ತಂಡದ ಪರ ದಾಖಲಾದ ಅತ್ಯುತ್ತಮ ಮೊತ್ತ ಎನಿಸಿಕೊಂಡಿತು. ಬಾಂಗ್ಲಾದೇಶದ ವಿರುದ್ಧ ಕಿವೀಸ್ ಬೌಲಿಂಗ್ ವಿಭಾಗ ಸಂಘಟಿತ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಇದರ ಪರಿಣಾಮವಾಗಿ ಬಾಂಗ್ಲಾದೇಶ ತಂಡ 137 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿದೆ.

ಸುಲಭ ಗೆಲುವು ಸಾಧಿಸಿದ ಕಿವೀಸ್
ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡಕ್ಕೆ ಆರಂಭಿಕ ಆಟಗಾರ ಡೆವೋನ್ ಕಾನ್ವೆ ಆಸರೆಯಾದರು. ಮೊದಲ ವಿಕೆಟ್ ಅಲ್ಪ ಮೊತ್ತಕ್ಕೆ ಕಳೆದುಕೊಂಡರೂ ಎರಡನೇ ವಿಕೆಟ್‌ಗೆ ನಾಯಕ ಕೇನ್ ವಿಲಿಯಮ್ಸನ್ ಜೊತೆಗೂಡಿ ಉತ್ತಮ ಜೊತೆಯಾಟ ನೀಡಿದರು. ಬಳಿಕ ಗ್ಲೆನ್ ಫಿಲಿಪ್ಸ್ ಕೂಡ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಮಿಂಚಿದರು. ಡೆವೋನ್ ಕಾನ್ವೆ 70 ರನ್‌ಗಳ ಕೊಡುಗೆ ನೀಡಿದರೆ ವಿಲಿಯಮ್ಸನ್ 30 ಹಾಗೂ ಫಿಲಿಪ್ಸ್ 9 ಎಸೆತಗಳಲ್ಲಿ 23 ರನ್ ಸಿಡಿಸುವ ಮೂಲಕ 17.5 ಓವರ್‌ಗಳಲ್ಲಿ 142 ರನ್ ಬಾರಿಸಿ 8 ವಿಕೆಟ್‌ಗಳ ಅಂತರದಿಂದ ಭರ್ಜರಿಯಾಗಿ ಗೆಲುವು ಸಾಧಿಸಿತು. ಈ ಮೂಲಕ ಆತೊಥೆಯ ನ್ಯೂಜಿಲೆಂಡ್ ತಂಡ ಮಹತ್ವದ ಗೆಲುವು ಸಾಧಿಸಿದೆ.
ವಿಶ್ವಕಪ್‌ಗೆ ಸಿದ್ಧತೆ
ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ನಡುವಿನ ಈ ತ್ರಿಕೋನ ಸರಣಿ ಟಿ20 ವಿಶ್ವಕಪ್‌ಗೆ ಪೂರ್ವಸಿದ್ಧತಾ ಸರಣಿಯ ರೀತಿಯಲ್ಲಿ ಆಡಿಸಲಾಗುತ್ತಿದೆ. ಈ ಮೂಲಕ ಮೂರು ತಂಡಗಳು ಕೂಡ ಉತ್ತಮ ಸಿದ್ಧತೆಯನ್ನು ಮಾಡಿಕೊಳ್ಳಲು ಅವಕಾಶ ದೊರೆತಿದೆ. ಈ ಸರಣಿಯಲ್ಲಿ ಪಾಕಿಸ್ತಾನ ತಂಡ ಉತ್ತಮ ಪ್ರದರ್ಶನ ನೀಡಿದ್ದು ಗೆಲುವಿನ ಆತಿಥೆಯ ನ್ಯೂಜಿಲೆಂಡ್‌ಗೂ ಸೋಲಿನ ರುಚಿ ತೋರಿಸುವ ಮೂಲಕ ಮಿಂಚಿದೆ. ಇನ್ನು ಈ ಮೂರು ತಂಡಗಳು ಮತ್ತೊಂದು ಸುತ್ತಿನಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದೆ.
ಇತ್ತಂಡಗಳ ಆಡುವ ಬಳಗ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್ವೆಲ್, ಇಶ್ ಸೋಧಿ, ಆಡಮ್ ಮಿಲ್ನೆ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಬ್ಲೇರ್ ಟಿಕ್ನರ್, ಡೇನ್ ಕ್ಲೀವರ್, ಲಾಕಿ ಫರ್ಗುಸನ್, ಮಿಚೆಲ್ ಸ್ಯಾಂಟ್ನರ್, ಮಾರ್ಟಿನ್ ಗಪ್ಟಿಲ್
ಬಾಂಗ್ಲಾದೇಶ ಆಡುವ ಬಳಗ: ಮೆಹಿದಿ ಹಸನ್ ಮಿರಾಜ್, ನಜ್ಮುಲ್ ಹೊಸೈನ್ ಶಾಂಟೊ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್ (ನಾಯಕ), ಅಫೀಫ್ ಹೊಸೈನ್, ಮೊಸದ್ದೆಕ್ ಹೊಸೈನ್, ಯಾಸಿರ್ ಅಲಿ, ನೂರುಲ್ ಹಸನ್ (ವಿಕೆಟ್ ಕೀಪರ್), ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಶೋರಿಫುಲ್ ಇಸ್ಲಾಂ
ಬೆಂಚ್: ಸಬ್ಬೀರ್ ರೆಹಮಾನ್, ನಸುಮ್ ಅಹ್ಮದ್, ಮುಸ್ತಾಫಿಜುರ್ ರೆಹಮಾನ್, ಮೊಹಮ್ಮದ್ ಸೈಫುದ್ದೀನ್, ಎಬಾಡೋತ್ ಹೊಸೈನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications