ಮತ್ತೆ ಸಾಬೀತಾಯ್ತು ಪಾಕ್ ದೌರ್ಬಲ್ಯ: ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ನ್ಯೂಜಿಲೆಂಡ್

ನ್ಯೂಜಿಲೆಂಡ್ ಆತಿಥ್ಯದಲ್ಲಿ ನಡೆಯುತ್ತಿರುವ ಟಿ20 ಸರಣಿಯಲ್ಲಿ ಇಂದು ಆತಿಥೇಯ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಪಾಕಿಸ್ತಾನವನ್ನು ಭಾರೀ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಈ ತ್ರಿಕೋನ ಸರಣಿಯಲ್ಲಿ ಕುತೂಹಕ ಹೆಚ್ಚಾಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಪಾಕಿಸ್ತಾನ ತಂಡಕ್ಕೆ ಹೇಳಿಕೊಳ್ಳುವಂತಾ ಆರಂಭ ದೊರೆಯಲಿಲ್ಲ. ನಂತರದ ಆಟಗಾರರು ಕೂಡ ಉತ್ತಮ ಪ್ರದರ್ಶನ ನೀಡಲು ವಿಫಲವಾದ ಕಾರಣ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 130 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಈ ಮೊತ್ತವನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ಕೇವಲ ಒಂದು ವಿಕೆಟ್ ಕಳೆದುಕೊಂಡು 16.1 ಓವರ್‌ಗಳಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮೊದಲ ಹಂತದಲ್ಲಿ ಅನುಭವಿಸಿದ್ದ ಸೋಲಿಗೆ ಕಿವೀಸ್ ಪಡೆ ಸೇಡು ತೀರಿಸಿಕೊಂಡಿದೆ.

ಮತ್ತೆ ಸಾಬೀತಾಯ್ತು ಪಾಕ್ ದೌರ್ಬಲ್ಯ
ಇನ್ನು ಪಾಕಿಸ್ತಾನ ತಂಡದ ದೌರ್ಬನ್ಯ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ಪಾಕಿಸ್ತಾನ ತಂಡ ಆರಂಭಿಕ ಆಟಗಾರರಾದ ನಾಯಕ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅವರನ್ನು ಅತಿಯಾಗಿ ನೆಚ್ಚಿಕೊಂಡಿದೆ ಎಂಬುದು ಈ ಪಂದ್ಯದಲ್ಲಿಯೂ ಸ್ಪಷ್ಟವಾಗಿದೆ. ಇಂದಿನ ಪಂದ್ಯದಲ್ಲಿ ಮೊಹಮ್ಮದ್ ರಿಜ್ವಾನ್ 16 ರನ್‌ಗಳಿಸಿ ವಿಕೆಟ್ ಕಳೆದುಕೊಂಡರೆ ಬಾಬರ್ ಅಜಂ 21 ರನ್‌ಗೆ ಆಟವನ್ನು ಮುಗಿಸಿದರು. ಮೊದಲ ವಿಕೆಟ್‌ಗೆ 30 ರನ್‌ಗಳ ಜೊತೆಯಾಟ ಈ ಜೋಡಿಯಿಂದ ಬಂದಿತ್ತು. ಆದರೆ ಉಳಿದ ಆಟಗಾರರಿಂದ ಸಮರ್ಥ ಪ್ರದರ್ಶನ ಬಾರದ ಕಾರಣ ಪಾಕಿಸ್ತಾನ ತಂಡ 7 ವಿಕೆಟ್ ಕಳೆದುಕೊಂಡು ಕೇವಲ 130 ರನ್‌ಗಳನ್ನಷ್ಟೇ ಗಳಿಸಲು ಶಕ್ತವಾಯಿತು.

ಭರ್ಜರಿ ಪ್ರದರ್ಶನ ನೀಡಿದ ಕಿವೀಸ್ ಆರಂಭಿಕರು
ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರವಾಗಿ ಆರಂಭಿಕರಾಗಿ ಕಣಕ್ಕಿಳಿದ ಫಿನ್ ಅಲೆನ್ ಹಾಗೂ ಡೆವೀನ್ ಕಾನ್ವೆ ಜೋಡಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. ಈ ಜೋಡಿಯೇ ಬಹುತೇಕ ಪಂದ್ಯವನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಮೊದಲ ವಿಕೆಟ್‌ಗೆ 117 ರನ್‌ಗಳ ಜೊತೆಯಾಟ ಈ ಜೋಡಿಯಿಂದ ಬಂದಿತ್ತು. ಫಿನ್ ಅಲೆನ್ 62 ರನ್‌ಗಳ ಕೊಡುಗೆ ನೀಡಿ ವಿಕೆಟ್ ಕಳೆದುಕೊಂಡರು. ಡೆವೋನ್ ಕಾನ್ವೆ ಅಜೇಯ 49 ರನ್‌ಗಳನ್ನು ಗಳಿಸಿದರೆ ನಾಯಕ ಕೇನ್ 9 ರನ್‌ಗಳಿಸಿ ಅಜೃಯವಾಗುಳಿದರು. ಈ ಮೂಲಕ ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ 9 ವಿಕೆಟ್‌ಗಳ ಅಂತರದ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಸೇಡು ತೀರಿಸಿಕೊಂಡ ಕಿವೀಸ್
ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಮೊದಲ ಪಂದ್ಯದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ. ಇದನ್ನು ಮೊದಲು ಇದೇ ಸರಣಿಯಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದಾಗ ಪಾಕ್ ಪಡೆ ಕಿವಿಸ್ ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿತ್ತು. ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದ ಕಿವಿಸ್ ಪಡೆಯನ್ನು ಪಾಕಿಸ್ತಾನ ಭರ್ಜರಿಯಾಗಿ ಮಣಿಸಿತ್ತು. ಆ ಪಂದ್ಯದಲ್ಲಿ ಬಾಬರ್ ಅಜಂ ಅಜೇಯ 79 ರನ್‌ಗಳ ಕೊಡುಗೆ ನೀಡಿದ್ದರು. ಅದಕ್ಕೂ ಮುನ್ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಪಾಕ್ ತಂಡ 21 ರನ್‌ಗಳ ಅಂತರದ ಗೆಲುವು ಸಾಧಿಸಿತ್ತು. ಆ ಪಂದ್ಯದಲ್ಲಿ ರಿಜ್ವಾನ್ 78 ರನ್‌ಗಳ ಕೊಡುಗೆ ನೀಡಿದ್ದರು.

ಇತ್ತಂಡಗಳ ಆಡುವ ಬಳಗ
ನ್ಯೂಜಿಲೆಂಡ್ ಆಡುವ ಬಳಗ: ಫಿನ್ ಅಲೆನ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಜೇಮ್ಸ್ ನೀಶಮ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಬ್ಲೇರ್ ಟಿಕ್ನರ್
ಬೆಂಚ್: ಆಡಮ್ ಮಿಲ್ನೆ, ಟ್ರೆಂಟ್ ಬೌಲ್ಟ್, ಲಾಕಿ ಫರ್ಗುಸನ್, ಡೇನ್ ಕ್ಲೀವರ್, ಮಾರ್ಟಿನ್ ಗಪ್ಟಿಲ್
ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಶಾನ್ ಮಸೂದ್, ಹೈದರ್ ಅಲಿ, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಹನವಾಜ್ ದಹಾನಿ
ಬೆಂಚ್: ಹಾರಿಸ್ ರೌಫ್, ಉಸ್ಮಾನ್ ಖಾದಿರ್, ಶಾಹೀನ್ ಅಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications