For Quick Alerts
ALLOW NOTIFICATIONS  
For Daily Alerts
 

NZ vs SL: ಏಕದಿನ ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದೇ ಬಿಟ್ರು ರಚಿನ್ ರವೀಂದ್ರ; ಏನದು?

ಗುರುವಾರ, ನವೆಂಬರ್ 9ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 41ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಶ್ರೀಲಂಕಾ ತಂಡದ ಬ್ಯಾಟರ್‌ಗಳು 171 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿದ್ದಾರೆ.

ಶ್ರೀಲಂಕಾ ನೀಡಿದ 172 ರನ್‌ಗಳ ಸುಲಭ ಗುರಿ ಬೆನ್ನಟ್ಟಿರುವ ನ್ಯೂಜಿಲೆಂಡ್ ತಂಡ ಸದ್ಯ ಯಾವುದೇ ವಿಕೆಟ್ ನಷ್ಟವಿಲ್ಲದೆ, 12 ಓವರ್‌ಗಳಲ್ಲಿ 86 ರನ್ ಗಳಿಸಿದೆ. ಡೆವೊನ್ ಕಾನ್ವೇ ಮತ್ತು ರಚಿನ್ ರವೀಂದ್ರ ಕ್ರೀಸ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

NZ vs SL: Rachin Ravindra Breaks Sachin Tendulkars ODI World Cup Record; What is That?

ಇದೇ ವೇಳೆ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಆರಂಭಿಕ ಬ್ಯಾಟರ್ ರಚಿನ್ ರವೀಂದ್ರ ಅವರು 25ನೇ ವರ್ಷಕ್ಕೆ ಕಾಲಿಡುವ ಮೊದಲೇ ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿಹಾಕಿದ್ದಾರೆ.

1996ರ ವಿಶ್ವಕಪ್‌ನಲ್ಲಿ 23 ವರ್ಷದವರಾಗಿದ್ದ ಸಚಿನ್ ತೆಂಡೂಲ್ಕರ್ ಅವರ 523 ರನ್‌ಗಳ ದಾಖಲೆಯನ್ನು ಎಡಗೈ ಆಟಗಾರ ರಚಿನ್ ರವೀಂದ್ರ ಇದೀಗ ಹಿಂದಿಕ್ಕಿದರು. ರವೀಂದ್ರ ಅವರು ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಮಹೀಶ್ ತೀಕ್ಷಣ ಅವರ ಬೌಲಿಂಗ್‌ನಲ್ಲಿ ಒಂದು ರನ್ ಗಳಿಸುವುದರೊಂದಿಗೆ ಈ ಸಾಧನೆ ಮಾಡಿದರು.

ಗುರುವಾರದ ಪಂದ್ಯಕ್ಕೂ ಮುನ್ನ ರಚಿನ್ ರವೀಂದ್ರ ಎಂಟು ಇನ್ನಿಂಗ್ಸ್‌ಗಳಲ್ಲಿ 74.71ರ ಸರಾಸರಿಯಲ್ಲಿ 523 ರನ್‌ ಗಳಿಸಿದ್ದರು. ಕಿವೀಸ್ ಯುವ ಬ್ಯಾಟರ್ ಈ ಏಕದಿನ ವಿಶ್ವಕಪ್‌ನಲ್ಲಿ ಮೂರು ಶತಕ ಮತ್ತು ಎರಡು ಅರ್ಧಶತಕಗಳನ್ನು ಬಾರಿಸಿದ್ದಾರೆ ಮತ್ತು ಪ್ರಸಕ್ತ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರಾಗಿದ್ದಾರೆ.

NZ vs SL: Rachin Ravindra Breaks Sachin Tendulkars ODI World Cup Record; What is That?

ಶ್ರೀಲಂಕಾ ವಿರುದ್ಧದ ಇನ್ನಿಂಗ್ಸ್ ಸಮಯದಲ್ಲಿ ರಚಿನ್ ರವೀಂದ್ರ ಅವರು ತಮ್ಮ ಚೊಚ್ಚಲ ಏಕದಿನ ವಿಶ್ವಕಪ್ ಆವೃತ್ತಿಯಲ್ಲಿ ಇಂಗ್ಲೆಂಡ್‌ನ ಜಾನಿ ಬೈರ್‌ಸ್ಟೋವ್ ಅವರಿಗಿಂತ ಹೆಚ್ಚು ರನ್ ಗಳಿಸಿದರು. 2019ರ ಆವೃತ್ತಿಯಲ್ಲಿ ಇಂಗ್ಲೆಂಡ್ ತಮ್ಮ ಮೊದಲ ವಿಶ್ವಕಪ್ ಟ್ರೋಫಿ ಗೆದ್ದಾಗ ಜಾನಿ ಬೈರ್‌ಸ್ಟೋವ್ 11 ಇನ್ನಿಂಗ್ಸ್‌ಗಳಲ್ಲಿ 532 ರನ್ ಗಳಿಸಿದ್ದರು.

