India's Squad For World Cup 2023: ಏಕದಿನ ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡ ಫೈನಲ್!
2023ರ ಏಷ್ಯಾ ಕಪ್ ಪಂದ್ಯಾವಳಿ ನಡೆಯುತ್ತಿರುವಾಗಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಮುಂಬರುವ 2023ರ ಏಕದಿನ ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಅಂತಿಮಗೊಳಿಸಲಾಗಿದೆ ಎಂದು ವರದಿಯಾಗಿದೆ.
ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರು ಶ್ರೀಲಂಕಾಕ್ಕೆ ತೆರಳಿದ್ದು, ಅಲ್ಲಿ ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಿ ವಿಶ್ವಕಪ್‌ಗೆ ಭಾರತೀಯ ತಂಡವನ್ನು ಆಯ್ಕೆ ಮಾಡಿದ್ದಾರೆ.

ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಅವರು ವಿಶ್ವಕಪ್‌ನ ಭಾರತ ತಂಡದಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ಆದರೆ ಕೆಎಲ್ ರಾಹುಲ್ ಅಗ್ರ ಆಯ್ಕೆಗಳಲ್ಲಿ ಒಬ್ಬರಾಗಿದ್ದಾರೆ. ಇನ್ನು ಪಾಕಿಸ್ತಾನ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಇಶಾನ್ ಕಿಶನ್ ಆಯ್ಕೆ ಸಂದಿಗ್ಧತೆಯಿಂದ ಕೂಡಿದೆ.
ಇನ್ನು ಭಾರತ ತಂಡದ ಆಯ್ಕೆ ಸಮಿತಿಯು ಕೆಎಲ್ ರಾಹುಲ್ ಅವರ ಫಿಟ್ನೆಸ್ ಕಾಳಜಿಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದೆ. ಪ್ರಮುಖ ಬ್ಯಾಟರ್‌ನ ಫಿಟ್‌ನೆಸ್ ಬಗ್ಗೆ ವೈದ್ಯಕೀಯ ತಂಡವು ಹಸಿರು ನಿಶಾನೆ ತೋರಿದ ನಂತರವೇ ಅವರನ್ನು ಐಸಿಸಿ ಪಂದ್ಯಾವಳಿಯ ಭಾರತ ತಂಡಕ್ಕೆ ಸೇರಿಸಲಾಗಿದೆ.

2023ರ ಏಷ್ಯಾ ಕಪ್ ಪಂದ್ಯಾವಳಿಗಾಗಿ ಭಾರತ ತಂಡವನ್ನು ಸೇರಲು ಕೆಎಲ್ ರಾಹುಲ್ ಶೀಘ್ರದಲ್ಲೇ ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.
2023ರ ಏಕದಿನ ವಿಶ್ವಕಪ್‌ಗಾಗಿ ತಂಡವನ್ನು ಸಲ್ಲಿಕೆ ಮಾಡುವ ಗಡುವು ಸೆಪ್ಟೆಂಬರ್ 5 ಆಗಿದೆ. ಬಹುತೇಕ ಪ್ರತಿಯೊಬ್ಬ ಆಟಗಾರರ ಲಭ್ಯತೆಯೊಂದಿಗೆ ಬಿಸಿಸಿಐ ಇನ್ನು ಮುಂದೆ ಕಾಯಲು ಬಯಸದೆ, ತಂಡವನ್ನು ಸಲ್ಲಿಕೆ ಮಾಡಲಿದೆ.
ಇತ್ತೀಚೆಗೆ, ಅಜಿತ್ ಅಗರ್ಕರ್ ಅವರು 2023ರ ಏಷ್ಯಾ ಕಪ್ ಆಡಲು ಶ್ರೀಲಂಕಾಕ್ಕೆ ಪ್ರಯಾಣಿಸಿದ ಆಟಗಾರರ ತಂಡದಿಂದ ಭಾರತದ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಸುಳಿವು ನೀಡಿದ್ದರು.
ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ 2023ರ ಏಕದಿನ ವಿಶ್ವಕಪ್ ಅಭಿಯಾನ ಆರಂಭ
ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ಭಾರತ ತಂಡವು ತನ್ನ 2023ರ ಏಕದಿನ ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ.
ನಂತರ, ಭಾರತ ಮತ್ತು ಪಾಕಿಸ್ತಾನ ನಡುವಿನ ಬಹು ನಿರೀಕ್ಷಿತ ಹೈ-ವೋಲ್ಟೇಜ್ ಪಂದ್ಯವು ಅಕ್ಟೋಬರ್ 14ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.
ವಿಶ್ವಕಪ್ ಪಂದ್ಯಾವಳಿಗೆ ಒಂದೇ ತಿಂಗಳು ಬಾಕಿ ಉಳಿದಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವು ತವರಿನಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನಗಳನ್ನು ನೀಡಲು ಮತ್ತು ದಶಕದ ಬಳಿಕ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಲು ಉತ್ಸುಕರಾಗಿರುತ್ತಾರೆ.
2023ರ ಏಕದಿನ ವಿಶ್ವಕಪ್‌ಗೆ ಸಂಭಾವ್ಯ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications