Pak vs Eng 7th T20: ಟಾಸ್‌ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ, ಪ್ಲೇಯಿಂಗ್ 11

ಲಾಹೋರ್‌ನ ಗಡಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ 7ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆತಿಥೇಯ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿದೆ.

ಈಗಾಗಲೇ ಉಭಯ ತಂಡಗಳು ತಲಾ ಮೂರು ಪಂದ್ಯಗಳನ್ನ ಗೆದ್ದಿರುವ ಹಿನ್ನಲೆಯಲ್ಲಿ ಏಳನೇ ಹಾಗೂ ಅಂತಿಮ ಟಿ20 ಪಂದ್ಯವು ಡಿಸೈಡರ್ ಆಗಿದ್ದು, ಪಂದ್ಯವು ಸಾಕಷ್ಟು ಕುತೂಹಲ ಮೂಡಿಸಿದೆ.

ಮೊದಲ ಟಿ20 ಪಂದ್ಯ ಅನ್ನು ಗೆದ್ದ ನಂತರ, ಇಂಗ್ಲೆಂಡ್ ಮುಂದಿನ ಐದು ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ಕಳೆದುಕೊಂಡಿತು, ಆದರೆ ಅವರು ಹಿಂದಿನ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಿದರು. ಫಿಲಿಪ್ ಸಾಲ್ಟ್ ಅವರ ಅದ್ಭುತ ಇನ್ನಿಂಗ್ಸ್‌ ಅವರಿಗೆ ಕಂಬ್ಯಾಕ್ ಮಾಡಲು ಸಹಾಯ ಮಾಡಿತು. ಅಂತಿಮ ಪಂದ್ಯ ಸರಣಿ ಗೆಲುವನ್ನ ನಿರ್ಧರಿಸುವುದರಿಂದ ಸಾಕಷ್ಟು ಜಿದ್ದಾಜಿದ್ದಿಗೆ ಕೂಡಿರಲಿದೆ.

ಡಾನ್ ಬ್ರಾಡ್‌ಮನ್‌ರನ್ನ ಹಿಂದಿಕ್ಕಿದ ಸರ್ಫರಾಜ್ ಖಾನ್: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ದಾಖಲೆ!ಡಾನ್ ಬ್ರಾಡ್‌ಮನ್‌ರನ್ನ ಹಿಂದಿಕ್ಕಿದ ಸರ್ಫರಾಜ್ ಖಾನ್: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ದಾಖಲೆ!

ಅಂತಿಮ ಪಂದ್ಯದಲ್ಲಾದ್ರೂ ಇಂಗ್ಲೆಂಡ್ ನಾಯಕ ಜಾಸ್ ಬಟ್ಲರ್ ಆಡಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದು, ಮೊಯಿನ್ ಅಲಿ ಈ ಪಂದ್ಯದಲ್ಲೂ ತಂಡವನ್ನ ಮುನ್ನಡೆಸಲಿದ್ದಾರೆ.

ಬಾಬರ್ ಅಜಮ್ ನಾಯಕತ್ವದ ಪಾಕಿಸ್ತಾನ ಮತ್ತು ಮೊಯಿನ್ ಅಲಿ ನಾಯಕತ್ವದ ಇಂಗ್ಲೆಂಡ್ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.

ಪಾಕಿಸ್ತಾನ ಪ್ಲೇಯಿಂಗ್ ಇಲೆವೆನ್
ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೇನ್

ಬೆಂಚ್: ಮೊಹಮ್ಮದ್ ಹ್ಯಾರಿಸ್, ಅಮರ್ ಜಮಾಲ್, ಶಹನವಾಜ್ ದಹಾನಿ, ಉಸ್ಮಾನ್ ಖಾದಿರ್, ಅಬ್ರಾರ್ ಅಹ್ಮದ್

ಇಂಗ್ಲೆಂಡ್ ಪ್ಲೇಯಿಂಗ್ ಇಲೆವೆನ್
ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಅಲೆಕ್ಸ್ ಹೇಲ್ಸ್, ಡೇವಿಡ್ ಮಲನ್, ಬೆನ್ ಡಕೆಟ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ (ನಾಯಕ), ಸ್ಯಾಮ್ ಕರನ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್, ಆದಿಲ್ ರಶೀದ್, ರೀಸ್ ಟೋಪ್ಲಿ

ಬೆಂಚ್ : ರಿಚರ್ಡ್ ಗ್ಲೀಸನ್, ಮಾರ್ಕ್ ವುಡ್, ವಿಲ್ ಜ್ಯಾಕ್ಸ್, ಲಿಯಾಮ್ ಡಾಸನ್, ಓಲಿ ಸ್ಟೋನ್, ಟಾಮ್ ಹೆಲ್ಮ್, ಲ್ಯೂಕ್ ವುಡ್, ಜೋರ್ಡಾನ್ ಕಾಕ್ಸ್

For Quick Alerts
ALLOW NOTIFICATIONS
For Daily Alerts
Story first published: Sunday, October 2, 2022, 20:15 [IST]
Other articles published on Oct 2, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X