For Quick Alerts
ALLOW NOTIFICATIONS  
For Daily Alerts
 

World Cup 2023 Opening Ceremony: ವಿಶ್ವಕಪ್‌ನ ಅದ್ಧೂರಿ ಉದ್ಘಾಟನಾ ಸಮಾರಂಭ ರದ್ದು?; ಇಲ್ಲಿದೆ ವಿವರ

ಭಾರತದಲ್ಲಿ ಅಕ್ಟೋಬರ್ 5ರಿಂದ ಪ್ರಾರಂಭವಾಗಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಶುರುವಾಗಿದ್ದು, ಭಾಗವಹಿಸುವ ಎಲ್ಲಾ ಹತ್ತು ತಂಡಗಳು ಈಗಾಗಲೇ ಭಾರತದಲ್ಲಿ ಅಭ್ಯಾಸ ಪಂದ್ಯಗಳಲ್ಲಿ ನಿರತವಾಗಿವೆ.

ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಐಸಿಸಿ ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಭಾರತ ಮಾತ್ರವಲ್ಲದೆ, ಜಗತ್ತಿನಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ.

ODI World Cup 2023 Grand Opening Ceremony Cancelled?; Here is the Details

ಭಾರೀ ಬೆಳವಣಿಗೆಯೊಂದರಲ್ಲಿ, 2023ರ ವಿಶ್ವಕಪ್‌ ಆರಂಭಕ್ಕೂ ಮುನ್ನ, ಅಕ್ಟೋಬರ್ 4ರಂದು ಸಂಜೆ 7 ಗಂಟೆಗೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲಾಗಿದೆ ಎಂಬ ವರದಿಗಳು ಬಂದಿವೆ.

ಅಕ್ಟೋಬರ್ 5ರಂದು ವಿಶ್ವಕಪ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ಕಳೆದ ಬಾರಿಯ ರನ್ನರ್-ಅಪ್ ನ್ಯೂಜಿಲೆಂಡ್ ತಂಡಗಳು ಸೆಣಸಾಡಲಿವೆ.

ಗಮನಾರ್ಹವಾಗಿ, ಈ ಎರಡೂ ತಂಡಗಳು ಲಾರ್ಡ್ಸ್‌ನಲ್ಲಿ ಹಿಂದಿನ ಆವೃತ್ತಿಯ ಏಕದಿನ ವಿಶ್ವಕಪ್‌ನ ರೋಮಾಂಚಕ ಫೈನಲ್ ಪಂದ್ಯದಲ್ಲಿ ಕಾದಾಡಿದ್ದವು. ಆತಿಥೇಯ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ರೆವ್ ಸ್ಪೋರ್ಟ್ಸ್ ವರದಿಯ ಪ್ರಕಾರ, 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗಾಗಿ ನಡೆಯಬೇಕಿದ್ದ ಬಾಲಿವುಡ್ ಸ್ಟಾರ್-ಸ್ಟಡ್ ಉದ್ಘಾಟನಾ ಸಮಾರಂಭವನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ.

ಈ ಹಿಂದೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಕ್ಟೋಬರ್ 4ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯಾವಳಿಯ ಉದ್ಘಾಟನಾ ಪಂದ್ಯಕ್ಕೆ ಒಂದು ದಿನ ಮೊದಲು ಅದ್ದೂರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿತ್ತು.

ಬಾಲಿವುಡ್ ಸ್ಟಾರ್‌ಗಳಾದ ರಣವೀರ್ ಸಿಂಗ್, ಅರಿಜಿತ್ ಸಿಂಗ್, ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ, ಶ್ರೇಯಾ ಘೋಷಾಲ್ ಮತ್ತು ಖ್ಯಾತ ಗಾಯಕಿ ಆಶಾ ಭೋಂಸ್ಲೆ ಸೇರಿದಂತೆ ಬಾಲಿವುಡ್‌ನ ಕೆಲವು ಪ್ರಮುಖ ತಾರೆಯರನ್ನು ಒಳಗೊಂಡಂತೆ ಈ ಅದ್ಧೂರಿ ಕಾರ್ಯಕ್ರಮ ನಡೆಯಬೇಕಿತ್ತು.

ಇನ್ನು ಭಾರತದಲ್ಲಿ 2023ರ ವಿಶ್ವಕಪ್ ಪಂದ್ಯಾವಳಿಯನ್ನು ಪ್ರಾರಂಭಿಸಲು ಪಟಾಕಿಗಳ ಸದ್ದು ಮತ್ತು ಬೆರಗುಗೊಳಿಸುವ ಲೇಸರ್ ಶೋವನ್ನು ಕಣ್ತುಂಬಿಕೊಳ್ಳಲು ಪ್ರೇಕ್ಷಕರು ಕುತೂಹಲದಿಂದ ನಿರೀಕ್ಷಿಸುತ್ತಿದ್ದರು.

ನರೇಂದ್ರ ಮೋದಿ ಸ್ಟೇಡಿಯಂನಲ್ಲಿ 'ಕ್ಯಾಪ್ಟನ್ಸ್ ಡೇ' ಕಾರ್ಯಕ್ರಮದ ನಂತರ, ಸಿನಿಮಾ ತಾರೆಯರ ಪ್ರದರ್ಶನದ ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ 7 ಗಂಟೆಗೆ ಪ್ರಾರಂಭವಾಗಬೇಕಿತ್ತು.

ಕ್ಯಾಪ್ಟನ್ಸ್ ಡೇ ಕಾರ್ಯಕ್ರಮದ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ, ಉದ್ಘಾಟನಾ ಸಮಾರಂಭದ ವಸ್ತುಸ್ಥಿತಿಯ ಬಗ್ಗೆ ಬಿಸಿಸಿಐ ಅಥವಾ ಐಸಿಸಿ ಕಡೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಬಂದಿಲ್ಲ.

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಹತ್ತು ತಂಡಗಳ ನಾಯಕರು ಬಹು ನಿರೀಕ್ಷಿತ 'ಕ್ಯಾಪ್ಟನ್ಸ್ ಡೇ' ಕಾರ್ಯಕ್ರಮಕ್ಕಾಗಿ ಅಹಮದಾಬಾದ್‌ನಲ್ಲಿ ಸೇರಲು ಸಜ್ಜಾಗಿದ್ದಾರೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಅಭಿಯಾನವು ಅಕ್ಟೋಬರ್ 8ರಂದು ಚೆನ್ನೈನಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸುವ ಮೂಲಕ ಪ್ರಾರಂಭಿಸಲಿದೆ. ಐದು ಬಾರಿ ವಿಶ್ವಕಪ್ ಗೆದ್ದು ಈಗ ಆರನೇ ಪ್ರಶಸ್ತಿಯ ಗುರಿಯನ್ನು ಹೊಂದಿರುವ ಆಸ್ಟ್ರೇಲಿಯಾ ವಿಶ್ವಕಪ್ ಇತಿಹಾಸದಲ್ಲಿ ಯಶಸ್ವಿ ತಂಡವಾಗಿದೆ.

ಇನ್ನು ಭಾರತ ತಂಡ ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಹೈ-ವೋಲ್ಟೇಜ್ ಪಂದ್ಯವನ್ನು ಆಡಲಿದೆ.

Story first published: Tuesday, October 3, 2023, 14:36 [IST]
Other articles published on Oct 3, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+