For Quick Alerts
ALLOW NOTIFICATIONS  
For Daily Alerts
 

ODI World Cup History: 1975ರಿಂದ ಈವರೆಗೆ ಏಕದಿನ ವಿಶ್ವಕಪ್ ವಿಜೇತ, ರನ್ನರ್-ಅಪ್ ತಂಡಗಳು

ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಕ್ಷಣಗಣನೆ ಆರಂಭವಾಗಿದ್ದು, ಇದಕ್ಕಾಗಿ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದೆ.

ಅಹಮದಾಬಾದ್‌ನ ಐಕಾನಿಕ್ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಕ್ಟೋಬರ್ 5ರಂದು ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಪಂದ್ಯದ ಮೂಲಕ ಅಧಿಕೃತವಾಗಿ ಐಸಿಸಿ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಫೈನಲ್ ಪಂದ್ಯವು ಅದೇ ಮೈದಾನದಲ್ಲಿ ನವೆಂಬರ್ 19ರಂದು ನಡೆಯಲಿದೆ.

ಇನ್ನು ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸುವುದರ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.

odi-world-cup-history

ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯನ್ನು 1975ರಲ್ಲಿ ಇಂಗ್ಲೆಂಡ್‌ನಲ್ಲಿ ಮೊದಲ ಬಾರಿಗೆ ಆಡಿಸಲಾಯಿತು. ಇದನ್ನು ಪ್ರತಿ ತಂಡಕ್ಕೆ 60 ಓವರ್‌ಗಳ ಏಕದಿನ ಪಂದ್ಯಗಳ ಸರಣಿಯಾಗಿ ಆಡಲಾಗಿತ್ತು.

ನಂತರ ಮೊದಲ ಬಾರಿಗೆ ಇಂಗ್ಲೆಂಡ್‌ನ ಹೊರಗೆ, ಭಾರತ ಮತ್ತು ಪಾಕಿಸ್ತಾನದಲ್ಲಿ 1987ರಲ್ಲಿ ಏಕದಿನ ವಿಶ್ವಕಪ್ ನಡೆಸಲಾಯಿತು. 1987ರ ಪಂದ್ಯಾವಳಿಯಲ್ಲಿ ಪ್ರತಿ ತಂಡಕ್ಕೆ ಓವರ್‌ಗಳ ಸಂಖ್ಯೆಯನ್ನು 50ಕ್ಕೆ ಇಳಿಸಲಾಯಿತು.

ಇದೀಗ ಜಗತ್ತಿನಾದ್ಯಂತ ಕ್ರಿಕೆಟ್ ಪ್ರೇಮಿಗಳು ಆರಂಭದಿಂದ ಈ ವರ್ಷದವರೆಗಿನ ಎಲ್ಲಾ ವಿಶ್ವಕಪ್ ವಿಜೇತರ ತಂಡಗಳ ವಿವರಗಳನ್ನು ತಿಳಿಯಲು ಬಯಸುತ್ತಾರೆ. ಆದ್ದರಿಂದ, ಇಲ್ಲಿ 1975ರಿಂದ 2023ರವರೆಗಿನ ಎಲ್ಲಾ ಏಕದಿನ ಕ್ರಿಕೆಟ್ ವಿಶ್ವಕಪ್ ವಿಜೇತರ ಪಟ್ಟಿ ನೀಡಲಾಗಿದೆ.

ಏಕದಿನ ವಿಶ್ವಕಪ್ ವಿಜೇತರ ಪಟ್ಟಿ

ಇಲ್ಲಿಯವರೆಗೆ 12 ಐಸಿಸಿ ಪುರುಷರ ವಿಶ್ವಕಪ್ ಟೂರ್ನಿಗಳು ನಡೆದಿವೆ. ಬಲಿಷ್ಠ ಆಸ್ಟ್ರೇಲಿಯಾ 5 ಬಾರಿ ವಿಶ್ವಕಪ್ ಗೆದ್ದ ಅತ್ಯಂತ ಯಶಸ್ವಿ ತಂಡವಾಗಿದೆ.

