Pak Vs Eng : 1992ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳುತ್ತಾ ಇಂಗ್ಲೆಂಡ್?

ಟಿ20 ವಿಶ್ವಕಪ್ 2022ಕ್ಕೆ ತೆರೆ ಬೀಳುವ ಸಮಯ ಬಂದಿದೆ. ಎಂಸಿಜಿ ಅಂಗಳದಲ್ಲಿ ಭಾನುವಾರ ಈ ಬಾರಿಯ ವಿಶ್ವಕಪ್ ಚಾಂಪಿಯನ್‌ಗಳು ಯಾರು ಎನ್ನುವುದು ನಿರ್ಣಯವಾಗಲಿದೆ. ಇಂಗ್ಲೆಂಡ್ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಸೆಣೆಸಲಿವೆ.
ಎರಡೂ ತಂಡಗಳು ಇದುವರೆಗೂ ಒಂದೊಂದು ಬಾರಿ ಟಿ20 ವಿಶ್ವಕಪ್ ಚಾಂಪಿಯನ್‌ಗಳಾಗಿವೆ. ಎರಡನೇ ಬಾರಿ ಕಪ್ ಗೆಲ್ಲಲು ಎರಡೂ ತಂಡಗಳು ತುದಿಗಾಲಲ್ಲಿ ನಿಂತಿವೆ. 2009ರಲ್ಲಿ ಪಾಕಿಸ್ತಾನ ತನ್ನ ಮೊದಲನೇ ಟಿ20 ವಿಶ್ವಕಪ್ ಅನ್ನು ಜಯಿಸಿತ್ತು. ವೆಸ್ಟ್ ಇಂಡೀಸ್ ಮಾತ್ರ ಇದುವರೆಗೆ ಎರಡು ಬಾರಿ ಟಿ20 ವಿಶ್ವಕಪ್ ಗೆದ್ದಿರುವ ದಾಖಲೆ ಹೊಂದಿದೆ.
1992ರಲ್ಲಿ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ಫೈನಲ್ ಪಂದ್ಯವನ್ನು ಆಡಿದ್ದವು. ಪಾಕಿಸ್ತಾನ ಇಂಗ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿದ್ದರು. ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ಇಂಗ್ಲೆಂಡ್ ವಿರುದ್ಧ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.
ಮತ್ತೊಂದೆಡೆ, ಇಂಗ್ಲೆಂಡ್ ಕೂಡ 2010ರಲ್ಲಿ ಚೊಚ್ಚಲ ಟಿ20 ವಿಶ್ವಕಪ್ ಚಾಂಪಿಯನ್ ಎನಿಸಿಕೊಂಡಿತ್ತು. 1992ರ ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡು, ಎರಡನೇ ಬಾರಿ ಟಿ20 ವಿಶ್ವಕಪ್ ಚಾಂಪಿಯನ್ ಆಗಲು ಜೋಸ್ ಬಟ್ಲರ್ ಪಡೆ ತಯಾರಾಗಿದೆ.

ಕಾಡುತ್ತಿದೆ ಮಾರ್ಕ್‌ವುಡ್ ಅನುಪಸ್ಥಿತಿ
ಫೈನಲ್ ಪಂದ್ಯದಲ್ಲಿ ಮಾರ್ಕ್ ವುಡ್ ಆಡದಿರುವುದು ಇಂಗ್ಲೆಂಡ್ ತಂಡಕ್ಕೆ ಹಿನ್ನಡೆಯಾಗಿದೆ. ಸೆಮಿಫೈನಲ್‌ಗೆ ಮುನ್ನ ಅವರು ಗಾಯಗೊಂಡಿದ್ದರು, ವಿಶ್ವಕಪ್‌ನಲ್ಲಿ ಅವರು ಆಡುವುದಿಲ್ಲ ಎಂದು ತಂಡದ ಮ್ಯಾನೇಜ್‌ಮೆಂಟ್ ತಿಳಿಸಿದೆ. ಅವರು ಶನಿವಾರ ಪಂದ್ಯಕ್ಕೆ ಮುನ್ನಾದಿನ ಲಘು ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು.
ಪಾಕಿಸ್ತಾನದ ಆರಂಭಿಕರಾದ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಂ ಸೆಮಿಫೈನಲ್‌ನಲ್ಲಿ ಉತ್ತಮ ರನ್ ಗಳಿಸಿದ್ದಾರೆ. ಫೈನಲ್ ಪಂದ್ಯದಲ್ಲಿ ಇದೇ ಪ್ರದರ್ಶನ ನೀಡಿದರೆ ಮಾತ್ರ ಪಾಕಿಸ್ತಾನಕ್ಕೆ ಗೆಲುವು ಸುಲಭವಾಗಲಿದೆ. ಒಂದು ವೇಳೆ ಇವರಿಬ್ಬರೂ ಕೈಕೊಟ್ಟರೆ ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಮೇಲೆ ಹೆಚ್ಚಿನ ಒತ್ತಡ ಬೀಳಲಿದೆ.
ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಇಂಗ್ಲೆಂಡ್ ಕೂಡ ಆತ್ಮವಿಶ್ವಾಸದಿಂದ ಫೈನಲ್‌ನಲ್ಲಿ ಆಡಲಿದೆ.
ಉಭಯ ಸಂಭಾವ್ಯ ತಂಡಗಳು
ಪಾಕಿಸ್ತಾನ : ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ), ಅಲೆಕ್ಸ್ ಹೇಲ್ಸ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications