PAK Vs ENG 3rd Test: ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ, ತಂಡದಲ್ಲಿ ನಾಲ್ಕು ಬದಲಾವಣೆ, ಆಡುವ ಬಳಗ, ಪಿಚ್ ವರದಿ

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಕರಾಚಿಯಲ್ಲಿ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಈಗಾಗಲೇ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋತಿರುವ ಪಾಕಿಸ್ತಾನಕ್ಕೆ ವೈಟ್‌ವಾಷ್ ತಪ್ಪಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಗೆಲ್ಲಬೇಕಿದೆ.
ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಸೋಲುವ ಮೂಲಕ ಪಾಕಿಸ್ತಾನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಅರ್ಹತೆ ಪಡೆಯುವ ಅವಕಾಶವನ್ನು ಕಳೆದುಕೊಂಡಿದೆ. ತವರಿನಲ್ಲಿ ವೈಟ್‌ವಾಷ್ ಮುಖಭಂಗ ತಪ್ಪಿಸಿಕೊಳ್ಳಲು ಮೂರನೇ ಟೆಸ್ಟ್ ಗೆಲ್ಲುವ ಯೋಜನೆಯಲ್ಲಿದೆ.
ಪಾಕಿಸ್ತಾನ ತಂಡಕ್ಕೆ ಗಾಯದ ಸಮಸ್ಯೆಗಳು ಮತ್ತಷ್ಟು ತಲೆನೋವಾಗಿ ಪರಿಣಮಿಸಿದೆ. ಮೂರನೇ ಟೆಸ್ಟ್‌ನಲ್ಲಿ ಪಾಕಿಸ್ತಾನ ತಂಡದ ಪ್ಲೇಯಿಂಗ್ ಇಲೆವೆನ್‌ನಲ್ಲಿ ನಾಲ್ಕು ಬದಲಾವಣೆ ಮಾಡಲಾಗಿದೆ. ಇಮಾಮ್-ಉಲ್-ಹಕ್ ಬದಲಿಗೆ ಶಾನ್ ಮಸೂದ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಎಡಗೈ ಸ್ಪಿನ್ನರ್ ಮೊಹಮ್ಮದ್ ನವಾಜ್ ಬದಲಿಗೆ ಎಡಗೈ ಸ್ಪಿನ್ನರ್ ನೌಮಲ್ ಅಲಿ ತಂಡಕ್ಕೆ ಬಂದಿದ್ದಾರೆ. ಲೆಗ್‌ಸ್ಪಿನ್ನರ್ ಜಾಹಿದ್ ಮಹಮೂದ್ ಬದಲಿಗೆ ಅಜರ್ ಅಲಿ ಅವಕಾಶ ಪಡೆದಿದ್ದಾರೆ. ವೇಗಿ ಮೊಹಮ್ಮದ್ ಅಲಿ ಮೂರನೇ ಟೆಸ್ಟ್‌ನಿಂದ ಹೊರಗುಳಿದಿದ್ದು, 21 ವರ್ಷದ ಮೊಹಮ್ಮದ ವಾಸಿಂ ಜೂನಿಯರ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ
ಇನ್ನು ಇಂಗ್ಲೆಂಡ್ ತಂಡದಲ್ಲಿ ಕೂಡ ಎರಡು ಬದಲಾವಣೆ ಮಾಡಲಾಗಿದೆ. 18 ವರ್ಷದ ರೆಹಾನ್ ಅಹ್ಮದ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಲಿದ್ದಾರೆ. ಇವರು, ಇಂಗ್ಲೆಂಡ್ ಪರವಾಗಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಕಿರಿಯ ಆಟಗಾರ ಎನ್ನುವ ಖ್ಯಾತಿಗೆ ಭಾಜನರಾಗಿದ್ದಾರೆ. ಹಿರಿಯ ವೇಗಿ ಜೇಮ್ಸ್ ಆಂಡರ್ಸನ್‌ಗೆ ಈ ಪಂದ್ಯದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ವಿಕೆಟ್ ಕೀಪರ್ ವಿಲ್ ಜಾಕ್‌ಗೆ ವಿಶ್ರಾಂತಿ ನೀಡಲಾಗಿದ್ದು, ಅವರ ಬದಲಿಗೆ ಬೆನ್ ಫೋಕ್ಸ್ ಅವರಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಆಕ್ರಮಣಕಾರಿ ನೀತಿಯಿಂದ ಮೊದಲ ಎರಡು ಟೆಸ್ಟ್‌ನಲ್ಲಿ ಜಯ ಸಾಧಿಸಿರುವ ಇಂಗ್ಲೆಂಡ್ ಈ ಪಂದ್ಯದಲ್ಲಿ ಕೂಡ ಅದೇ ಆಟ ಮುಂದುವರೆಸುವ ವಿಶ್ವಾಸದಲ್ಲಿದೆ.
ಸ್ಪಿನ್ನರ್ ಗಳಿಗೆ ನೆರವಾಗುವ ಪಿಚ್
ಕರಾಚಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದ್ದು, ಸ್ಪಿನ್ನರ್ ಗಳಿಗೆ ಪಿಚ್ ಸಾಕಷ್ಟು ನೆರವು ನೀಡುವ ನಿರೀಕ್ಷೆ ಮಾಡಲಾಗಿದೆ. ರಾವಲ್ಪಿಂಡಿ ಪಿಚ್‌ನಲ್ಲಿ ಬೌಲರ್ ಗಳಿಗೆ ಯಾವುದೇ ನೆರವು ಸಿಕ್ಕಿರಲಿಲ್ಲ, ಮುಲ್ತಾನ್‌ನಲ್ಲಿ ಸ್ಪಿನ್ನರ್ ಗಳು ವಿಕೆಟ್ ಪಡೆದುಕೊಂಡಿದ್ದರು. ಕರಾಚಿ ಕೂಡ ಸ್ಪಿನ್ ಬೌಲರ್ ಗಳಿಗೆ ಹೆಚ್ಚಿನ ನೆರವು ನೀಡಲಿದ್ದು, ಸ್ಪಿನ್ನರ್ ಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ.
ಉಭಯ ತಂಡಗಳ ಪ್ಲೇಯಿಂಗ್ XI
ಪಾಕಿಸ್ತಾನ : ಅಬ್ದುಲ್ಲಾ ಶಫೀಕ್, ಶಾನ್ ಮಸೂದ್, ಅಜರ್ ಅಲಿ, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಅಘಾ ಸಲ್ಮಾನ್, ಸೌದ್ ಶಕೀಲ್, ಫಹೀಮ್ ಅಶ್ರಫ್, ನೌಮಾನ್ ಅಲಿ, ಮೊಹಮ್ಮದ್ ವಾಸಿಂ ಜೂನಿಯರ್, ಅಬ್ರಾರ್ ಅಹ್ಮದ್
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ನಾಯಕ), ಬೆನ್ ಫೋಕ್ಸ್, ರೆಹಾನ್ ಅಹ್ಮದ್, ಓಲಿ ರಾಬಿನ್ಸನ್, ಮಾರ್ಕ್ ವುಡ್, ಜ್ಯಾಕ್ ಲೀಚ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications