ತ್ರಿಕೋನ ಏಕದಿನ ಸರಣಿ: ವಿಂಡೀಸ್‌ಗೆ ಸೋಲುಣಿಸಿದ ಬಾಂಗ್ಲಾ ಫೈನಲ್‌ಗೆ

ಡಬ್ಲಿನ್, ಮೇ 14: ಮುಂಬರುವ ವಿಶ್ವಕಪ್ ಟೂರ್ನಿಗೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿರುವ ಬಾಂಗ್ಲಾದೇಶ ತಂಡ ಇಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 5 ವಿಕೆಟ್‌ಗಳಿಂದ ಬಗ್ಗುಬಡಿದು, ಇನ್ನೊಂದು ಪಂದ್ಯ ಬಾಕಿ ಇರುವಾಗಲೇ ಫೈನಲ್‌ಗೆ ದಾಪುಗಾಲಿಟ್ಟಿದೆ.
ಇದರೊಂದಿಗೆ ತ್ರಿಕೋನ ಸರಣಿಯಲ್ಲಿ ಫೈನಲ್ ತಲುಪುವ ಕನಸು ಕಂಡಿದ್ದ ಆತಿಥೇಯ ಐರ್ಲೆಂಡ್‌ಗೆ ನಿರಾಸೆ ಎದುರಾಗಿದ್ದು, ಬುಧವಾರ ನಡೆಯಲಿರುವ ಅಂತಿಮ ರೌಂಡರ್ ರಾಬಿನ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಗೌರವಕ್ಕಾಗಿ ಹೋರಾಟ ನಡೆಸಲಿದೆ. ವೆಸ್ಟ್ ಇಂಡೀಸ್ ತಂಡ ಈ ಮೊದಲೇ ಫೈನಲ್ ಪ್ರವೇಶ ಪಡೆದಿತ್ತು.
ಇಲ್ಲಿನ ದಿ ವಿಲೇಜ್ ಕ್ರೀಡಾಂಗಣದಲ್ಲಿ ಸೋಮವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್, ಶೇಯ್ ಹೋಪ್ (87) ಅವರ ಸ್ಥಿರ ಪ್ರದರ್ಶನದ ಬಲದಿಂದ ತನ್ನ ಪಾಲಿನ 50 ಓವರ್‌ಗಳಲ್ಲಿ 9 ವಿಕೆಟ್‌ಗೆ 247 ರನ್‌ಗಳ ಸಾಧಾರಣ ಮೊತ್ತ ಪೇರಿಸಿತು. ಬಾಂಗ್ಲಾ ಪರ ಸ್ಟಾರ್ ವೇಗಿ ಮುಸ್ತಾಫಿಜುರ್ ರೆಹ್ಮಾನ್ (43ಕ್ಕೆ 4) ಭರ್ಜರಿ ಬೌಲಿಂಗ್ ದಾಳಿ ಸಂಘಟಿಸಿ ವಿಂಡೀಸ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿದರು.
ಬಳಿಕ ಗುರಿ ಬೆನ್ನತ್ತಿದ ಬಾಂಗ್ಲಾ ತಂಡ ಸಂಘಟಿತ ಪ್ರದರ್ಶನ ನೀಡಿ 47.2 ಓವರ್‌ಗಳಲ್ಲಿ 5 ವಿಕೆಟ್‌ಗೆ 248 ರನ್‌ಗಳನ್ನು ಗಳಿಸುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು. ಬಾಂಗ್ಲಾ ಪರ ಅಗ್ರ ಕ್ರಮಾಂಕದಲ್ಲಿ ಸೌಮ್ಯ ಸರ್ಕಾರ್ (54) ಮತ್ತು ಮುಷ್ಫಿಕರ್ ರಹೀಮ್ (63) ಅರ್ಧಶತಕಗಳನ್ನು ದಾಖಲಿಸುವ ಮೂಲಕ ತಂಡದ ಜಯದ ಹಾದಿಯನ್ನು ಸುಗಮವಾಗಿಸಿದರು.
ವೆಸ್ಟ್ ಇಂಡೀಸ್ ತಂಡ ಕಳೆದ ಒಂದು ವಾರದಲ್ಲಿ ಬಾಂಗ್ಲಾದೇಶ ವಿರುದ್ಧ 2 ಪಂದ್ಯಗಳನ್ನು ಸೋತಿದ್ದು, ಶುಕ್ರವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿ ಗೆಲುವಿಗಾಗಿ ಕಾದಾಟ ನಡೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications