ನಾಯಕನಾಗಿ ಧೋನಿಯ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ!

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಮೀರಿ ನಿಂತಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಲಿನಲ್ಲಿದ್ದ ದಾಖಲೆ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಟಿ20 ಮಾದರಿಯಲ್ಲಿ ನಾಯಕನಾಗಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 38 ರನ್ ಗಳಿಸಿ ಔಟಾದರು. ಆದರೆ ಈ ವೇಳೆಗಾಗಲೇ ಕೊಹ್ಲಿ ಈ ದಾಖಲೆಯನ್ನು ಮೀರಿ ನಿಂತರು. ನಾಯಕನಾಗಿ ಅತಿ ಹೆಚ್ಚು ರನ್ ಮಾಡಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಪ್ ಡು ಪ್ಲೆಸಿಸ್ ಮಾತ್ರ ಈ ಪಟ್ಟಿಯಲ್ಲಿ ಕೊಹ್ಲಿಗಿಂತ ಮುಂದಿರುವ ಆಟಗಾರರು.
ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ದ.ಆಫ್ರಿಕಾ ನಾಯಕ ಫಾಪ್ ಡು ಪ್ಲೆಸಿಸ್ ಅವರನ್ನು ಹಿಂದಿಕ್ಕುವ ಮತ್ತೊಂದು ಅವಕಾಶವನ್ನು ವಿರಾಟ್ ಕೊಹ್ಲಿ ಸ್ವಲ್ಪದರಲ್ಲಿ ಕಳೆದುಕೊಂಡಿತು. ಇವತ್ತು ಅರ್ಧ ಶತಕವನ್ನು ಗಳಿಸಿದ್ದರೆ ಕೇನ್ ಹಾಗು ಡು ಪ್ಲೆಸಿಸ್ ಜೊತೆಗೆ ಅತಿಹೆಚ್ಚು ಅರ್ಧ ಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಇಂದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ನ್ಯೂಜಿಲ್ಯಾಂಡ್ ಅರ್ಧ ಶತಕವನ್ನು ದಾಖಲಿಸಿ ಈ ಸಾಧನೆಯಲ್ಲಿ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ
ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಅಪೂರ್ವ ಅವಕಾಶವೊಂದನ್ನು ಕಳೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ವಿರಾಟ್ ಕೊಹ್ಲಿ 50 ಸಿಕ್ಸರ್ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಸ್ವಲ್ಪದರಲ್ಲೇ ಕಳೆದುಕೊಂಡಿದ್ದಾರೆ. ಈ ಸಾಧನೆಯನ್ನು ಮಾಡಿದ ಏಕೈಕ ನಾಯಕ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್.
ಹ್ಯಾಮಿಲ್ಟನ್‌ನಲ್ಲಿ ನಡೆದ ಮೂರನೇ ಪಂದ್ಯ ಟೈನಲ್ಲಿ ಅಂತ್ಯಗೊಂಡಿತು. ಹೀಗಾಗಿ ಸೂಪರ್ ಓವರ್‌ನಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಸಾಹಸದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಸರಣಿಯನ್ನು ಭಾರತ 3-0 ಅಂತರದಿಂದ ತನ್ನದಾಗಿಸಿಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications