NZ vs IND: ಚುಟುಕು ಕ್ರಿಕೆಟ್‌ನಲ್ಲಿ ಶತಕ ಬಾರಿಸಿ ಸರಣಿ ದಾಖಲೆ ಮುರಿದ ಸೂರ್ಯಕುಮಾರ್

ರವಿವಾರ, ನವೆಂಬರ್ 20ರಂದು ಮೌಂಟ್ ಮೌಂಗನುಯಿ ಬೇ ಓವಲ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 65 ರನ್‌ಗಳಿಂದ ಭರ್ಜರಿ ಜಯ ಗಳಿಸಿತು.

ಸದ್ಯ ಭಾರತ ಕ್ರಿಕೆಟ್ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಮಿನುಗುವ ನಕ್ಷತ್ರ. ಭಾರತ ತಂಡದ ಪರವಾಗಿ ಆಡುವ ಪ್ರತಿ ಸರಣಿಯಲ್ಲೂ ಬ್ಯಾಟಿಂಗ್‌ನಲ್ಲಿ ರನ್ ಹೊಳೆ ಹರಿಸುತ್ತಿದ್ದು, ಒಂದಿಲ್ಲೊಂದು ದಾಖಲೆ ಮುರಿಯುತ್ತಿದ್ದಾರೆ.

ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ ನಂತರ ಭಾರತ ತಂಡ ಸುಧಾರಿಸಿಲ್ಲ; ಪಾಕ್ ಕ್ರಿಕೆಟಿಗವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ ನಂತರ ಭಾರತ ತಂಡ ಸುಧಾರಿಸಿಲ್ಲ; ಪಾಕ್ ಕ್ರಿಕೆಟಿಗ

ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದಾಗಿನಿಂದಲೂ ಟಿ20 ಪಂದ್ಯಗಳಲ್ಲಿ ತಮ್ಮ ಚಿನ್ನದ ಬೇಟೆಯನ್ನು ಮುಂದುವರೆಸಿದ್ದಾರೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಚುಟುಕು ಕ್ರಿಕೆಟ್‌ನಲ್ಲಿ ತಮ್ಮ 2ನೇ ಶತಕವನ್ನು ಬಾರಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 49 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ಮೌಂಟ್ ಮೌಂಗನುಯಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

 ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ 2 ಶತಕ

ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ 2 ಶತಕ

2018ರಲ್ಲಿ ಎರಡು ಶತಕ ಗಳಿಸಿದ್ದ ರೋಹಿತ್ ಶರ್ಮಾ ನಂತರ ಸೂರ್ಯಕುಮಾರ್ ಯಾದವ್ ಒಂದು ಕ್ಯಾಲೆಂಡರ್ ವರ್ಷದಲ್ಲಿ ಟಿ20 ಕ್ರಿಕೆಟ್‌ನಲ್ಲಿ 2 ಶತಕಗಳನ್ನು ಬಾರಿಸಿದ ಎರಡನೇ ಭಾರತೀಯ ಬ್ಯಾಟರ್ ಆದರು. ಸೂರ್ಯಕುಮಾರ್ ಯಾದವ್ ಕಳೆದ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಬಾರಿಸಿದ್ದರು.

ರವಿವಾರ ನಡೆದ 2ನೇ ಟಿ20 ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕೇವಲ 51 ಎಸೆತಗಳಲ್ಲಿ 111 ರನ್ ಬಾರಿಸಿ ಅಜೇಯರಾಗುಳಿದರು. ಸ್ಫೋಟಕ ಬ್ಯಾಟರ್‌ನ ಇನ್ನಿಂಗ್ಸ್‌ನಲ್ಲಿ 7 ಸಿಕ್ಸರ್ ಮತ್ತು 11 ಬೌಂಡರಿಗಳು ಸೇರಿದ್ದವು. ಅಲ್ಲದೇ ತಮ್ಮ ಸಾಂಪ್ರದಾಯಿಕ 360 ಡಿಗ್ರಿ ಆಟವನ್ನು ಮತ್ತೊಮ್ಮೆ ಪ್ರದರ್ಶಿಸಿದರು.

