For Quick Alerts
ALLOW NOTIFICATIONS  
For Daily Alerts
 

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈಗ ಕೊಹ್ಲಿಗಿಂತ ಮುಂದಿರುವುದು ಈ ನಾಲ್ವರು ಮಾತ್ರ!!

ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ಬ್ಯಾಟರ್‌ಗಳಲ್ಲಿ ವಿರಾಟ್ ಕೊಹ್ಲಿ ಕೂಡ. ಭಾರತದ ಈ ಬ್ಯಾಟರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅನೇಕ ದಾಖಲೆಗಳನ್ನು ಹೊಂದಿದ್ದು 25,000ಕ್ಕೂ ಅಧಿಕ ರನ್ ಗಳಿಸಿದ ಕೆಲವೇ ಬ್ಯಾಟರ್‌ಗಳ ಪೈಕಿ ಒಬ್ಬರಾಗಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನಾಡುತ್ತಿದ್ದಾರೆ.

ಎಲ್ಲಾ ಮಾದರಿಯಲ್ಲಿಯೂ ಅಮೋಘ ಪ್ರದರ್ಶನ ನಿಡಿ ಅದ್ಭುತ ದಾಖಲೆಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ದಿಗ್ಗಜ ಜಾಕ್ ಕ್ಯಾಲಿಸ್ ಅವರನ್ನು ಹಿಂದಿಕ್ಕಿದ್ದಾರೆ. 519 ಪಂದ್ಯಗಳಲ್ಲಿ 25,534 ರನ್ ಗಳಿಸಿರುವ ಕ್ಯಾಲಿಸ್ ಅವರನ್ನು ವಿರಾಟ್ ಕೊಹ್ಲಿ ವಿಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಹಿಂದಿಕ್ಕಿದ್ದಾರೆ. ಈ ಮೂಲಕ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪೈಕಿ ವಿರಾಟ್ 5ನೇ ಸ್ಥಾನದಲ್ಲಿದ್ದಾರೆ.

Only These 4 batters are scored more runs than Virat Kohli in international cricket

ಅಂದರೆ ಇದೀಗ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿದ ಆಟಗಾರರ ಪೈಕಿ ವಿರಾಟ್ ಕೊಹ್ಲಿಗಿಂತ ಮೇಲಿರುವುದು ಕೇವಲ ನಾಲ್ವರು ಆಟಗಾರರು ಮಾತ್ರ. ಹಾಗಾದರೆ ಆ ನಾಲ್ಕು ಕ್ರಿಕೆಟಿಗರು ಯಾರು? ಮುಂದೆ ಓದಿ..

ಮಹೇಲ ಜಯವರ್ಧನೆ

ಗಮನಾರ್ಹ ಅಂಶವೆಂದರೆ ವಿರಾಟ್ ಕೊಹ್ಲಿಗಿಂತ ಹೆಚ್ಚು ರನ್‌ಗಳಿಸಿರುವ ಈ ನಾಲ್ವರು ಕ್ರಿಕೆಟಿಗರಲ್ಲಿ ಸದ್ಯ ಯಾರು ಕೂಡ ಸಕ್ರಿಯ ಆಟಗಾರರಲ್ಲ. 25,957 ರನ್ ಗಳಿಸಿರುವ ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾದ ದಿಗ್ಗಜ ರಿಕಿ ಪಾಂಟಿಂಗ್

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೂಡ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿಗಿಂತ ಹೆಚ್ಚು ರನ್ ಗಳಿಸಿದ ಆಟಗಾರ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ದಿಗ್ಗಜ 27,483 ರನ್ ಗಳಿಸಿದ್ದಾರೆ. ಇನ್ನೆರಡು ಅಥವಾ ಮೂರು ವರ್ಷಗಳಲ್ಲಿ ಕೊಹ್ಲಿ ಪಾಂಟಿಂಗ್ ಅವರ ಈ ದಾಖಲೆಯನ್ನು ಮುರಿಯಬಹುದು.

ಲಂಕಾದ ಶ್ರೇಷ್ಠ ಕ್ರಿಕೆಟಿಗ ಕುಮಾರ ಸಂಗಕ್ಕರ

ಕುಮಾರ ಸಂಗಕ್ಕಾರ ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಕ್ರಿಕೆಟಿಗರ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಹೊಂದಿದ್ದು ಎಡಗೈ ಆಟಗಾರರ ಪೈಕಿ ಮೊದಲ ಸ್ಥಾನದಲ್ಲಿದ್ದಾರೆ. ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸಂಗಕ್ಕರ ತಮ್ಮ ವೃತ್ತಿಜೀವನದಲ್ಲಿ 28,016 ರನ್ ಗಳಿಸಿದ್ದಾರೆ.

ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 30,000ಕ್ಕೂ ಹೆಚ್ಚು ರನ್ ಗಳಿಸಿದ ಏಕೈಕ ಆಟಗಾರ ಸರ್ವಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಸಚಿನ್ ತೆಂಡೂಲ್ಕರ್. ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ಮಾತ್ರವೇ ಅಸ್ಥಿತ್ವದಲ್ಲಿದ್ದ ಕಾಲದಲ್ಲಿ ಈ ಎರಡು ಮಾದರಿಯಲ್ಲಿಯೂ ಅಮೋಘ ಸ್ಥಿರತೆಯನ್ನು ಹೊಂದಿದ್ದರು ಸಚಿನ್ ತೆಂಡೂಲ್ಕರ್. ಆ ಕಾರಣದಿಂದಾಗಿಯೇ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 34,357 ರನ್‌ಗಳನ್ನು ರಾಶಿ ಹಾಕಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

Story first published: Friday, July 21, 2023, 18:44 [IST]
Other articles published on Jul 21, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+