
ಬಾಬರ್ ಅಜಮ್ ನೇತೃತ್ವದ ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಜಿಲೆಂಡ್ ರಾಷ್ಟ್ರೀಯ ಕ್ರಿಕೆಟ್ ತಂಡದ ನಡುವಿನ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಪಂದ್ಯ ಪ್ರಸ್ತುತ ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ವಿಚಿತ್ರವಾದ ನಿರ್ಧಾರ ತೆಗೆದುಕೊಂಡಿದೆ. ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಾಕಿಸ್ತಾನ ತನ್ನ ಆಡುವ ಬಳಗದಿಂದ ಉಪನಾಯಕನನ್ನೇ ಹೊರಗಿಟ್ಟಿದೆ. ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್ ತಂಡದ ಟೀಮ್ ಮ್ಯಾನೇಜ್‌ಮೆಂಟ್‌ನ ಈ ವಿಚಿತ್ರ ನಿರ್ಧಾರ ಅಚ್ಚರಿ ಮೂಡಿಸಿದೆ.
ಕಳೆದ ಮೂರು ವರ್ಷಗಳಿಂದ ಪಾಕಿಸ್ತಾನ ತಂಡದಿಂದ ದೂರವಿದ್ದ ಶಾನ್ ಮಸೂದ್ ನ್ಯೂಜಿಲೆಂಡ್ ವಿರುದ್ಧದ ಸರಣಿಗಾಗಿ ತಂಡಕ್ಕೆ ಮತ್ತೆ ಆಯ್ಕೆಯಾಗಿದ್ದರು. 2019ರಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಅವರು ಕೊನೆಯದಾಗಿ ಆಡಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅವರು 22.20 ಸರಾಸರಿಯಲ್ಲಿ ಒಂದು ಅರ್ಧಶತಕ ಸೇರಿದಂತೆ 111 ರನ್ ಗಳಿಸಿದರು. ಪ್ರಮುಖ ಆಲ್‌ರೌಂಡರ್ ಬೆರಳಿನ ಗಾಯದಿಂದ ಏಕದಿನ ಸರಣಿಯಿಂದ ಹೊರಗುಳಿದರು. ಅವರ ಅನುಪಸ್ಥಿತಿಯಲ್ಲಿ ಶಾನ್ ಮಸೂದ್ ತಂಡಕ್ಕೆ ಆಯ್ಕೆಯಾದರು, ಮೊಹಮ್ಮದ್ ರಿಜ್ವಾನ್ ಉಪನಾಯಕನಾಗುವ ಸಾಧ್ಯತೆ ಇತ್ತಾದರೂ, ಅಂತಿಮವಾಗಿ ಶಾನ್ ಮಸೂದ್‌ರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ಬಾಬರ್ ಅಜಮ್‌ಗೆ ಈ ಬಗ್ಗೆ ಮಾಹಿತಿ ಇಲ್ಲ!
ಶಾನ್ ಮಸೂದ್‌ರನ್ನು ಉಪನಾಕನಾಗಿ ನೇಮಕ ಮಾಡಿದ ವಿಚಾರ ನಾಯಕ ಬಾಬರ್ ಅಜಮ್‌ಗೆ ತಿಳಿದಿರಲಿಲ್ಲ ಎನ್ನಲಾಗುತ್ತಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಹೊಸ ಅಧ್ಯಕ್ಷರಾಗಿ ನೇಮಕಗೊಂಡ ನಜಮ್ ಸೇಥಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಪಂದ್ಯಕ್ಕೆ ಮೊದಲು ನಡೆದಿದ್ದ ಪತ್ರಿಕಾಗೋಷ್ಠಿಯಿಲ್ಲಿ ನಾಯಕ ಬಾಬರ್ ಅಜಂ, ಏಕದಿನ ಪಂದ್ಯಕ್ಕಾಗಿ ಅವರು ಪ್ಲೇಯಿಂಗ್‌ನಲ್ಲಿ ಇರುವ ಬಗ್ಗೆ ನನಗೆ ಖಚಿತ ಮಾಹಿತಿಯಿಲ್ಲ ಎಂದು ಹೇಳಿದ್ದರು.

ಸರಣಿ ಗೆಲ್ಲುವುದೇ ನಮ್ಮ ಗುರಿ ಎಂದ ಬಾಬರ್
"ನಾನು ಯಾವುದೇ ಆಟಗಾರನ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಅವರು ಉಪನಾಯಕನಾಗಿರಲಿ ಅಥವಾ ಬೇರೆ ಯಾರೇ ಆಗಿರಲಿ. ನಮ್ಮ ಅತ್ಯುತ್ತಮ ಆಟಗಾರರ ಆಡುವ ಬಳಗವನ್ನು ಕಣಕ್ಕಿಳಿಸಲು ಯತ್ನಿಸುತ್ತೇವೆ, ಸರಣಿಯನ್ನು ಗೆಲ್ಲುವುದು ನಮ್ಮ ಗುರಿ" ಎಂದು ಹೇಳಿದರು.
ಶಾನ್ ಮಸೂದ್ ಅನುಪಸ್ಥಿತಿಯಲ್ಲಿ ಪಾಕಿಸ್ತಾನದ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿಸ್ ಸೊಹೈಲ್ ಆಡುತ್ತಿದ್ದಾರೆ.
ಮೊದಲ ಏಕದಿನ ಪಂದ್ಯಕ್ಕೆ ಪಾಕಿಸ್ತಾನ ಪ್ಲೇಯಿಂಗ್ XI: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಹ್ಯಾರಿಸ್ ಸೊಹೈಲ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್.