ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಆಟಗಾರ ಆಡಲ್ಲ ಎಂದ ಮೆಕ್ಕಲಮ್

ಇಂಗ್ಲೆಂಡ್ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದು ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗಿಯಾಗಲು ಸಜ್ಜಾಗಿದೆ. ಈ ಸರಣಿಗೂ ಮುನ್ನ ಇಂಗ್ಲೆಂಡ್ ತಂಡದ ಕೋಚ್ ಬ್ರೆಂಡನ್ ಮೆಕ್ಕಲಮ್ ಪ್ರಮುಖ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ತಂಡದ ಪ್ರಮುಖ ವೇಗದ ಬೌಲರ್ ಮಾರ್ಕ್ ವುಡ್ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದಿದ್ದಾರೆ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್.

ಇಂಗ್ಲೆಂಡ್ ತಂಡದ ವೇಗದ ಬೌಲರ್ ಮಾರ್ಕ್ ವುಡ್ ಕಳೆದ ಟಿ20 ವಿಶ್ವಕಪ್‌ನಲ್ಲಿ ಲೀಗ್ ಹಂತದಲ್ಲಿ ಗಾಯಕ್ಕೆ ತುತ್ತಾಗಿದ್ದರು. ಈ ಕಾರಣದಿಂದಾಗಿ ಅವರು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯದಿಂದಲೂ ಆಡುವ ಅವಕಾಶವನ್ನು ಕಳೆದುಕೊಂಡಿದ್ದರು. ಸದ್ಯ ಪಾಕಿಸ್ತಾನದ ವಿರುದ್ಧದ ಟೆಸ್ಟ್ ಸರಣಿಗೆ ಮಾರ್ಕ್‌ ವುಡ್ ಆಯ್ಕೆಯಾಗಿದ್ದರು. ಆದರೆ ಅಂತಿಮ ಮೊದಲ ಪಂದ್ಯದಿಂದ ಅವರು ಹೊರಗುಳಿಯಲಿದ್ದು ಉಳಿದ ಪಂದ್ಯಗಳಿಗೆ ಲಭ್ಯವಾಗಲಿದ್ದಾರೆ ಎಂಬ ಮಾಹಿತಿಯನ್ನು ಮೆಕ್ಕಲಮ್ ನೀಡಿದ್ದಾರೆ.

ಸಂಜು ಸ್ಯಾಮ್ಸನ್‌ಗೆ ಮತ್ತೆ ನಿರಾಸೆ: ಫಿಫಾ ವಿಶ್ವಕಪ್‌ನಿಂದಲೂ ಅಭಿಮಾನಿಗಳ ಬೆಂಬಲಸಂಜು ಸ್ಯಾಮ್ಸನ್‌ಗೆ ಮತ್ತೆ ನಿರಾಸೆ: ಫಿಫಾ ವಿಶ್ವಕಪ್‌ನಿಂದಲೂ ಅಭಿಮಾನಿಗಳ ಬೆಂಬಲ

ಮಾರ್ಕ್ ವುಡ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್ ತಂಡದ ವೇಗದ ಬೌಲಿಂಗ್ ವಿಭಾಗದಲ್ಲಿ ಜೇಮ್ಸ್ ಆಂಡರ್ಸನ್, ಆಲಿ ರಾಬಿನ್ಸನ್ ಮತ್ತು ಜೇಮೀ ಓವರ್ಟನ್ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಇಂಗ್ಲೆಮಡ್ ತಂಡದ ಅನುಭವಿ ವೇಗಿ ಸ್ಟುವರ್ಟ್ ಬ್ರಾಡ್ ಇತ್ತೀಚೆಗಷ್ಟೇ ತಂದೆಯಾದ ಕಾರಣ ಈ ಸರಣಿಯಿಂದ ಅವರು ಹೊರಗಿಳಿದಿದ್ದಾರೆ.

ಟಿ20 ವಿಶ್ವಕಪ್‌ನ ಆರಂಭಕ್ಕೆ ಮುನ್ನ ಇಂಗ್ಲೆಂಡ್ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡು ಟಿ20 ಸರಣಿಯಲ್ಲಿ ಭಾಗಿಯಾಗಿತ್ತು. ಇದೀಗ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಮತ್ತೆ ಪ್ರವಾಸ ಕೈಗೊಳ್ಳಲಿದೆ. ಈ ಮೂಲಕ 2005ರ ಬಳಿಕ ಇಂಗ್ಲೆಂಡ್ ತಂಡ ಮೊದಲ ಬಾರಿಗೆ ಪಾಕಿಸ್ತಾನ ನೆಲದಲ್ಲಿ ಟೆಸ್ಟ್ ಸರಣಿಯನ್ನು ಆಡುತ್ತಿದೆ.

ಈತ ಭಾರತದಲ್ಲಿನ ನನ್ನ ನೆಚ್ಚಿನ ವೇಗದ ಬೌಲರ್; ಮಾಜಿ ಆಸೀಸ್ ಬೌಲರ್ ಬ್ರೆಟ್ ಲೀಈತ ಭಾರತದಲ್ಲಿನ ನನ್ನ ನೆಚ್ಚಿನ ವೇಗದ ಬೌಲರ್; ಮಾಜಿ ಆಸೀಸ್ ಬೌಲರ್ ಬ್ರೆಟ್ ಲೀ

ಪಾಕಿಸ್ತಾನ ತಂಡ ಹೀಗಿದೆ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಅಜರ್ ಅಲಿ, ಫಹೀಮ್ ಅಶ್ರಫ್, ಹಾರಿಸ್ ರೌಫ್,
ಇಮಾಮ್-ಉಲ್-ಹಕ್, ಮೊಹಮ್ಮದ್ ಅಲಿ, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ, ನಸೀಮ್ ಶಾ, ನೌಮನ್ ಅಲಿ, ಸಲ್ಮಾನ್ ಅಲಿ ಅಘಾ, ಸರ್ಫರಾಜ್ ಅಹ್ಮದ್, ಸೌದ್ ಶಕೀಲ್, ಶಾನ್ ಮಸೂದ್ ಮತ್ತು ಜಾಹಿದ್ ಮೆಹಮೂದ್.

ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್ (ವಿಕೆಟ್ ಕೀಪರ್), ಜೋ ರೂಟ್, ಜೇಮ್ಸ್ ಆಂಡರ್ಸನ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಕೀಟನ್ ಜೆನ್ನಿಂಗ್ಸ್, ಜ್ಯಾಕ್ ಲೀಚ್, ಲಿಯಾಮ್ ಲಿವಿಂಗ್‌ಸ್ಟೋನ್, ಜೇಮೀ ಓವರ್‌ಟನ್, ಆಲಿ ಪೋಪ್, ಆಲಿ ರಾಬಿನ್ಸನ್, ಮಾರ್ಕ್ ವುಡ್, ರೆಹಾನ್ ಅಹ್ಮದ್

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, November 29, 2022, 5:50 [IST]
Other articles published on Nov 29, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X