IND vs ENG 5Th Test: ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ: 3 ಕನ್ನಡಿಗರಿಗೆ ಸ್ಥಾನ
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯಕ್ಕೆ ಓವಲ್ ಸಿದ್ಧವಾಗಿದೆ. ಐದನೇ ಹಾಗೂ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಗೆಲುವು ದಾಖಲಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆಯಿಂದ ಭಾರತ ತಂಡ ಅಂಗಳ ಪ್ರವೇಶಿಸಲಿದೆ. ಈ ಪಂದ್ಯವನ್ನು ಗೆದ್ದು ಸರಣಿ ತನ್ನದಾಗಿಸಿಕೊಳ್ಳುವ ವಿಶ್ವಾಸದಲ್ಲಿ ಇಂಗ್ಲೆಂಡ್ ತಂಡ ಇದೆ. ಇಂಗ್ಲೆಂಡ್ ತಂಡವನ್ನು ಬುಧವಾರವೇ ಘೋಷಿಸಲಾಗಿತ್ತು. ಈ ವೇಳೆ ನಾಲ್ಕು ಬದಲಾವಣೆಗಳೊಂದಿಗೆ ತಂಡ ಕಣಕ್ಕೆ ಇಳಿದಿದೆ. ಇನ್ನು ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಒಲಿ ಪೋಪ್ ಮುನ್ನಡೆಸಲಿದ್ದಾರೆ.
ಈ ಪಂದ್ಯದಲ್ಲಿ ಗೆಲುವು ದಾಖಲಿಸಲೇ ಬೇಕು ಎಂಬ ವಿಶ್ವಾಸದಲ್ಲಿ ಟೀಮ್ ಇಂಡಿಯಾ ಕಣಕ್ಕೆ ಇಳಿದಿದೆ. ಹೀಗಾಗಿ ಹಲವು ಬದಲಾವಣೆಗಳನ್ನು ಮಾಡಿದೆ. ಅನುಭವಿ ಜಸ್ಪ್ರೀತ್ ಬುಮ್ರಾ ಅವರಿಗೆ ಈ ಪಂದ್ಯದಿಂದ ವಿಶ್ರಾಂತಿ ನೀಡಲಾಗಿದೆ.

ಐದನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ. ಇವರು ನಾಲ್ಕನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಬ್ಯಾಟ್ ಮಾಡುವಾಗ ಕ್ರಿಸ್ ವೋಕ್ಸ್ ಎಸೆತದಲ್ಲಿ ಪಾದಕ್ಕೆ ಗಾಯವಾಗಿತ್ತು. ಈ ಗಾಯ ಇನ್ನು ಮಾಸದ ಕಾರಣ ಇವರನ್ನು ಹೊರಗಿಡಲಾಗಿದೆ. ಇವರ ಬದಲಿಗೆ ತಂಡದಲ್ಲಿ ಧ್ರುವ್ ಜುರೇಲ್ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಟೀಮ್ ಇಂಡಿಯಾದ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಈಗಾಗಲೇ ಇಂಗ್ಲೆಂಡ್ ಸರಣಿಯಲ್ಲಿ ಮೂರು ಟೆಸ್ಟ್ ಪಂದ್ಯವನ್ನು ಆಡಿದ್ದರಿಂದ ವಿಶ್ರಾಂತಿ ನೀಡಲಾಗಿದೆ.
ಟಾಸ್ ಗೆದ್ದ ನಾಯಕ
ಭಾರತ ತಂಡವನ್ನು ಶುಭಮನ್ ಗಿಲ್ ಹಾಗೂ ಇಂಗ್ಲೆಂಡ್ ತಂಡವನ್ನು ಇಂಗ್ಲೆಂಡ್ ತಂಡವನ್ನು ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಈ ಇಬ್ಬರೂ ನಾಯಕರು ತಾವು ಮುನ್ನಡೆಸಿದ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಟಾಸ್ ಸೋತಿದ್ದರು. ಹೀಗಾಗಿ ಈ ಇಬ್ಬರ ಮೇಲೆ ಚಿತ್ತ ನೆಟ್ಟಿತ್ತು. ಅಂತಿಮವಾಗಿ ಓಲಿ ಪೋಪ್ ನಾಯಕ ಟಾಸ್ ಗೆದ್ದು ಸಮಾಧಾನ ಪಟ್ಟಿದ್ದಾರೆ.
3 ಕನ್ನಡಿಗರಿಗೆ ಅವಕಾಶ
ಐದನೇ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕದ ತಂಡದ ಮೂವರಿಗೆ ಅವಕಾಶವನ್ನು ನೀಡಲಾಗಿದೆ. ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕರುಣ್ ನಾಯರ್ ಅವರಿಗೆ ಮತ್ತೊಂದು ಅವಕಾಶ ಸಿಕ್ಕಿದೆ. ಅಲ್ಲದೆ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣಾ ಅವರಿಗೆ ಚಾನ್ಸ್ ಸಿಕ್ಕಿದೆ. ಎಂದಿನಂತೆ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಕರುಣ್ ನಾಯರ್, ಸಾಯಿ ಸುದರ್ಶನ್, ಶುಭಮನ್ ಗಿಲ್, ಧ್ರುವ್ ಜುರೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ ಕೃಷ್ಣ,
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್ (ಸಿ), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್ (ವಾರ), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಜೋಶ್ ಟಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications