ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಯಕನಾಗಿ ಧೋನಿಯ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ!

NZ vs IND 2020: Virat Kohli Creates Another Record

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ಮೀರಿ ನಿಂತಿದ್ದಾರೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹೆಸರಲಿನಲ್ಲಿದ್ದ ದಾಖಲೆ ವಿರಾಟ್ ಕೊಹ್ಲಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಟಿ20 ಮಾದರಿಯಲ್ಲಿ ನಾಯಕನಾಗಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ 38 ರನ್ ಗಳಿಸಿ ಔಟಾದರು. ಆದರೆ ಈ ವೇಳೆಗಾಗಲೇ ಕೊಹ್ಲಿ ಈ ದಾಖಲೆಯನ್ನು ಮೀರಿ ನಿಂತರು. ನಾಯಕನಾಗಿ ಅತಿ ಹೆಚ್ಚು ರನ್ ಮಾಡಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದ್ದಾರೆ. ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ದಕ್ಷಿಣ ಆಫ್ರಿಕಾ ತಂಡದ ನಾಯಕ ಫಾಪ್ ಡು ಪ್ಲೆಸಿಸ್ ಮಾತ್ರ ಈ ಪಟ್ಟಿಯಲ್ಲಿ ಕೊಹ್ಲಿಗಿಂತ ಮುಂದಿರುವ ಆಟಗಾರರು.

ಟಿ20ಐ: ಸೂಪರ್ ಓವರ್‌ನಲ್ಲಿ ರೋ'ಹಿಟ್‌' ತಂದುಕೊಟ್ಟ ಸೂಪರ್ ಗೆಲುವು!ಟಿ20ಐ: ಸೂಪರ್ ಓವರ್‌ನಲ್ಲಿ ರೋ'ಹಿಟ್‌' ತಂದುಕೊಟ್ಟ ಸೂಪರ್ ಗೆಲುವು!

ನ್ಯೂಜಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ಮತ್ತು ದ.ಆಫ್ರಿಕಾ ನಾಯಕ ಫಾಪ್ ಡು ಪ್ಲೆಸಿಸ್ ಅವರನ್ನು ಹಿಂದಿಕ್ಕುವ ಮತ್ತೊಂದು ಅವಕಾಶವನ್ನು ವಿರಾಟ್ ಕೊಹ್ಲಿ ಸ್ವಲ್ಪದರಲ್ಲಿ ಕಳೆದುಕೊಂಡಿತು. ಇವತ್ತು ಅರ್ಧ ಶತಕವನ್ನು ಗಳಿಸಿದ್ದರೆ ಕೇನ್ ಹಾಗು ಡು ಪ್ಲೆಸಿಸ್ ಜೊತೆಗೆ ಅತಿಹೆಚ್ಚು ಅರ್ಧ ಶತಕಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದುಕೊಳ್ಳುತ್ತಿದ್ದರು. ಆದರೆ ಇಂದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನಾಯಕ ನ್ಯೂಜಿಲ್ಯಾಂಡ್ ಅರ್ಧ ಶತಕವನ್ನು ದಾಖಲಿಸಿ ಈ ಸಾಧನೆಯಲ್ಲಿ ಮುನ್ನಡೆಯನ್ನು ಪಡೆದುಕೊಂಡಿದ್ದಾರೆ

ಬ್ಯಾಟಿಂಗ್‌ನಲ್ಲಿ ಕೊಹ್ಲಿ, ರಾಹುಲ್ ಕಾಪಿ ಮಾಡಿದ್ದು ಚಾಹಲ್ ಶೈಲಿಯನ್ನಂತೆ !ಬ್ಯಾಟಿಂಗ್‌ನಲ್ಲಿ ಕೊಹ್ಲಿ, ರಾಹುಲ್ ಕಾಪಿ ಮಾಡಿದ್ದು ಚಾಹಲ್ ಶೈಲಿಯನ್ನಂತೆ !

ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೊಂದು ಅಪೂರ್ವ ಅವಕಾಶವೊಂದನ್ನು ಕಳೆದುಕೊಂಡಿದ್ದಾರೆ. ಅಂತಾರಾಷ್ಟ್ರೀಯ ಟಿ20ಯಲ್ಲಿ ವಿರಾಟ್ ಕೊಹ್ಲಿ 50 ಸಿಕ್ಸರ್ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಸ್ವಲ್ಪದರಲ್ಲೇ ಕಳೆದುಕೊಂಡಿದ್ದಾರೆ. ಈ ಸಾಧನೆಯನ್ನು ಮಾಡಿದ ಏಕೈಕ ನಾಯಕ ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್.

ಹ್ಯಾಮಿಲ್ಟನ್‌ನಲ್ಲಿ ನಡೆದ ಮೂರನೇ ಪಂದ್ಯ ಟೈನಲ್ಲಿ ಅಂತ್ಯಗೊಂಡಿತು. ಹೀಗಾಗಿ ಸೂಪರ್ ಓವರ್‌ನಲ್ಲಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಸಾಹಸದಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಸರಣಿಯನ್ನು ಭಾರತ 3-0 ಅಂತರದಿಂದ ತನ್ನದಾಗಿಸಿಕೊಂಡಿದೆ.

Story first published: Wednesday, January 29, 2020, 17:45 [IST]
Other articles published on Jan 29, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X