ಮತ್ತೆ ಅಶ್ವಿನ್ ಕಡೆಗಣಿಸಿದ ಟೀಮ್ ಇಂಡಿಯಾ; ಶಮಿ, ಇಶಾಂತ್ ಶರ್ಮಾ ಕೂಡ ತಂಡದಿಂದ ಹೊರಕ್ಕೆ!

ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ 3 ಪಂದ್ಯಗಳು ಈಗಾಗಲೇ ಮುಗಿದಿದ್ದು ಭಾರತ ಮತ್ತು ಇಂಗ್ಲೆಂಡ್ ತಂಡಗಳೆರಡೂ ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿವೆ. ಇತ್ತೀಚೆಗಷ್ಟೇ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಅಮೋಘ ಆಟವನ್ನು ಪ್ರದರ್ಶಿಸಿದ ಇಂಗ್ಲೆಂಡ್ 76 ರನ್‌ಗಳ ಇನ್ನಿಂಗ್ಸ್‌ ಗೆಲುವನ್ನು ಸಾಧಿಸುವುದರ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಸಮಬಲವನ್ನು ಸಾಧಿಸಿತು.

ಕಳಪೆ ಪ್ರದರ್ಶನ ನೀಡಿದರೂ ಆ ಒಬ್ಬನಿಗೆ ತಂಡದಲ್ಲಿ ಸ್ಥಾನ; ನಾಲ್ಕನೇ ಟೆಸ್ಟ್‌ಗೆ ವಿವಿಎಸ್ ಲಕ್ಷ್ಮಣ್ ಸಲಹೆಕಳಪೆ ಪ್ರದರ್ಶನ ನೀಡಿದರೂ ಆ ಒಬ್ಬನಿಗೆ ತಂಡದಲ್ಲಿ ಸ್ಥಾನ; ನಾಲ್ಕನೇ ಟೆಸ್ಟ್‌ಗೆ ವಿವಿಎಸ್ ಲಕ್ಷ್ಮಣ್ ಸಲಹೆ

ಹೆಡಿಂಗ್ಲೆ ಕ್ರೀಡಾಂಗಣಕ್ಕೂ ಮುನ್ನ ಕ್ರಿಕೆಟ್ ಕಾಶಿ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 151 ರನ್‌ಗಳ ಭರ್ಜರಿ ಜಯವನ್ನು ಸಾಧಿಸಿ ಸರಣಿಯಲ್ಲಿ ಗೆಲುವಿನ ಖಾತೆಯನ್ನು ತೆರೆದು ಮುನ್ನಡೆಯನ್ನು ಸಾಧಿಸಿತ್ತು. ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದ ಕೊನೆಯ ದಿನದಂದು ಭಾರತದ ಬೌಲರ್‌ಗಳ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯವನ್ನು ಸಾಧಿಸಿತ್ತು.

ಈ ಬಲಿಷ್ಠ ತಂಡ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದೇ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ ಪಾರ್ಥಿವ್ ಪಟೇಲ್ಈ ಬಲಿಷ್ಠ ತಂಡ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದೇ ಗೆಲ್ಲುತ್ತೆ ಎಂದು ಭವಿಷ್ಯ ನುಡಿದ ಪಾರ್ಥಿವ್ ಪಟೇಲ್

ಹೀಗಾಗಿಯೇ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾಗವಹಿಸಿದ್ದ ಬೌಲಿಂಗ್ ಪಡೆಯನ್ನೇ ಭಾರತ ಮತ್ತು ಇಂಗ್ಲೆಂಡ್ ನಡುವೆ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ತೃತೀಯ ಟೆಸ್ಟ್ ಪಂದ್ಯಕ್ಕೂ ಸಹ ಮುಂದುವರೆಸಲಾಗಿತ್ತು. ಆದರೆ ದ್ವಿತೀಯ ಟೆಸ್ಟ್ ಪಂದ್ಯದಂತೆ ತೃತೀಯ ಟೆಸ್ಟ್ ಪಂದ್ಯದಲ್ಲಿ ಬೌಲಿಂಗ್ ಪಡೆ ಮಿಂಚಲಿಲ್ಲ. ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳ ಎದುರು ಅಕ್ಷರಶಃ ಮಂಕಾದ ಟೀಮ್ ಇಂಡಿಯಾ ಬೌಲರ್‌ಗಳು ತೃತೀಯ ಟೆಸ್ಟ್ ಪಂದ್ಯದ ಉದ್ದಕ್ಕೂ ಎಡವಿದರು. ಹೀಗಾಗಿಯೇ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿಯೇ ಬದಲಾವಣೆಗಳನ್ನು ಮಾಡಲಾಗಿದ್ದು, ಬದಲಾವಣೆಗಳ ವಿವರ ಈ ಕೆಳಕಂಡಂತಿದೆ ನೋಡಿ..

