PAK vs ENG Test: 556 ರನ್ ಕಲೆ ಹಾಕಿ ಇತಿಹಾಸ ಸೃಷ್ಟಿಸಿದ ಪಾಕಿಸ್ತಾನ
ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಈ ಪಂದ್ಯದ ಎರಡನೇ ದಿನ ಪಾಕಿಸ್ತಾನ ತಂಡ ಇತಿಹಾಸ ನಿರ್ಮಿಸಿದೆ. ಶಾನ್ ಮಸೂದ್ ನಾಯಕತ್ವದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಮುಲ್ತಾನ್ ಸ್ಟೇಡಿಯಂನಲ್ಲಿ ಶ್ರೇಷ್ಠ ದಾಖಲೆ ಮಾಡಿದೆ.
ಪ್ರಸ್ತುತ ಇಂಗ್ಲೆಂಡ್ ತಂಡವು ಪಾಕಿಸ್ತಾನ ಪ್ರವಾಸದಲ್ಲಿದ್ದು, ಉಭಯ ತಂಡಗಳ ನಡುವೆ ಮೂರು ಪಂದ್ಯಗಳ ಟೆಸ್ಟ್‌ಗಳ ಸರಣಿ ನಡೆಯುತ್ತಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆ ಮೊದಲ ಇನ್ನಿಂಗ್ಸ್‌ನಲ್ಲಿ 556 ರನ್‌ಗಳ ಬೃಹತ್ ರನ್ ಶಿಖರ ಕಟ್ಟಿತ್ತು. ಇದರೊಂದಿಗೆ ಪಾಕಿಸ್ತಾನ ತಂಡ ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದೆ.

ಪಾಕಿಸ್ತಾನ ಇತಿಹಾಸ
ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡ ಎರಡನೇ ಬಾರಿಗೆ 500 ಕ್ಕಿಂತ ಹೆಚ್ಚು ರನ್ ಗಳಿಸಿದೆ. ಅಲ್ಲದೆ, ಪಾಕಿಸ್ತಾನ ಟೆಸ್ಟ್ ಕ್ರಿಕೆಟ್‌ನಲ್ಲಿ 556 ರನ್‌ಗಳೊಂದಿಗೆ ತನ್ನ ಅತ್ಯಧಿಕ ಸ್ಕೋರ್ ದಾಖಲಿಸಿದೆ. ಇದಕ್ಕೂ ಮೊದಲು ಮುಲ್ತಾನ್ ಸ್ಟೇಡಿಯಂನಲ್ಲಿ ಪಾಕಿಸ್ತಾನ 2001ರಲ್ಲಿ 546 ರನ್‌ಗಳನ್ನು ಕಲೆ ಹಾಕಿತ್ತು. ಇದು ಇಲ್ಲಿಯವರೆಗೆ ಪಾಕಿಸ್ತಾನ ತಂಡದ ಅತ್ಯುತ್ತಮ ಸ್ಕೋರ್ ಆಗಿತ್ತು. ಮಾಜಿ ದಿಗ್ಗಜ ವಕಾರ್ ಯೂನಿಸ್ ನಾಯಕತ್ವದಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ ಈ ದಾಖಲೆ ಮಾಡಿತ್ತು.
ಟೀಮ್ ಇಂಡಿಯಾ ದಾಖಲೆ
ಇದೇ ಮುಲ್ತಾನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಅತ್ಯಧಿಕ ಸ್ಕೋರ್ ಮಾಡಿದ ದಾಖಲೆಯನ್ನು ಹೊಂದಿದೆ. 2004ರಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಮ್ ಇಂಡಿಯಾ 5 ವಿಕೆಟ್ ನಷ್ಟಕ್ಕೆ 675 ರನ್‌ಗಳ ಬೃಹತ್ ಸ್ಕೋರ್ ಗಳಿಸಿತ್ತು. ಈ ಪಂದ್ಯದಲ್ಲಿ ಭಾರತದ ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್ (309) ಐತಿಹಾಸಿಕ ಇನ್ನಿಂಗ್ಸ್ ಆಡಿ ತ್ರಿಬಲ್ ಶತಕ ಸಿಡಿಸಿದ್ದರು. ಮತ್ತೊಂದೆಡೆ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ 194 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದ್ದರು. ಈ ಇಬ್ಬರ ಆಟದ ಪ್ರತಿಫಲವಾಗಿ ಭಾರತ ಮೊದಲ ಬಾರಿಗೆ 650ಕ್ಕೂ ಹೆಚ್ಚು ರನ್ ಕಲೆ ಹಾಕಿತ್ತು. ಈ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 52 ರನ್‌ಗಳ ಭರ್ಜರಿ ಜಯ ದಾಖಲಿಸಿತ್ತು.
ಮಂಗಳವಾರ ಪಾಕಿಸ್ತಾನ ತಂಡ ಎರಡನೇ ದಿನದಾಟವನ್ನು 4 ವಿಕೆಟ್ ಕಳೆದುಕೊಂಡು 328 ರನ್‌ಗಳಿಂದ ಮೊದಲ ಇನಿಂಗ್ಸ್ ಮುಂದುವರೆಸಿ 556 ರನ್‌ಗಳಿಗೆ ಸರ್ವ ಪತನವಾಯಿತು. ಮೊದಲ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದ್ದು, 460 ರನ್‌ಗಳ ಹಿನ್ನಡೆಯನ್ನು ಅನುಭವಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications