PAK vs ENG Test: ಮೊದಲ ಟೆಸ್ಟ್‌ಗೆ ಪ್ಲೇಯಿಂಗ್ ಇಲೆವೆನ್ ಪ್ರಕಟ: ಮೊದಲ ಗೆಲುವಿನ ಹುಡುಕಾಟದಲ್ಲಿ ಪಾಕ್ ಕ್ಯಾಪ್ಟನ್
ಪಾಕಿಸ್ತಾನ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡಾಗಿನಿಂದ ಗೆಲುವಿನ ನಗೆ ಬೀರುವಲ್ಲಿ ವಿಫಲರಾಗಿರುವ ನಾಯಕ ಶಾನ್ ಮಸೂದ್ ಮತ್ತೊಂದು ಅಗ್ನಿ ಪರೀಕ್ಷೆಗೆ ತಯಾರಾಗಿದ್ದಾರೆ. ಪಾಕ್ ಪ್ರವಾಸದಲ್ಲಿರುವ ಇಂಗ್ಲೆಂಡ್ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೋಮವಾರದಿಂದ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಈಗಾಗಲೇ ಆತಿಥೇಯ ತಂಡ ತನ್ನ ಪ್ಲೇಯಿಂಗ್ ಇಲೆವೆನ್ ಘೋಷಿಸಿದೆ.
ಈ ಸರಣಿಗೂ ಮುನ್ನ ಪಾಕ್‌ನಲ್ಲಿ ನಡೆದಿದ್ದ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶಾನ್ ಮಸೂದ್ ತಂಡ ಸೋಲು ಕಂಡಿತ್ತು. ತಂಡ ಈಗ ಮತ್ತೊಂದು ಟೆಸ್ಟ್‌ಗೆ ತಯಾರಾಗಿದೆ. ನಿರೀಕ್ಷಿಯಂತೆ ತಂಡದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ. ಮೈದಾನದಲ್ಲಿ ಹಳೆಯ ತಂಡವನ್ನು ಇಳಿಸಲು ಪಾಕ್ ಮ್ಯಾನೇಜ್ಮೆಂಟ್ ಇಚ್ಛಿಸಿದೆ. ಈ ಸರಣಿಯಲ್ಲಿ ಶಾನ್ ಮೊದಲ ಗೆಲುವಿನ ನಗೆ ಬೀರಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.

ವೇಗದ ಬೌಲರ್‌ಗಳಿಗೆ ನೆರವು ಸಾಧ್ಯತೆ
ಮುಲ್ತಾನ್ ಪಿಚ್ ವೇಗದ ಪಿಚ್‌ಗಳಿಗೆ ಸಹಾಯ ಮಾಡುವ ನಿರೀಕ್ಷೆ ಇದೆ. ಹೀಗಾಗಿ ಪಾಕ್ ತಂಡ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂವರು ವೇಗಿಗಳಿಗೆ ಸ್ಥಾನ ನೀಡಿದೆ. ಎಲ್ಲರೂ ತಮ್ಮ ವೇಗದ ಬೌಲಿಂಗ್‌ನಿಂದ ಎದುರಾಳಿಗಳನ್ನು ಕಾಡಬಲ್ಲರು. ಈ ಪಿಚ್‌ನಲ್ಲಿ ಆಡಿದ ಅನುಭವ ಇಂಗ್ಲೆಂಡ್ ತಂಡಕ್ಕಿದೆ. ಇಂಗ್ಲೆಂಡ್ ತಂಡದಲ್ಲೂ ಸ್ಟಾರ್ ಆಟಗಾರರ ದಂಡೇ ಇದೆ. ಈ ತಂಡವನ್ನು ಕಟ್ಟಿ ಹಾಕಲು ಶಾನ್ ಮಸೂದ್ ತಂಡ ಯೋಜನೆ ರೂಪಿಸಿಕೊಂಡಿದೆ.
ಐದು ಟೆಸ್ಟ್ ಸೋಲು ಕಂಡಿರುವ ಶಾನ್ ಮಸೂದ್
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಉಭಯ ತಂಡಗಳು ಫೈನಲ್‌ಗೆ ತಲುಪಲು ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಇಂಗ್ಲೆಂಡ್ ತನ್ನ ಹಿಂದಿನ ಸರಣಿಯಲ್ಲಿ ಶ್ರೀಲಂಕಾ ತಂಡವನ್ನು ಟೆಸ್ಟ್ ಸರಣಿಯಲ್ಲಿ ಸೋಲಿಸಿತ್ತು. ಆದರೆ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಸೋಲು ಕಂಡಿತ್ತು. ಶಾನ್ ಮಸೂದ್ ನಾಯಕತ್ವದಲ್ಲಿ ಪಾಕಿಸ್ತಾನ ಇದುವರೆಗೆ ಒಟ್ಟು 5 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಎಲ್ಲಾ ಪಂದ್ಯಗಳನ್ನು ಸೋತಿದೆ.
8ನೇ ಸ್ಥಾನದಲ್ಲಿ ಪಾಕ್
ಪಾಕಿಸ್ತಾನ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಆಡಿದ ಏಳು ಪಂದ್ಯಗಳಲ್ಲಿ 2 ಸೋಲು ಕಂಡಿದ್ದು, 16 ಅಂಕಗಳನ್ನು ಕಲೆ ಹಾಕಿದೆ. ಇನ್ನು ಇಂಗ್ಲೆಂಡ್ ತಂಡ ಆಡಿರುವ 16 ಪಂದ್ಯಗಳಲ್ಲಿ 8 ಜಯ ಸಾಧಿಸಿದ್ದು, 81 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಪಾಕ್ ತಂಡ: ಸ್ಯಾಮ್ ಅಯೂಬ್, ಅಬ್ದುಲ್ಲಾ ಶಫೀಕ್, ಶಾನ್ ಮಸೂದ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್, ಸಲ್ಮಾನ್ ಅಲಿ ಆಗಾ, ಅಮೀರ್ ಜಮಾಲ್, ಶಾಹೀನ್ ಶಾ ಆಫ್ರಿದಿ, ನಸೀಮ್ ಶಾ, ಅಬ್ರಾರ್ ಅಹ್ಮದ್.
ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜೇಮೀ ಸ್ಮಿತ್, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಬ್ರೈಡನ್ ಕಾರ್ಸೆ, ಜ್ಯಾಕ್ ಲೀಚ್, ಶೋಯೆಬ್ ಬಶೀರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications