World cup 2023: ವಿಶ್ವಕಪ್‌ಗಿಲ್ಲ ನೇರ ಅರ್ಹತೆ: ಸಂಕಷ್ಟದಲ್ಲಿ ಟೆಸ್ಟ್ ಆಡುವ 4 ತಂಡಗಳ ಸ್ಥಿತಿ!
ಈ ವರ್ಷಾಂತ್ಯದಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಟೂರ್ನಿ ನಡೆಯಲಿದ್ದು ಪ್ರತಿಷ್ಠಿತ ಟೂರ್ನಿಯ ಬಗ್ಗೆ ಕುತೂಹಲ ಹೆಚ್ಚಾಗಿದೆ. ಅಕ್ಟೋಬರ್ 5ರಿಂದ ಈ ಮೆಗಾ ಟೂರ್ನಿ ಆರಂಭವಾಗುವ ಸಾಧ್ಯತೆಯಿದ್ದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಟೂರ್ನಿಗೆ ಚಾಲನೆ ದೊರೆಯುವ ಸಾಧ್ಯತೆಯಿದೆ. ಈ ಟೂರ್ನಿಯಲ್ಲಿ 10 ತಂಡಗಳು ಭಾಗವಹಿಸುವ ಸಾಧ್ಯತೆಯಿದ್ದು ಅವುಗಳ ಪೈಕಿ 8 ತಂಡಗಳು ಈಗಾಗಲೇ ತಮ್ಮ ಸ್ಥಾನ ಖಚಿತಪಡಿಸಿಕೊಂಡಿದೆ.
ಭಾರತ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ನೇರವಾಗಿ ಅರ್ಹತೆ ಸಂಪಾದಿಸಿರುವ 8 ತಂಡಗಳಾಗಿದೆ. ಆದರೆ ಕುತೂಹಲಕಾರಿಯೆಂಬಂತೆ ಟೆಸ್ಟ್ ಆಡುವ ನಾಲ್ಕು ತಂಡಗಳು ಈ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಗೆ ನೇರವಾಗಿ ಅರ್ಹತೆ ಪಡೆಯಲು ವಿಪಲವಾಗಿದೆ. ಆ ನಾಲ್ಕು ತಂಡಗಳ ಬಗೆಗಿನ ಮಾಹಿತಿ ಇಲ್ಲಿದೆ.

2023ರ ವಿಶ್ವಕಪ್‌ಗೆ ಅರ್ಹತೆ ಪಡೆಯಲು ವಿಫಲವಾದ ಶ್ರೀಲಂಕಾ
2020-23ರ ಸಾಲಿನ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್‌ನಲ್ಲಿ ಅಗ್ರ 8 ತಂಡಗಳ ಪೈಕಿ ಸ್ಥಾನ ಪಡೆಯಲು ವಿಫಲವಾಗಿದೆ. ಶ್ರೀಲಂಕಾ ತಂಡ ಈ ಅವಧಿಯಲ್ಲಿ 24 ಪಂದ್ಯಗಳನ್ನು ಆಡಿದ್ದು ಕೇವಲ 7 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿದೆ. ಇನ್ನು ಎರಡು ಪಂದ್ಯಗಳಲ್ಲಿ ಶ್ರೀಲಂಕಾ ಗೆಲುವು ಸಾಧಿಸಿದ್ದರೆ ನೇರವಾಗಿ ವಿಶ್ವಕಪ್‌ಗೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲು ಸಫಲವಾಗಿರುತ್ತಿತ್ತು.
ವೆಸ್ಟ್ ಇಂಡೀಸ್ ತಂಡಕ್ಕೂ ಮುಖಭಂಗ
ಇನ್ನು ವೆಸ್ಟ್ ಇಂಡೀಸ್ ತಂಡ ಕೂಡ ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಟೂರ್ನಿಗೆ ನೇರವಾಗಿ ಅರ್ಹತೆ ಸಂಪಾದಿಸುವಲ್ಲಿ ವಿಫಲವಾಗಿದೆ. ವೆಸ್ಟ್ ಇಂಡೀಸ್ ತಂಡ 24 ಪಂದ್ಯಗಳನ್ನು ಆಡಿದ್ದು ಇದರಲ್ಲಿ ಕೇವಲ 9 ಪಂದ್ಯಗಳನ್ನು ಮಾತ್ರವೇ ಗೆದ್ದುಕೊಂಡಿದೆ. ವೆಸ್ಟ್ ಇಂಡೀಸ್ ತಂಡ ಕೇವಲ ಒಂದು ಗೆಲುವು ಸಾಧಿಸಿದ್ದರೆ ವಿಶ್ವಕಪ್‌ಗೆ ನೇರವಾಗಿ ಅರ್ಹತೆ ಸಂಪಾದಿಸಲು ಸಾಧ್ಯವಾಗುತ್ತಿತ್ತು.
ಐರ್ಲೆಂಡ್ ತಂಡಕ್ಕೂ ಇಲ್ಲ ನೇರ ಅರ್ಹತೆ
ಇನ್ನು ಐರ್ಲೆಂಡ್ ತಂಡ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ)ನಿಂದ ಟೆಸ್ಟ್ ಮಾನ್ಯತೆಯನ್ನು ಗಿಟ್ಟಿಸಿಕೊಂಡ ತಂಡ. ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್‌ನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳ ವಿರುದ್ಧವೂ ಐರ್ಲೆಂಡ್ ಗೆಲುವು ಸಾಧಿಸಲು ಯಶಸ್ವಿಯಾಗಿದೆ. ಆದರೆ ಸ್ಥಿರ ಪ್ರದರ್ಶನ ನೀಡುವಲ್ಲಿ ತಂಡ ಸಂಪೂರ್ಣ ವಿಫಲವಾಗಿತ್ತು. ಆಡಿರುವ 22 ಪಂದ್ಯಗಳಲ್ಲಿ 6 ಗೆಲುವು ಸಾಧಿಸಿದೆ. ಹೀಗಾಗಿ ಅಗ್ರ 8ರಲ್ಲಿ ಸ್ಥಾನ ಪಡೆಯಲು ವಿಫಲವಾಗಿದೆ ಐರ್ಲೆಂಡ್.
ಜಿಂಬಾಬ್ವೆ ತಂಡವೂ ಗಳಿಸಿಲ್ಲ ಅರ್ಹತೆ
ಜಿಂಬಾಬ್ವೆ ತಂಡ ಇತ್ತೀಚೆಗೆ ಆಸ್ಟ್ರೇಲಿಯಾ ತಂಡದ ವಿರುದ್ಧವೂ ಗೆಲುವಿನ ರುಚಿ ಕಂಡಿತ್ತು. ಆದರೆ ಆಡಿರುವ 24 ಪಂದ್ಯಗಳಲ್ಲಿ ಜಿಂಬಾಬ್ವೆ ಗಳಿಸಿದ್ದು ಕೇವಲ 6 ಗೆಲುವು ಮಾತ್ರ. ಹೀಗಾಗಿ ಜಿಂಬಾಬ್ವೆ ಐಸಿಸಿ ಕ್ರಿಕೆಟ್ ವಿಶ್ವಕಪ್ ಸೂಪರ್ ಲೀಗ್‌ನಲ್ಲಿ 12ನೇ ಸ್ಥಾನವನ್ನು ಗಳಿಸಿದ್ದು ನೇರವಾಗಿ ಅರ್ಹತೆ ಸಂಪಾದಿಸುವಲ್ಲಿ ವಿಫಲವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications