ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ತಂಡ ಪ್ರಕಟಿಸಿದ ಜಿಂಬಾಬ್ವೆ

ಭಾರತದ ನಂತರ ಮತ್ತೊಂದು ಅಗ್ರ ತಂಡದ ವಿರುದ್ಧ ಏಕದಿನ ಸರಣಿಯನ್ನಾಡಲು ಜಿಂಬಾಬ್ವೆ ತಂಡ ಸಜ್ಜಾಗಿದೆ. ಆಸ್ಟ್ರೇಲಿಯಾ ತಂಡದ ವಿರುದ್ಧ ಜಿಂಬಾಬ್ವೆ ಏಕದಿನ ಸರಣಿಯಲ್ಲಿ ಭಾಗಿಯಾಗಲಿದ್ದು ಇದಕ್ಕೆ ಇಂದು ತಂಡವನ್ನು ಪ್ರಕಟಿಸಿದೆ. ಆಗಸ್ಟ್ 28ರಿಂದ ಈ ಸರಣಿ ಆರಂಭವಾಗಲಿದ್ದು ಆಸ್ಟ್ರೇಲಿಯಾದ ಟೌನ್‌ವಿಲ್ಲೆನಲ್ಲಿ ಈ ಸರಣಿ ಆಯೋಜನೆಯಾಗಲಿದೆ.
ಈ ಸರಣಿಯ ಮೂಲಕ ಬ್ಲೆಸ್ಸಿಂಗ್ ಮುಸರಬಾನಿ ಕಮ್‌ಬ್ಯಾಕ್ ಮಾಡಿದ್ದಾರೆ. ಬಾಂಗ್ಲಾದೇಶ ಹಾಗೂ ಭಾರತದ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಮುಸರಬಾನಿ ಆಸಿಸ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದು ಸರಣಿಯ ಮೂರು ಪಂದ್ಯದಲ್ಲಿಯೂ ಕಣಕ್ಕಿಳಿಯುವ ನಿರೀಕ್ಷೆಯಿದೆ. ಗಾಯದ ಕಾರಣದಿಂದಾಗಿ ಕಳೆದ ಎರಡು ಸರಣಿಗಳಿಂದ ಜಿಂಬಾಬ್ವೆಯ ಈ ಪ್ರತಿಭಾನ್ವಿತ ಆಟಗಾರ ಹೊರಗುಳಿದಿದ್ದರು. 33 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಆಡಿರುವ ಈ ಆಟಗಾರ 46 ವಿಕೆಟ್ ಪಡೆದುಕೊಂಡಿದ್ದಾರೆ.
ಇನ್ನು ಮುಸರಬಾನಿ ಈ ಸರಣಿಯ ಮೂಲಕ ಕಮ್‌ಬ್ಯಾಕ್ ಮಾಡುತ್ತಿದ್ದರೂ ತಂಡದ ಖಾಯಂ ನಾಯಕ ಕ್ರೇಗ್ ಇರ್ವೀನ್ ಇನ್ನೂ ತಂಡಕ್ಕೆ ಮರಳಲು ಸಫಲವಾಗಿಲ್ಲ. ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಇರ್ವೀಸ್ ಆಸಿಸ್ ವಿರುದ್ಧದ ಸರಣಿಯಿಂದಲೂ ಹೊರಗುಳಿದಿದ್ದಾರೆ. ಇವರ ಅಲಭ್ಯತೆಯಲ್ಲಿ ರೇಗಿಸ್ ಚಕಬ್ವಾ ತಮಡವನ್ನು ಆಸಿಸ್ ವಿರುದ್ಧದ ಸರಣಿಯಲ್ಲಿ ಮುನ್ನಡೆಸಲಿದ್ದಾರೆ.
ಜಿಂಬಾಬ್ವೆ ತಂಡ: ರೆಗಿಸ್ ಚಕಬ್ವಾ (ಕ್ಯಾಪ್ಟನ್, wk), ರಿಯಾನ್ ಬರ್ಲ್, ಬ್ರಾಡ್ ಇವಾನ್ಸ್, ಲ್ಯೂಕ್ ಜೊಂಗ್ವೆ, ಇನೋಸೆಂಟ್ ಕೈಯಾ, ತಕುಡ್ಜ್ವಾನಾಶೆ ಕೈಟಾನೊ, ಕ್ಲೈವ್ ಮದಂಡೆ (WK), ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ಟೋನಿ ಮುನ್ಯೊಂಗ, ಆಶೀರ್ವಾದ ಮುಜರಬಾನಿ, ರಿಚರ್ಡ್ ನಾಗರವ, ವಿಕ್ಟರ್ ನ್ಯುಚಿ, ಸಿಕಂದರ್ ರಜಾ ಮತ್ತು ಸೀನ್ ವಿಲಿಯಮ್ಸ್
ಆಸ್ಟ್ರೇಲಿಯಾ ತಂಡ: ಆರನ್ ಫಿಂಚ್ (ಸಿ), ಸೀನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮರಾನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications