ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಮ್ಮ ಮುಂದಿದ್ದ ಜವಾಬ್ಧಾರಿಯುತ ಆಯ್ಕೆ ಇದೊಂದೆ: ಪಾಕ್ ಸರಣಿ ಮುಂದೂಡಿಕೆ ಬಳಿಕ ನ್ಯೂಜಿಲೆಂಡ್ ಕ್ರಿಕೆಟ್ ಪ್ರತಿಕ್ರಿಯೆ

NZC chief David White said This is the only responsible option on call off Pakistan tour

ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಈ ಸರಣಿಯನ್ನು ಮುಂದೂಡಲು ನಿರ್ಧರಿಸಿದೆ. ಭದ್ರತೆಯ ಕಾರಣಗಳನ್ನು ನೀಡಿರುವ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಪ್ರವಾಸವನ್ನು ಮೊಟಕುಗೊಳಿಸಲು ನಿರ್ಧರಿಸಿದೆ. ಈ ಮೂಲಕ ಸುದೀರ್ಘ 18 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ತೆರಳಿದ ನ್ಯೂಜಿಲೆಂಡ್ ಆಡದೆಯೇ ವಾಪಾಸಾಗಬೇಕಿದೆ. ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ಈ ನಿರ್ಧಾರದ ಬಗ್ಗೆ ನ್ಯೂಜಿಲೆಂಡ್ ಕ್ರಿಕೆಟ್ ಮುಖ್ಯಸ್ಥ ಡೇವಿಡ್ ವೈಟ್ ಪ್ರತಿಕ್ರಿಯೆ ನೀಡಿದ್ದು ನಮ್ಮ ಮುಂದೆ ಬೇರೆ ಯಾವುದೇ ಆಯ್ಕೆಗಳು ಇಲ್ಲ ಹೀಗಾಗಿ ಸರಣಿಯನ್ನು ಮುಂದೂಡುವುದು ಅನಿವಾರ್ಯ ಎಂದಿದ್ದಾರೆ.

ಐಪಿಎಲ್: ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದ ಡೆಲ್ಲಿ ಕ್ಯಾಪಿಟಲ್ಸ್ಐಪಿಎಲ್: ನಾಯಕ ಯಾರು ಎಂಬ ಗೊಂದಲಕ್ಕೆ ತೆರೆ ಎಳೆದ ಡೆಲ್ಲಿ ಕ್ಯಾಪಿಟಲ್ಸ್

ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತೆಗೆದುಕೊಂಡಿರುವ ಈ ನಿರ್ಧಾರದಿಂದಾಗಿ ಸಂಪೂರ್ಣ ಸೀಮಿತ ಓವರ್‌ಗಳ ಸರಣಿಯಿಂದಲೇ ಹಿಂದಕ್ಕೆ ಸರಿಯಲಾಗಿದೆ. ಈಗ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಆಟಗಾರರು ಸುರಕ್ಷಿತವಾಗಿ ತವರಿಗೆ ಮರಳುವ ವಿಚಾರವಾಗಿ ಏರ್ಪಾಡುಗಳನ್ನು ಮಾಡಿಕೊಳ್ಳಲಾಗುತ್ತದೆ. 18 ವರ್ಷಗಳ ನಂತರ ನ್ಯೂಜಿಲೆಂಡ್ ಕ್ರಿಕೆಟ್‌ ತಂಡ ಪಾಕಿಸ್ತಾನಕ್ಕೆ ತೆರಳಿ ಕ್ರಿಕೆಟ್ ಆಡಲು ಸಜ್ಜಾಗಿತ್ತು.

ಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿಟೀಮ್ ಇಂಡಿಯಾಗೆ ಈ ಆಟಗಾರರು ನೂತನ ನಾಯಕ ಮತ್ತು ಉಪನಾಯಕರಾಗಬೇಕೆಂದು ಸೂಚಿಸಿದ ಕೊಹ್ಲಿ

ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಹಾಗೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸೆಣೆಸಾಡಬೇಕಾಗಿತ್ತು. ಸೆಪ್ಟೆಂಬರ್ 17ರಿಂದ ಅಕ್ಟೋಬರ್ 3ರ ವರೆಗೆ ಈ ಸರಣಿಯನ್ನು ಆಯೋಜಿಸಾಗಿತ್ತು. ರಾವಲ್ಪಿಂಡಿ ಹಾಗೂ ಲಾಹೋರ್ ಈ ಸರಣಿಯ ಆತಿಥೇಯವನ್ನು ವಹಿಸಿಕೊಳ್ಳಬೇಕಾಗಿತ್ತು.

ಟಿ20 ವಿಶ್ವಕಪ್‌ ಸೋತ್ರೆ ಏಕದಿನ ನಾಯಕತ್ವವೂ ತ್ಯಜಿಸುತ್ತಾರಾ ವಿರಾಟ್ ಕೊಹ್ಲಿ!?ಟಿ20 ವಿಶ್ವಕಪ್‌ ಸೋತ್ರೆ ಏಕದಿನ ನಾಯಕತ್ವವೂ ತ್ಯಜಿಸುತ್ತಾರಾ ವಿರಾಟ್ ಕೊಹ್ಲಿ!?

ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಡೇವಿಡ್ ವೈಟ್, ಭದ್ರತಾ ವಿಚಾರವಾಗಿ ತಾನು ಸ್ವೀಕರಿಸಿದ ಸಲಹೆಯ ಕಾರಣದಿಂದಾಗಿ ಈ ಪ್ರವಾಸವನ್ನು ಮುಂದುವರಿಸಲು ಸಾಧ್ಯವೇ ಇಲ್ಲ ಎಂದಿದ್ದಾರೆ. "ನನಗೆ ಗೊತ್ತಿದೆ ಇದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹಿನ್ನಡೆಯಾಗುತ್ತದೆ. ನಮಗೆ ಅವರು ಸದಭುತವಾದ ಆತಿಥ್ಯವನ್ನು ನೀಡಿದ್ದಾರೆ. ಆದರೆ ನಮ್ಮ ಆಟಗಾರರ ಸುರಕ್ಷತೆ ನಮಗೆ ಮೊದಲ ಆದ್ಯತೆಯಾಗಿದೆ. ಈಗ ನಮಗಿರುವ ಜವಾಬ್ಧಾರಿಯುತ ಆಯ್ಕೆಯೆಂದರೆ ಇದೊಂದೇ ಎಂದು ನಾನು ನಂಬಿಕೊಂಡಿದ್ದೇನೆ" ಎಂದು ಡೇವಿಡ್ ವೈಟ್ ವಿವರಿಸಿದ್ದಾರೆ.

Story first published: Friday, September 17, 2021, 17:24 [IST]
Other articles published on Sep 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X