ಇಂಗ್ಲೆಂಡ್‌ನಲ್ಲಿ ಭಾರತದ ಮೂವರು ನಾಯಕರ ಸರಣಿ ಗೆಲುವಿನ ನಗೆ
ಐಪಿಎಲ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈ ಲೀಗ್ ಮುಗಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಆರಂಭಿಸಲಿದೆ. ಈ ಪ್ರವಾಸಕ್ಕೆ ಭಾರತ ತಂಡವನ್ನು ಸಹ ಪ್ರಕಟಿಸಲಾಗಿದೆ. ಪ್ರಕಟಿತ ತಂಡವನ್ನು ಯುವ ಆಟಗಾರ ಶುಭ್‌ಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಹಲವು ಹೊಸ ಮುಖಗಳಿಗೂ ಈ ಸರಣಿಯಲ್ಲಿ ಅವಕಾಶ ನೀಡಲಾಗಿದೆ. 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್ ಅಡಿಯಲ್ಲಿ ಈ ಸರಣಿಯನ್ನು ಆಡಲಾಗುತ್ತದೆ.
ಇಂಗ್ಲೆಂಡ್ ವಿರುದ್ಧ ಸರಣಿ ಅಂದರೆ ಈ ವೇಳೆ ಸಾಲು ಸಾಲು ಸವಾಲುಗಳು ಎದುರಾಗುತ್ತವೆ. ಈ ವೇಳೆ ಟೀಮ್ ಇಂಡಿಯಾಕ್ಕೆ ಅನುಭವಿಗಳ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಈ ಸರಣಿಯ ವೇಳೆ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುವ ಇರಾದೆಯನ್ನು ಹೊಂದಿದೆ. ಈ ವೇಳೆ ಟೀಮ್ ಇಂಡಿಯಾದ ನಾಯಕ ಶುಭಮನ್ ಗಿಲ್ ಸರಣಿ ಗೆಲುವಿನ ಪ್ಲ್ಯಾನ್ ಮಾಡುತ್ತಿದ್ದಾರೆ. ಹಾಗಿದ್ದರೆ ಇಂಗ್ಲೆಂಡ್‌ನಲ್ಲಿ ಗೆಲುವು ಸಾಧಿಸಿದ ನಾಯಕರ ಪಟ್ಟಿ ಇಲ್ಲಿದೆ.

ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ. 1932ರಲ್ಲಿ ಭಾರತ, ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡಿತು. ಅಲ್ಲಿಂದ ಈ ವರೆಗೆ ಭಾರತ ಒಟ್ಟು ಮೂರು ಬಾರಿ ಮಾರತ್ರ ಇಂಗ್ಲೆಂಡ್‌ನಲ್ಲಿ ಸರಣಿ ಗೆಲುವಿನ ನಗೆ ಬೀರಿದೆ. 1971ರ ಪ್ರವಾಸದಲ್ಲಿ ಅಜಿತ್ ವಾಡೇಕರ್, 1986ರಲ್ಲಿ ಕಪಿಲ್ ದೇವ್, 2007ರಲ್ಲಿ ರಹುಲ್ ದ್ರಾವಿಡ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಪಂದ್ಯವನ್ನು ಗೆದ್ದಿದೆ.
ಇಂಗ್ಲೆಂಡ್‌ನಲ್ಲಿ ಸರಣಿ ಗೆಲುವು ದಾಖಲಿಸಿದ ನಾಯಕರು
1971ರಲ್ಲಿ ಇಂಗ್ಲೆಂಡ್ ಪ್ರವಾಸ ಬೆಳೆಸಿದಾಗ ಟೀಮ್ ಇಂಡಿಯಾ ಮೂರು ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಈ ವೇಳೆ ಭಾರತ ಸರಣಿಯನ್ನು 1-0ಯಿಂದ ಗೆದ್ದುಕೊಂಡಿತ್ತು. ಆರಂಭಿಕ ಎರಡು ಟೆಸ್ಟ್ ಡ್ರಾನಲ್ಲಿ ಅಂತ್ಯವಾಗಿದ್ದವು. ಮೂರನೇ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕದ ಸೂಪರ್ ಸ್ಟಾರ್ ಬಿಎಸ್ ಚಂದ್ರಶೇಕರ್ ಅಮೋಘ ಬೌಲಿಂಗ್ ನಡೆಸಿದ್ದರು. ಈ ಪಂದ್ಯದಲ್ಲಿ ಕನ್ನಡಿಗ 8 ವಿಕೆಟ್ ಕಬಳಿಕಸಿದ್ದರು.
ಇನ್ನು 1986ರಲ್ಲಿ ಕಪಿಲ್ ದೇವ್ ನಾಯಕತ್ವದಲ್ಲೂ ಭಾರತ ಇಂತಹ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿತ್ತು. ಈ ಸರಣಿಯ ವೇಳೂ ಭಾರತ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಿತು. ಟೀಮ್ ಇಂಡಿಯಾ ಸರಣಿಯ ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳಿಂದ, ಎರಡನೇ ಪಂದ್ಯದಲ್ಲಿ 279 ರನ್‌ಗಳಿಂದ ಜಯ ಸಾಧಿಸಿತ್ತು. ಇಂಗ್ಲೆಂಡ್ ಮೂರನೇ ಪಂದ್ಯದಲ್ಲಿ ಡ್ರಾ ಸಾಧಿಸಿತು. ಈ ಮೂಲಕ ಈ ಸರಣಿಯಲ್ಲೂ ಭಾರತ 2-0 ಅಂತರದಿಂದ ಜಯ ಸಾಧಿಸಿತು.
ಇಂತಹದ್ದೇ ಮತ್ತೊಂದು ಸರಣಿ ಗೆಲುವಿನ ನಗೆ ಬೀರಲು ಭಾರತಕ್ಕೆ ಎರಡು ದಶಕಗಳೇ ಬೇಕಾಯಿತು. ಟೀಮ್ ಇಂಡಿಯಾ ಮೊದಲ ಹಾಗೂ ಮೂರನೇ ಪಂದ್ಯದಲ್ಲಿ ಡ್ರಾ ಸಾಧಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ 7 ವಿಕೆಟ್ ಜಯ ಸಾಧಿಸಿದ್ದರು. ಈ ಪಂದ್ಯದಲ್ಲಿ ಜಹೀರ್ ಖಾನ್ ಅಮೋಘ ಬೌಲಿಂಗ್ ದಾಳಿ ನಡೆಸಿ ಮಿಂಚಿದ್ದರು. ಈ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಕನ್ನಡಿಗ ರಾಹುಲ್ ದ್ರಾವಿಡ್ ಮುನ್ನಡೆಸಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications