ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈ 2 ದೇಶಗಳ ಆಟಗಾರರು ಮಾತ್ರ ಟೆಸ್ಟ್ ಕ್ರಿಕೆಟ್‍ನಲ್ಲಿ ಅತ್ಯುತ್ತಮರು ಎಂದ ನಾಸಿರ್ ಹುಸೇನ್

Only New Zealand and India are producing high quality red-ball batsmen says Nasser Hussain

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಪಟೌಡಿ ಟೆಸ್ಟ್ ಸರಣಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ನಾಟಿಂಗ್ಹ್ಯಾಮ್ ಟ್ರೆಂಟ್ ಬ್ರಿಡ್ಜ್ ಕ್ರೀಡಾಂಗಣದಲ್ಲಿ ನಡೆದ ಮೊದಲನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯಗೊಂಡಿತ್ತು ಹಾಗೂ ಕ್ರಿಕೆಟ್ ಕಾಶಿ ಎಂದೇ ಖ್ಯಾತಿಯನ್ನು ಹೊಂದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 151 ರನ್‌ಗಳ ಜಯವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ 1-0 ಮುನ್ನಡೆಯನ್ನು ಸಾಧಿಸಿದೆ.

ದ್ರಾವಿಡ್ ಮಾತನ್ನು ಕೇಳಲೇಬಾರದು ಎಂದು ಮುರಳೀಧರನ್ ಬಳಿ ನೋವು ಹಂಚಿಕೊಂಡಿದ್ದ ಸೆಹ್ವಾಗ್!ದ್ರಾವಿಡ್ ಮಾತನ್ನು ಕೇಳಲೇಬಾರದು ಎಂದು ಮುರಳೀಧರನ್ ಬಳಿ ನೋವು ಹಂಚಿಕೊಂಡಿದ್ದ ಸೆಹ್ವಾಗ್!

ಲಾರ್ಡ್ಸ್ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಈ ಪದ್ಯದ ಕುರಿತು ಮತ್ತು ಟೀಮ್ ಇಂಡಿಯಾ ಆಟಗಾರರ ಕುರಿತು ಸಾಕಷ್ಟುಮಾಜಿ ಕ್ರಿಕೆಟಿಗರು ಮತ್ತು ಕ್ರೀಡಾ ಪಂಡಿತರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಐಪಿಎಲ್ 2021: ಆರ್‌ಸಿಬಿಗೆ ಆಘಾತ; ತಂಡದ ಪ್ರಮುಖ ಆಟಗಾರ ಟೂರ್ನಿಯಿಂದಲೇ ಔಟ್!ಐಪಿಎಲ್ 2021: ಆರ್‌ಸಿಬಿಗೆ ಆಘಾತ; ತಂಡದ ಪ್ರಮುಖ ಆಟಗಾರ ಟೂರ್ನಿಯಿಂದಲೇ ಔಟ್!

ಇದೀಗ ಈ ಕುರಿತು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಮಾತನಾಡಿದ್ದು ಟೀಮ್ ಇಂಡಿಯಾ ತಂಡದ ಆಟಗಾರರನ್ನು ಹಾಡಿ ಹೊಗಳಿದ್ದಾರೆ. ತಮ್ಮ ತವರು ನೆಲದಲ್ಲಿಯೇ ಇಂಗ್ಲೆಂಡ್ ತಂಡವನ್ನು ಟೀಮ್ ಇಂಡಿಯಾ ಸದೆಬಡಿದಿರುವ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸೀರ್ ಹುಸೇನ್ ಪ್ರಸ್ತುತ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಟೆಸ್ಟ್ ಆಟಗಾರರನ್ನು ಉತ್ಪಾದಿಸುತ್ತಿರುವ ದೇಶಗಳೆಂದರೆ ಅದು ಭಾರತ ಮತ್ತು ನ್ಯೂಜಿಲೆಂಡ್ ಮಾತ್ರ ಎಂದು ಹೊಗಳಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಆರಂಭದ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾತ್ರ ಅತ್ಯುತ್ತಮ ಟೆಸ್ಟ್ ಆಟಗಾರರನ್ನು ಕ್ರಿಕೆಟ್ ಜಗತ್ತಿಗೆ ನೀಡುತ್ತಿವೆ, ಇನ್ನುಳಿದ ಎಲ್ಲಾ ತಂಡಗಳು ಸಹ ಟೆಸ್ಟ್ ಕ್ರಿಕೆಟ್‌ಗೆ ಬೇಕಾದ ಪರಿಪೂರ್ಣ ತಂಡವಿಲ್ಲದೇ ಹಿಂದುಳಿದಿವೆ ಎಂದು ನಾಸೀರ್ ಹುಸೇನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈತನ ಎಂಟ್ರಿಯಿಂದ ಪವರ್ಫುಲ್ ಆಗಲಿದೆ ಟೀಮ್ ಇಂಡಿಯಾ ಬ್ಯಾಟಿಂಗ್ | Oneindia Kannada
ಭಾರತ ಮತ್ತು ನ್ಯೂಜಿಲೆಂಡ್ ಅತ್ಯುತ್ತಮ

