ಭಾರತ vs ಆಸ್ಟ್ರೇಲಿಯಾ: ಶಾರ್ದೂಲ್- ಸುಂದರ್ ಆಟಕ್ಕೆ ಪ್ರಶಂಸೆ ವ್ಯಕ್ತಪಡಿಸಿದ ಕೊಹ್ಲಿ

ಟೀಮ್ ಇಂಡಿಯಾದ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಹಾಗೂ ವೇಗಿ ಶಾರ್ದೂಲ್ ಠಾಕೂರ್ ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ನಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದರು. ಈ ಶ್ರೇಷ್ಠ ಪ್ರದರ್ಶನಕ್ಕೆ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಪ್ರಶಂಸೆಯನ್ನು ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಚೊಚ್ಚಲ ಪಂದ್ಯವನ್ನಾಡುತ್ತಿರುವ ವಾಶಿಂಗ್ಟನ್ ಸುಂದರ್ ಹಾಗೂ ಎರಡನೇ ಟೆಸ್ಟ್‌ನಲ್ಲಿ ಕಣಕ್ಕಿಳಿದಿರುವ ಶಾರ್ದೂಲ್ ಠಾಕೂರ್ ಜೋಡಿ 7ನೇ ವಿಕೆಟ್‌ಗೆ 217 ಎಸೆತಗಳಲ್ಲಿ 123 ರನ್‌ಗಳ ಅದ್ಭುತ ಜೊತೆಯಾಟವನ್ನು ನೀಡುವ ಮೂಲಕ ಪಂದ್ಯದಲ್ಲಿ ಭಾರತ ಮರಳಿ ಹೋರಾಟದ ಹಾದಿಗೆ ತಂದಿರಿಸಿದರು. ಈ ಜೋಡಿ ಕಣಕ್ಕಿಳಿಯುವ ವೇಳೆಗೆ ಭಾರತ ತಂಡ 186 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದ ಸ್ಥಿತಿಯಲ್ಲಿತ್ತು.

ಭಾರತ vs ಆಸ್ಟ್ರೇಲಿಯಾ: ಬ್ರಿಸ್ಬೇನ್‌ನಲ್ಲಿ ದಾಖಲೆಯ ಜೊತೆಯಾಟವಾಡಿದ ಶಾರ್ದೂಲ್- ಸುಂದರ್

"ವಾಶಿಂಗ್ಟನ್ ಸುಂದರ್ ಹಾಗೂ ಶಾರ್ದೂಲ್ ಠಾಕೂರ್ ನಿಮ್ಮಿಂ ನಂಬಿಕಾರ್ಹವಾದ ಹಾಗೂ ಶ್ರೇಷ್ಠವಾದ ಪ್ರದರ್ಶನ. ಟೆಸ್ಟ್ ಕ್ರಿಕೆಟ್‌ನ ಶ್ರೇಷ್ಠತೆಯೇ ಇದು. ಮೊದಲ ಪಂದ್ಯದಲ್ಲೇ ವಾಶಿ ಅದ್ಭುತವಾದ ಹಿಡಿತ ಮತ್ತು ಹ್ಯಾಟ್ಸ್‌ಆಫ್ ಟು ಯೂ ಠಾಕೂರ್" ಎಂದು ವಿರಾಟ್ ಕೊಹ್ಲಿ ಟ್ವೀಟ್ ಮೂಲಕ ಇಬ್ಬರು ಆಟಗಾರರ ಪ್ರದರ್ಶನವನ್ನು ವಿರಾಟ್ ಕೊಹ್ಲಿ ಕೊಂಡಾಡಿದ್ದಾರೆ.

ಆಸ್ಟ್ರೇಲಿಯಾ ಮೊದೊಲ ಇನ್ನಿಂಗ್ಸ್‌ನಲ್ಲಿ 369 ರನ್ ಗಳಿಸಿದ್ದು ಅದಕ್ಕೆ ಪ್ರತಿಯಾಗಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 336 ರನ್ ಗಳಿಸಿದೆ. ಶಾರ್ದೂಲ್ ಠಾಕೂರ್ ಹಾಗೂ ವಾಶಿಂಗ್ಟನ್ ಸುಂದರ್ ಅರ್ಧ ಶತಕವನ್ನು ಹೊರತು ಪಡಿಸಿದರೆ ರೋಹಿತ್ ಶರ್ಮಾ 44 ರನ್, ಮಯಾಂಕ್ ಅಗರ್ವಾಲ್ 38 ರನ್ ಹಾಗೂ ಅಜಿಂಕ್ಯ ರಹಾನೆ 37 ರನ್ ಬ್ಯಾಟಿಂಗ್ ಮೂಲಕ ಕೊಡುಗೆ ನೀಡಿದ ಇತರ ಆಟಗಾರರಾಗಿದ್ದಾರೆ.

ಭಾರತ vs ಆಸ್ಟ್ರೇಲಿಯಾ: 4ನೇ ಟೆಸ್ಟ್ ಬ್ರಿಸ್ಬೇನ್, 336 ರನ್ ಗಳಿಸಿ ಭಾರತ ಆಲೌಟ್, Live ಸ್ಕೋರ್

ಜೋಶ್ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ತಮಡದ ಪರವಾಗಿ 5 ವಿಕೆಟ್‌ಗಳ ಗೊಂಚಲನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಟೆಸ್ಟ್ ಕ್ರಿಕೆಟ್‌ನಲ್ಲಿ ಅವರ 9ನೇ ಐದು ವಿಕೆಟ್‌ಗಳ ಗೊಂಚಲಾಗಿದೆ. ಸ್ಟಾರ್ಕ್ ಹಾಗೂ ಪ್ಯಾಟ್ ಕಮ್ಮಿನ್ಸ್ ತಲಾ ಎರಡು ವಿಕೆಟ್ ಪಡೆಯುವ ಮೂಲಕ ಮಿಂಚಿದ್ದಾರೆ

For Quick Alerts
ALLOW NOTIFICATIONS
For Daily Alerts
 

ಕ್ರಿಕೆಟನ್ನು ಪ್ರೀತಿಸುತ್ತೀರಾ? ಋಜುವಾತುಪಡಿಸಿ! ಮೈಖೇಲ್ ಫ್ಯಾಂಟಸಿ ಕ್ರಿಕೆಟ್ ಆಟವಾಡಿ

Story first published: Sunday, January 17, 2021, 14:24 [IST]
Other articles published on Jan 17, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X