ಇನ್ನು ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡ ಕುಸಲ್ ಪೆರೇರಾ ಅವರ ಏಕೈಕ ಅರ್ಧಶತಕದ ನೆರವಿನಿಂದ 46.4 ಓವರ್‌ಗಳಲ್ಲಿ 171 ರನ್‌ಗಳಿಗೆ ಸರ್ವಪತನ ಕಂಡಿತು.

ಶ್ರೀಲಂಕಾ ತಂಡದ ಇನ್ನಿಂಗ್ಸ್ ಆರಂಭಿಸಿದ ಕುಸಲ್ ಪೆರೇರಾ ಮತ್ತು ಪಾಥುಮ್ ನಿಸ್ಸಾಂಕ ಜೋಡಿ ಮತ್ತೊಮ್ಮೆ ಕಳಪೆ ಆರಂಭ ನೀಡಿತು. ತಂಡದ ಮೊತ್ತ 3 ರನ್‌ಗಳಾಗುವಷ್ಟರಲ್ಲಿ 2 ರನ್ ಗಳಿಸಿದ್ದ ಪ್ರಮುಖ ಬ್ಯಾಟರ್ ಪಾಥುಮ್ ನಿಸ್ಸಾಂಕ ವಿಕೆಟ್ ಕಳೆದುಕೊಂಡಿತು.

ಈ ವೇಳೆ ಕ್ರೀಸ್‌ಗೆ ಬಂದ ನಾಯಕ ಕುಸಲ್ ಮೆಂಡೀಸ್ ಹೆಚ್ಚು ನಿಲ್ಲದೆ 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಸದೀರ ಸಮರವಿಕ್ರಮ 1 ರನ್, ಚರಿತ್ ಅಸಲಂಕಾ 8 ರನ್ ಮಾತ್ರ ಗಳಿಸಿದರು.

ಎಡಗೈ ಬ್ಯಾಟರ್ ಕುಸಾಲ್ ಪೆರೇರಾ 22 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ತಲುಪಿದರು. ಅಂತಿಮವಾಗಿ, ಕುಸಾಲ್ ಪೆರೆರಾ 28 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳನ್ನು ಒಳಗೊಂಡ 51 ರನ್‌ ಗಳಿಸಿದ್ದಾಗ ಲಾಕಿ ಫರ್ಗುಸನ್ ಅವರಿಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಏಂಜೆಲೊ ಮ್ಯಾಥ್ಯೂಸ್ 27 ಎಸೆತಗಳಲ್ಲಿ 2 ಬೌಂಡರಿ ಸಮೇತ 16 ರನ್ ಗಳಿಸಿದರೆ, ಧನಂಜಯ್ ಡಿ ಸಿಲ್ವ 24 ಎಸೆತಗಳನ್ನು ಎದುರಿಸಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 19 ರನ್ ಗಳಿಸಿ ಕಿವೀಸ್ ಬೌಲರ್‌ಗಳಿಗೆ ಪ್ರತಿರೋಧ ನೀಡಿದರು. ಚಮಿಕ ಕರುಣಾರತ್ನೆ 6 ರನ್, ದುಶ್ಮಂತ್ ಚಮೀರ 1 ರನ್ ಗಳಿಸಿ ಔಟಾದರು.

ಇನ್ನು ಮಹೀಶ್ ತೀಕ್ಷಣ ಮತ್ತು ದಿಲ್ಶನ್ ಮಧುಶಂಕ ಕೊನೆಯ ವಿಕೆಟ್‌ಗೆ 43 ರನ್‌ಗಳ ಜೊತೆಯಾಟ ನೀಡಿ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು. ಮಹೀಶ್ ತೀಕ್ಷಣ 91 ಎಸೆತಗಳಲ್ಲಿ 3 ಬೌಂಡರಿ ಮೂಲಕ ಅಜೇಯ 39 ರನ್ ಗಳಿಸಿದರೆ, ದಿಲ್ಶನ್ ಮಧುಶಂಕ 48 ಎಸೆತಗಳಲ್ಲಿ 2 ಬೌಂಡರಿ ಸಹಾಯದಿಂದ 19 ರನ್ ಗಳಿಸಿ ಔಟಾದರು.

Story first published: Thursday, November 9, 2023, 19:06 [IST]
Other articles published on Nov 9, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+