WTC Final 2023 : ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬಿದ್ದ ಪಾಕಿಸ್ತಾನ

ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ತಂಡ ಸೋಮವಾರ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 26 ರನ್‌ಗಳ ಸೋಲನುಭವಿಸಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಇಂಗ್ಲೆಂಡ್ ವಶವಾಗಿದೆ.
ಸರಣಿ ಸೋತ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಈ ಸೋಲಿನ ಮೂಲಕ ಪಾಕಿಸ್ತಾನ 2021-23ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಇನ್ನು ಈ ಬಾರಿ ಪಾಕಿಸ್ತಾನ ಫೈನಲ್‌ಗೆ ತಲುಪುವುದು ಸಾಧ್ಯವಾಗುವುದಿಲ್ಲ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದ್ದ ಪಾಕಿಸ್ತಾನ ಈ ಸರಣಿಯಲ್ಲಿ ಸೋಲನುಭವಿಸುವ ಮೂಲಕ 6ನೇ ಸ್ಥಾನಕ್ಕೆ ಕುಸಿದಿದೆ. ಇನ್ನು ಸರಣಿಯಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್ 5ನೇ ಸ್ಥಾನಕ್ಕೆ ಜಿಗಿದಿದೆ.
ಪಾಕಿಸ್ತಾನ 42.42 ಪಿಟಿಸಿ (ಪಾಯಿಂಟ್ ಪರ್ಸಂಟೇಜ್ ಸಿಸ್ಟಮ್) ಪಡೆಯುವ ಮೂಲಕ ಆರನೇ ಸ್ಥಾನಕ್ಕೆ ಕುಸಿದರೆ, ಇಂಗ್ಲೆಂಡ್ 44.44 ಪಿಟಿಸಿ ಮೂಲಕ 5ನೇ ಸ್ಥಾನಕ್ಕೇರಿತು. ಭಾರತ 52.08 ಪಿಟಿಸಿಯೊಂದಿದೆ 4ನೇ ಸ್ಥಾನದಲ್ಲಿದೆ. ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಯ ಸಾಧಿಸಿದರೆ, 53.33 ಪಿಟಿಸಿ ಹೊಂದಿರುವ ಶ್ರೀಲಂಕಾ ತಂಡವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಲಿದೆ. 75.00 ಪಿಟಿಸಿಯೊಂದಿಗೆ ಆಸ್ಟ್ರೇಲಿಯಾ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. 60.0 ಪಿಟಿಸಿಯೊಂದಿಗೆ ದಕ್ಷಿಣ ಆಫ್ರಿಕಾ 2ನೇ ಸ್ಥಾನದಲ್ಲಿದೆ.

ಇಂಗ್ಲೆಂಡ್, ಪಾಕಿಸ್ತಾನ ಹೊರಕ್ಕೆ
ಇಂಗ್ಲೆಂಡ್ ಮತ್ತು ಪಾಕಿಸ್ತಾನ ಈಗಾಗಲೇ ಸ್ಪರ್ಧೆಯಿಂದ ಹೊರಗುಳಿದಿರುವುದರಿಂದ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಭಾರತ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವೆ ಭಾರಿ ಪೈಪೋಟಿ ನಡೆಯಲಿದೆ. ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.
ಟೀಮ್ ಇಂಡಿಯಾಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ವೇಳಾಪಟ್ಟಿಯಲ್ಲಿ ಆರು ಪಂದ್ಯಗಳು ಉಳಿದಿವೆ ಮತ್ತು ಫೈನಲ್ ತಲುಪಲು ಟೀಂ ಇಂಡಿಯಾ ಕನಿಷ್ಠ ಐದು ಪಂದ್ಯಗಳನ್ನು ಗೆಲ್ಲಬೇಕು.
ಭಾರತ ತಂಡ ಡಿಸೆಂಬರ್ 14ರಿಂದ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಬಾಂಗ್ಲಾದೇಶದ ವಿರುದ್ದ ಎರಡು ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಫೈನಲ್ ತಲುಪಲು ಸಾಕಷ್ಟು ಅವಕಾಶ ಸಿಕ್ಕಂತಾಗುತ್ತದೆ.
ಬಾಂಗ್ಲಾದೇಶದ ಸರಣಿಯ ನಂತರ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಇವುಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೂ ಸಹ, ಜೂನ್ ತಿಂಗಳಿನಲ್ಲಿ ನಡೆಯುವ ಫೈನಲ್‌ಗೆ ಅರ್ಹತೆ ಪಡೆದುಕೊಳ್ಳಲಿದೆ.
ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಈ ತಿಂಗಳ ಕೊನೆಯಲ್ಲಿ ಪರಸ್ಪರರ ವಿರುದ್ಧ ಟೆಸ್ಟ್ ಸರಣಿ ಆಡಲಿವೆ, ಎರಡು ತಂಡಗಳಲ್ಲಿ ಸೋಲುವ ತಂಡ ಅಂಕಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಶ್ರೀಲಂಕಾ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿಯಲ್ಲಿ ಕೇವಲ ಒಂದು ಟೆಸ್ಟ್ ಮಾತ್ರ ಬಾಕಿ ಇದ್ದು, ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications