For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಇಂಗ್ಲೆಂಡ್‌ಗೆ ಒಂದು ಸಿಹಿ ಒಂದು ಕಹಿ ಸುದ್ದಿ

Ollie Pope Added and Zak Crawley Ruled Out of England Test Squad Against India

ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಶುಕ್ರವಾರ ಆರಂಭವಾಗಿಲಿದೆ. ಎರಡು ತಂಡಗಳು ಕೂಡ ಬಿರುಸಿನ ಅಭ್ಯಾಸದಲ್ಲಿ ತೊಡಗಿಸಿಕೊಂಡಿದೆ. ಪಂದ್ಯದ ಆರಂಭಕ್ಕೆ ಒಂದು ದಿನ ಮುನ್ನ ಇಂಗ್ಲೆಂಡ್ ತಂಡಕ್ಕೆ ಒಂದು ಸಿಹಿ ಹಾಗೂ ಒಂದು ಕಹಿ ಸುದ್ದಿ ದೊರೆತಿದೆ.

ಪ್ರವಾಸಿ ಇಂಗ್ಲೆಂಡ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಒಲ್ಲೀ ಪೋಪ್ ಸಂಪೂರ್ಭ ಫಿಟ್ ಆಗಿದ್ದಾರೆ ಎಂಬ ವರದಿ ಲಭ್ಯವಾಗಿದೆ. ಹೀಗಾಗಿ ಅವರನ್ನು ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳುವ ಇಂಗ್ಲೆಂಡ್ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ.

ಒಲ್ಲೀ ಪೋಪ್ ಕಳೆದ ಆಗಸ್ಟ್‌ನಲ್ಲಿ ಪಾಕಿಸ್ತಾನದ ವಿರುದ್ಧ ನಡೆಸ ಟೆಸ್ಟ್ ಸರಣಿಯ ಸಂದರ್ಭದಲ್ಲಿ ಫೀಲ್ಡಿಂಗ್ ವೇಳೆ ಭುಜದ ನೋವಿಗೆ ಒಳಗಾಗಿದ್ದರು. ಭುಜದ ಮೂಳೆ ಸ್ಥಳಾಂತರವಾಗಿದ್ದು ಪತ್ತೆಯಾಗಿದ್ದ ಕಾರಣ ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿದ್ದರು. ಚೆನ್ನೈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಅವಕಾಶವನ್ನು ಪಡೆದುಕೊಂಡರೆ ಒಲಿ ಐದು ಅಥೌಆ ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿಯಬಹುದು.

ಒಲ್ಲಿ ಪೋಪ್ ಫಿಟ್ ಆಗಿರುವ ಸುದ್ದಿ ಬರುತ್ತಿದಂತೆಯೇ ಇತ್ತ ಮತ್ತೋರ್ವ ಗಾಯಗೊಂಡು ಎರಡು ಪಂದ್ಯಗಳಿಂದ ಹೊರಗುಳಿಯಲಿರುವ ಸುದ್ದಿಯೂ ಹೊರ ಬಿದ್ದಿದೆ. ಇಂಗ್ಲೆಂಡ್ ತಂಡದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಜಾಕ್ ಕ್ರಾವ್ಲಿ ಗಾಯಗೊಂಡ ಕಾರಣ ಎರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

ಮೊದಲ ಎರಡು ಟೆಸ್ಟ್ ಪಂದ್ಯಗಳು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದ್ದು ಬಳಿಕದ ಎರಡು ಪಂದ್ಯಗಳು ಅಹ್ಮದಾಬಾದ್‌ನಲ್ಲಿ ನಿರ್ಮಾಣವಾಗಿರುವ ನೂತನ ಸ್ಟೇಡಿಯಂ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಳಿಕ ಐದು ಪಂದ್ಯಗಳ ಟಿ20 ಸರಣಿ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದೆ.

Story first published: Thursday, February 4, 2021, 13:28 [IST]
Other articles published on Feb 4, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+