ಭಾರತ ಮತ್ತು ನ್ಯೂಜಿಲೆಂಡ್ ಅತ್ಯುತ್ತಮ


ಹೀಗೆ ಲಾರ್ಡ್ಸ್ ಟೆಸ್ಟ್ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಹಾಡಿ ಹೊಗಳಿದ್ದಾರೆ. ಮೊದಲನೇ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಹಂತವನ್ನು ಪ್ರವೇಶಿಸಿದ್ದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮೇಲ್ದರ್ಜೆಯ ಟೆಸ್ಟ್ ಕ್ರಿಕೆಟ್ ಆಟಗಾರರಿಂದ ಕೂಡಿವೆ. ಇಡೀ ಕ್ರಿಕೆಟ್ ಜಗತ್ತಿನಲ್ಲಿ ಅತ್ಯುತ್ತಮ ಟೆಸ್ಟ್ ಬಾಲ್ ಕ್ರಿಕೆಟಿಗರನ್ನು ಸದ್ಯಕ್ಕೆ ಹೊಂದಿರುವುದು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾತ್ರ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸೀರ್ ಹುಸೇನ್ ಹೇಳಿದ್ದಾರೆ.

ಕೇವಲ ಇಂಗ್ಲೆಂಡ್ ಮಾತ್ರವಲ್ಲ, ಇತರ ದೇಶಗಳಿಗೂ ಇದೇ ಸಮಸ್ಯೆ!

ಕೇವಲ ಇಂಗ್ಲೆಂಡ್ ಮಾತ್ರವಲ್ಲ, ಇತರ ದೇಶಗಳಿಗೂ ಇದೇ ಸಮಸ್ಯೆ!

ಟೆಸ್ಟ್ ಕ್ರಿಕೆಟ್‍ನಲ್ಲಿ ಮೇಲ್ದರ್ಜೆಯ ಆಟಗಾರರನ್ನು ಹೊಂದಿರುವುದು ಪ್ರಸ್ತುತವಾಗಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮಾತ್ರ ಎಂದು ಹೇಳಿಕೆ ನೀಡಿರುವ ನಾಸಿರ್ ಹುಸೇನ್ ಇನ್ನೂ ಮುಂದುವರಿದು ಮಾತನಾಡಿ ಕೇವಲ ಇಂಗ್ಲೆಂಡ್ ತಂಡ ಮಾತ್ರವಲ್ಲ ಉಳಿದ ತಂಡಗಳೂ ಸಹ ಟೆಸ್ಟ್ ಕ್ರಿಕೆಟ್ ಬಲ್ಲ ನುರಿತ ಆಟಗಾರರಿಲ್ಲದೇ ಸಮಸ್ಯೆಗಳನ್ನು ಎದುರಿಸುತ್ತಿವೆ ಎಂದು ನಾಸಿರ್ ಹುಸೇನ್ ಹೇಳಿದ್ದಾರೆ.

ಜೋ ರೂಟ್ ಹೊರತುಪಡಿಸಿ ಬೇರಾವ ಆಟಗಾರನೂ ಸಹ ಇಂಗ್ಲೆಂಡ್ ಪರ ನಿಲ್ಲುತ್ತಿಲ್ಲ

ಜೋ ರೂಟ್ ಹೊರತುಪಡಿಸಿ ಬೇರಾವ ಆಟಗಾರನೂ ಸಹ ಇಂಗ್ಲೆಂಡ್ ಪರ ನಿಲ್ಲುತ್ತಿಲ್ಲ

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಪೈಕಿ ಈಗಾಗಲೇ 2 ಪಂದ್ಯಗಳು ಮುಗಿದಿದ್ದು ಎರಡೂ ಪಂದ್ಯಗಳಲ್ಲಿಯೂ ಇಂಗ್ಲೆಂಡ್ ತಂಡಕ್ಕೆ ಬ್ಯಾಟಿಂಗ್ ವಿಭಾಗದಲ್ಲಿ ಹೆಚ್ಚಾಗಿ ಆಸರೆಯಾಗಿದ್ದು ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಮಾತ್ರ. ಜೋ ರೂಟ್ ಉತ್ತಮ ಪ್ರದರ್ಶನ ನೀಡದೇ ಇದ್ದಿದ್ದರೆ ಇಂಗ್ಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧ ಹೀನಾಯವಾಗಿ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತಿತ್ತು. ಹೀಗಾಗಿ ಮುಂಬರಲಿರುವ ಟೆಸ್ಟ್ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕೆಂದರೆ ಸರಿಯಾದ ಯೋಜನೆಗಳನ್ನು ಇಂಗ್ಲೆಂಡ್ ತಂಡ ಹಾಕಿಕೊಳ್ಳಬೇಕು ಎಂದು ಇಂಗ್ಲೆಂಡ್ ತಂಡದ ಪ್ರಮುಖ ಕೋಚ್ ಕ್ರಿಸ್ ಸಿಲ್ವರ್‌ವುಡ್ ಬಳಿ ನಾಸಿರ್ ಹುಸೇನ್ ಸಲಹೆಗಳನ್ನು ನೀಡಿದ್ದಾರೆ.

Story first published: Saturday, August 21, 2021, 6:49 [IST]
Other articles published on Aug 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X