Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Pak vs NZ 1st ODI : ಕಿವೀಸ್ ಪಡೆಗೆ ಸೋಲುಣಿಸಿದ ಪಾಕಿಸ್ತಾನ: ಗೆಲುವಿನ ಬಳಿಕ ಬಾಬರ್ ಹೇಳಿದ್ದಿಷ್ಟು!

Pak vs NZ 1st ODI, Pakistan won the match by 6 wickets against New Zealand

ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳು ಕೂಡ ಡ್ರಾ ಕಂಡ ಬಳಿಕ ಏಕದಿನ ಸರಣಿಯಲ್ಲಿ ಪಾಕಿಸ್ತಾನ ಶುಭಾರಂಭ ಮಾಡಿದೆ. ನ್ಯೂಜಿಲೆಂಡ್ ವಿರುದ್ಧ ಮೊದಲಿಗೆ ಬೌಲಿಂಗ್‌ನಲ್ಲಿ ಯಶಸ್ಸು ಸಾಧಿಸಿದ್ದ ಪಾಕಿಸ್ತಾನ ಬಳಿಕ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿದ್ದು 6 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೇಲುಗೈ ಸಾಧಿಸಿದೆ.

ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ಪಾಕಿಸ್ತಾನ ತಂಡ ಎದುರಾಳಿ ವಿರುದ್ಧ ಉತ್ತಮ ಯಶಸ್ಸು ಸಾಧಿಸಲು ಸಾಧ್ಯವಾಯಿತು. ಪಾಕಿಸ್ತಾನದ ಯುವ ವೇಗಿ ನಸೀಮ್ ಶಾ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡ 9 ವಕೆಟ್ ಕಳೆದುಕೊಂಡು ನಿಗದಿತ 50 ಓವರ್‌ಗಳಲ್ಲಿ 255 ರನ್‌ಗಳನ್ನು ಮಾತ್ರವೇ ಗಳಿಸಲು ಸಾಧ್ಯವಾಯಿತು. ಈ ಪಂದ್ಯದಲ್ಲಿ ನಸೀಮ್ ಶಾ 5 ವಿಕೆಟ್‌ಗಳ ಗೊಂಚಲು ಪಡೆಯಲು ಯಶಸ್ವಿಯಾಗಿದ್ದು ಅಂತಿಮವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಮುಡಿಗೇರಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ನೀಡಿದ ಸಾಧಾರಣ ಮೊತ್ತದ ಗುರಿಯನ್ನು ಬೆನ್ನಟ್ಟಿದ ಪಾಕಿಸ್ತಾನ ಆರಂಬಿಕ ವಿಕೆಟನ್ನು ಶೀಘ್ರವಾಗಿ ಕಳೆದುಕೊಂಡಿತಾದರೂ ಬಳಿಕ ಉತ್ತಮ ಜೊತೆಯಾಟ ಪಡೆಯಿತು. ಆರಂಬಿಕ ಆಟಗಾರ ಫಕರ್ ಜಮಾನ್ ನಾಯಕ ಬಾಬರ್ ಅಜಂ ಹಾಗೂ ಮೊಹಮ್ಮದ್ ರಿಜ್ವಾನ್ ಅರ್ಧ ಶತಕದ ಸಾಧನೆ ಮಾಡಿದ್ದಾರೆ. ಫಕರ್ ಜಮಾನ್ 56 ರನ್‌ಗಳಿಸಿ ಔಟಾದರೆ ಬಾಬರ್ ಅಜಂ 66 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ರಿಜ್ವಾನ್ 77 ರನ್‌ಗಳಿಸಿ ವಿಕೆಟ್ ಕಳೆದುಕೊಳ್ಳದೆ ಉಳಿದುಕೊಂಡರು. ಅಂತಿಮವಾಗಿ 48.1 ಓವರ್‌ಗಳಲ್ಲಿ ಗುರಿ ತಲುಪಿದ ಪಾಕಿಸ್ತಾನ 6 ವಿಕೆಟ್‌ಗಳ ಅಂತರದ ಗೆಲುವು ಸಾಧಿಸಿದೆ.

ಇನ್ನು ಈ ಗೆಲುವಿನ ಬಳಿಕ ಮಾತನಾಡಿದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಬೌಲಿಂಗ್ ವಿಭಾಗದ ಪ್ರದರ್ಶನಕ್ಕೆ ವಿಶೇಷ ಪ್ರಶಂಸೆ ವ್ಯಕ್ತಪಡಿಸಿದರು. ಅದರಲ್ಲೂ ಐದು ವಿಕೆಟ್ ಪಡೆದು ಮಿಂಚಿದ ನಸೀಮ್ ಶಾ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಹಾರಿಸ್ ಸೊಹೈಲ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಶಾನ್ ಮಸೂದ್, ಕಮ್ರಾನ್ ಗುಲಾಮ್, ಶಹನವಾಜ್ ದಹಾನಿ, ತಯ್ಯಬ್ ತಾಹಿರ್, ಮೊಹಮ್ಮದ್ ಹಸ್ನೇನ್
ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ, ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಟಿಮ್ ಸೌಥಿ, ಲಾಕಿ ಫರ್ಗುಸನ್
ಬೆಂಚ್: ಬ್ಲೇರ್ ಟಿಕ್ನರ್, ಹೆನ್ರಿ ನಿಕೋಲ್ಸ್, ಇಶ್ ಸೋಧಿ, ಜಾಕೋಬ್ ಡಫಿ

Story first published: Tuesday, January 10, 2023, 8:22 [IST]
Other articles published on Jan 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+