1999, 2003 ಮತ್ತು 2007ರಲ್ಲಿ ಆಸ್ಟ್ರೇಲಿಯಾ ಸತತ ಮೂರು ವಿಶ್ವಕಪ್ ಪಂದ್ಯಾವಳಿಗಳನ್ನು ಗೆದ್ದ ಮೊದಲ ತಂಡವಾಯಿತು. ಭಾರತ ಮತ್ತು ವೆಸ್ಟ್ ಇಂಡೀಸ್ ಮಾತ್ರ ತಲಾ 2 ಬಾರಿ ವಿಶ್ವಕಪ್ ಗೆದ್ದ ಎರಡು ದೇಶಗಳಾಗಿವೆ.

ಭಾರತ ತಂಡ ಕಪಿಲ್ ದೇವ್ ನಾಯಕತ್ವದಲ್ಲಿ 1983 ಮತ್ತು ಎಂಎಸ್ ಧೋನಿ ನಾಯಕತ್ವದಲ್ಲಿ 2011ರಲ್ಲಿ ವಿಶ್ವಕಪ್ ಗೆದ್ದಿತ್ತು. ವೆಸ್ಟ್ ಇಂಡೀಸ್ 1975 ಮತ್ತು 1979ರಲ್ಲಿ ಗೆದ್ದಿತು.

odi-world-cup-history

2019ರಲ್ಲಿ ನಡೆದ ಕೊನೆಯ ಏಕದಿನ ವಿಶ್ವಕಪ್ ಪಂದ್ಯಾವಳಿಯನ್ನು ಇಂಗ್ಲೆಂಡ್ ಗೆದ್ದಿದೆ. ಏಕದಿನ ಕ್ರಿಕೆಟ್‌ಗಾಗಿ ವಿಶ್ವಕಪ್ ಫೈನಲ್‌ನಲ್ಲಿ ವಿಜೇತ ಮತ್ತು ರನ್ನರ್-ಅಪ್ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ.

1975 - ಆಸ್ಟ್ರೇಲಿಯಾ ವಿರುದ್ಧ ವೆಸ್ಟ್ ಇಂಡೀಸ್ ತಂಡಕ್ಕೆ 17 ರನ್‌ಗಳ ಗೆಲುವು

1979 - ಇಂಗ್ಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡಕ್ಕೆ 92 ರನ್‌ಗಳ ಗೆಲುವು

1983 - ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 43 ರನ್‌ಗಳ ಗೆಲುವು

1987 - ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 7 ರನ್‌ಗಳ ಗೆಲುವು

1992 - ಇಂಗ್ಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 22 ರನ್‌ಗಳ ಗೆಲುವು

1996 - ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ತಂಡಕ್ಕೆ 7 ವಿಕೆಟ್‌ಗಳ ಗೆಲುವು

1999 - ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 8 ವಿಕೆಟ್‌ಗಳ ಗೆಲುವು

2003 - ಭಾರತ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 125 ರನ್‌ಗಳ ಗೆಲುವು

2007 - ಶ್ರೀಲಂಕಾ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 53 ರನ್‌ಗಳ ಗೆಲುವು

2011 - ಶ್ರೀಲಂಕಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಗೆಲುವು

2015 - ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ತಂಡಕ್ಕೆ 7 ವಿಕೆಟ್‌ಗಳ ಗೆಲುವು

2019 - ಸೂಪರ್ ಓವರ್‌ನಲ್ಲಿ ಬೌಂಡರಿ ಲೆಕ್ಕದಲ್ಲಿ ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡಕ್ಕೆ ಗೆಲುವು

Story first published: Monday, October 2, 2023, 21:07 [IST]
Other articles published on Oct 2, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+