 2020ರಿಂದ ಭಾರತದ ಬ್ಯಾಟರ್‌ನಿಂದ ವೈಯಕ್ತಿಕ ಗರಿಷ್ಠ ಮೊತ್ತ

2020ರಿಂದ ಭಾರತದ ಬ್ಯಾಟರ್‌ನಿಂದ ವೈಯಕ್ತಿಕ ಗರಿಷ್ಠ ಮೊತ್ತ

2020ರ ಜನವರಿಯಿಂದ ರೋಹಿತ್ ಶರ್ಮಾ 65 ರನ್ ಗಳಿಸಿದ ನಂತರ, ಸೂರ್ಯಕುಮಾರ್ ಯಾದವ್ ಅವರು ನ್ಯೂಜಿಲೆಂಡ್‌ನಲ್ಲಿ ಟಿ20 ಪಂದ್ಯಗಳಲ್ಲಿ ಭಾರತದ ಬ್ಯಾಟರ್‌ನಿಂದ ವೈಯಕ್ತಿಕ ಗರಿಷ್ಠ ಮೊತ್ತವನ್ನು ದಾಖಲಿಸಿದರು.

ಸೂರ್ಯಕುಮಾರ್ ಎಂದಿನಂತೆ ವೇಗದ ಆರಂಭ ಪಡೆದಿದ್ದರಿಂದ ಇಂದು ಶತಕ ಗಳಿಸಲು ಸಹಾಯವಾಯಿತು. ವಿಶ್ವದ ನಂ.1 ಟಿ20 ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ತೆರಳಿದರು.

 ಕಿವೀಸ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸೂರ್ಯಕುಮಾರ್

ಕಿವೀಸ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಸೂರ್ಯಕುಮಾರ್

ಇನ್ನು ಭಾರತದ ಇನ್ನಿಂಗ್ಸ್ ಅನ್ನು ಇಶಾನ್ ಕಿಶನ್ ಮತ್ತು ರಿಷಭ್ ಪಂತ್ ಆರಂಭಿಸಿದರು. ಆದರೆ ರಿಷಭ್ ಪಂತ್ 13 ಎಸೆತಗಳಲ್ಲಿ ಕೇವಲ 6 ರನ್ ಗಳಿಸಿ ನಿರಾಸೆ ಮೂಡಿಸಿದರು.

ಮೌಂಟ್ ಮೌಂಗನುಯಿ ಮೈದಾನದಲ್ಲಿ ನ್ಯೂಜಿಲೆಂಡ್‌ನ ಇಬ್ಬರು ಸ್ಪಿನ್ನರ್‌ಗಳಾದ ಇಶ್ ಸೋಧಿ ಮತ್ತು ಮಿಚೆಲ್ ಸ್ಯಾಂಟ್ನರ್ ಅವರ ಬೌಲಿಂಗ್ ದಾಳಿಯನ್ನು ಸೂರ್ಯಕುಮಾರ್ ಸಮರ್ಥವಾಗಿ ಎದುರಿಸಿದರು. ಸೂರ್ಯಕುಮಾರ್ ಸ್ಕೋರ್‌ಬೋರ್ಡ್‌ನಲ್ಲಿ ರನ್ ಹೆಚ್ಚಿಸುವಂತೆ ನೋಡಿಕೊಂಡರು.

ಅಂತಿಮವಾಗಿ ಆತಿಥೇಯ ತಂಡ ರನ್ ಚೇಸ್‌ನಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಹೋದರು. ಭಾರತೀಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿಲ್ಲ. ಕೊನೆಗೆ ನ್ಯೂಜಿಲೆಂಡ್ 18.5 ಓವರ್‌ಗಳಲ್ಲಿ 126 ರನ್‌ಗಳಿಗೆ ಆಲೌಟ್ ಆಯಿತು.

For Quick Alerts
ALLOW NOTIFICATIONS
For Daily Alerts
Story first published: Sunday, November 20, 2022, 18:26 [IST]
Other articles published on Nov 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X