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿಯೂ ರವಿಚಂದ್ರನ್ ಅಶ್ವಿನ್‌ಗಿಲ್ಲ ಸ್ಥಾನ

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿಯೂ ರವಿಚಂದ್ರನ್ ಅಶ್ವಿನ್‌ಗಿಲ್ಲ ಸ್ಥಾನ

ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಆಡುವ ಬಳಗವನ್ನು ಬಿಸಿಸಿಐ ಪ್ರಕಟಿಸಿದ್ದು ಮತ್ತೆ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರವಾಗುವಂತಹ ನಿರ್ಣಯವನ್ನು ಕೈಗೊಂಡಿದೆ. ಹೌದು, ನಾಲ್ಕನೇ ಟೆಸ್ಟ್ ಪಂದ್ಯದಲ್ಲಾದರೂ ರವಿಚಂದ್ರನ್ ಅಶ್ವಿನ್ ಅವರಿಗೆ ತಂಡದ ಆಡುವ ಬಳಗದಲ್ಲಿ ಅವಕಾಶ ನೀಡಲಾಗುತ್ತದೆ ಎಂದು ಕಾಯುತ್ತಿದ್ದ ಕ್ರಿಕೆಟ್ ಅಭಿಮಾನಿಗಳ ಆಸೆಗೆ ಬಿಸಿಸಿಐ ತಣ್ಣೀರು ಎರಚಿದ್ದು ಈ ಪಂದ್ಯದಲ್ಲಿಯೂ ಸಹ ಟೀಂ ಇಂಡಿಯಾ ಆಡುವ ಬಳಗದಲ್ಲಿ ರವಿಚಂದ್ರನ್ ಅಶ್ವಿನ್ ಅವರಿಗೆ ಸ್ಥಾನ ನೀಡದೇ ತಂಡದಿಂದ ಹೊರಗಿಟ್ಟಿದೆ.

ಶಮಿ ಮತ್ತು ಇಶಾಂತ್ ಶರ್ಮಾ ತಂಡದಿಂದ ಹೊರಕ್ಕೆ

ಶಮಿ ಮತ್ತು ಇಶಾಂತ್ ಶರ್ಮಾ ತಂಡದಿಂದ ಹೊರಕ್ಕೆ

ಲಾರ್ಡ್ಸ್ ಮತ್ತು ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದಿದ್ದ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದ ಭಾರತದ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ಭಾರತ ಮತ್ತು ಇಂಗ್ಲೆಂಡ್ ನಡುವೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಪ್ರಕಟಿಸಲಾಗಿರುವ ಭಾರತ ತಂಡದಿಂದ ಮೊಹಮ್ಮದ್ ಶಮಿ ಮತ್ತು ಇಶಾಂತ್ ಶರ್ಮಾ ಹೊರಬಿದ್ದಿದ್ದು ಅವರ ಸ್ಥಾನಕ್ಕೆ ಶಾರ್ದೂಲ್ ಠಾಕೂರ್ ಮತ್ತು ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಿ ಬಿಸಿಸಿಐ ಆಶ್ಚರ್ಯ ಮೂಡಿಸಿದೆ.

ನಾಲ್ಕನೇ ಟೆಸ್ಟ್ ಪಂದ್ಯದ ಟೀಮ್ ಇಂಡಿಯಾ ಆಡುವ ಬಳಗ

ನಾಲ್ಕನೇ ಟೆಸ್ಟ್ ಪಂದ್ಯದ ಟೀಮ್ ಇಂಡಿಯಾ ಆಡುವ ಬಳಗ

ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ( ನಾಯಕ ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, September 2, 2021, 15:40 [IST]
Other articles published on Sep 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X