PAK vs NZ: ಪಾಕ್ ವಿರುದ್ಧದ ಟೆಸ್ಟ್ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಕಿವೀಸ್; ಟಿಮ್ ಸೌಥಿಗೆ ನಾಯಕತ್ವ

ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ (NZC) ಪಾಕಿಸ್ತಾನ ತಂಡದ ವಿರುದ್ಧದ ಎರಡು ಪಂದ್ಯಗಳ ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ್ದು, ಬೌಲರ್ ಇಶ್ ಸೋಧಿ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಗ್ಲೆನ್ ಫಿಲಿಪ್ಸ್ ಟೆಸ್ಟ್ ಕ್ರಿಕೆಟ್‌ಗೆ ವಾಪಸ್ ಬಂದಿದ್ದಾರೆ.
ನ್ಯೂಜಿಲೆಂಡ್ ತಂಡದ ಟೆಸ್ಟ್ ಕ್ರಿಕೆಟ್ ನಾಯಕತ್ವದಿಂದ ಕೇನ್ ವಿಲಿಯಮ್ಸನ್ ಕೆಳಗಿಳಿದ ನಂತರ, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಅನುಭವಿ ವೇಗದ ಬೌಲರ್ ಟಿಮ್ ಸೌಥಿಗೆ ನಾಯಕತ್ವದ ಜವಾಬ್ದಾರಿ ನೀಡಿದೆ.
ಟೆಸ್ಟ್ ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿದರೂ, ಕೇನ್ ವಿಲಿಯಮ್ಸನ್ ಅವರು ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸುವುದನ್ನು ಮುಂದುವರಿಸಲಿದ್ದಾರೆ ಮತ್ತು ಮೂರು ಸ್ವರೂಪಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಡುವ ಬಯಕೆಯನ್ನು ಪುನರುಚ್ಚರಿಸಿದ್ದರು.
ಇನ್ನು ಅಲಭ್ಯತೆ ಮತ್ತು ಬೆನ್ನಿನ ಗಾಯದ ಕಾರಣ ಹಿರಿಯ ವೇಗಿ ಟ್ರೆಂಟ್ ಬೌಲ್ಟ್ ಮತ್ತು ಕೈಲ್ ಜೇಮಿಸನ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲದ ಕಾರಣ, ಟಿಮ್ ಸೌಥಿ ತಂಡದ ನಾಯಕತ್ವದ ಜೊತೆಗೆ ವೇಗದ ಬೌಲಿಂಗ್ ವಿಭಾಗವನ್ನು ಮುನ್ನಡೆಸಬೇಕಿದೆ.

ಮಧ್ಯಮ ಕ್ರಮಾಂಕದಲ್ಲಿ ಮಾಜಿ ನಾಯಕ ಕೇನ್ ವಿಲಿಯಮ್ಸನ್
15 ಸದಸ್ಯರ ನ್ಯೂಜಿಲೆಂಡ್ ಟೆಸ್ಟ್ ತಂಡದಲ್ಲಿ ಅನ್‌ಕ್ಯಾಪ್ಡ್ ವೇಗಿ ಬ್ಲೇರ್ ಟಿಕ್ನರ್ ಅವರನ್ನು ಉಳಿಸಿಕೊಳ್ಳಲಾಗಿದ್ದು, ಮಾಜಿ ನಾಯಕ ಕೇನ್ ವಿಲಿಯಮ್ಸನ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್ ಪಾತ್ರವನ್ನು ವಹಿಸಲಿದ್ದಾರೆ. ಈ ಮಧ್ಯೆ ಟಾಮ್ ಲ್ಯಾಥಮ್ ಅವರನ್ನು ನ್ಯೂಜಿಲೆಂಡ್ ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ.
ಎರಡು ಪಂದ್ಯಗಳ ಟೆಸ್ಟ್ ಸರಣಿಯು ನ್ಯೂಜಿಲೆಂಡ್ ತಂಡಕ್ಕೆ ಅಂತಿಮ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸರಣಿಯಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಉದ್ಘಾಟನಾ ಆವೃತ್ತಿಯನ್ನು ಗೆದ್ದ ಕಿವೀಸ್ ಪಡೆ, 2021ರಲ್ಲಿ ಭಾರತ ತಂಡದ ವಿರುದ್ಧ ಲಾರ್ಡ್ಸ್‌ನಲ್ಲಿ ಗೆದ್ದ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿದ್ದಾರೆ.

ಟಿಮ್ ಸೌಥಿಗೆ ಟೆಸ್ಟ್ ನಾಯಕನಾಗಿ ಮೊದಲನೆಯದ್ದಾಗಿದೆ
"ಇದು ಹೊಸ ಅನುಭವ ಮತ್ತು ಈ ತಂಡವನ್ನು ಪ್ರಚೋದಿಸುವುದು ಒಂದು ರೀತಿಯ ಸವಾಲಾಗಿದ" ಎಂದು ನ್ಯೂಜಿಲೆಂಡ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಹೇಳಿದರು.
"ನಾವು ಸಹಜವಾಗಿಯೇ ಪ್ರಸ್ತುತ ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೇಲೆ ಕಣ್ಣಿಟ್ಟಿದ್ದೇವೆ. ವಿಶೇಷವಾಗಿ ಮುಲ್ತಾನ್ ಮತ್ತು ಕರಾಚಿಯಲ್ಲಿ ನಡೆದ ಸರಣಿಯ ಕೊನೆಯ ಎರಡು ಟೆಸ್ಟ್‌ಗಳು. ಏಕೆಂದರೆ ಅಲ್ಲಿ ನಾವು ಆಡಲಿದ್ದೇವೆ," ಎಂದು ಗ್ಯಾರಿ ಸ್ಟೆಡ್ ತಿಳಿಸಿದರು.
"ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯು ಟಿಮ್ ಸೌಥಿಗೆ ಟೆಸ್ಟ್ ನಾಯಕನಾಗಿ ಮೊದಲನೆಯದ್ದಾಗಿದೆ ಮತ್ತು ನಾವಿಬ್ಬರೂ ಪಾಕಿಸ್ತಾನ ಪ್ರವಾಸಕ್ಕಾಗಿ ನಮ್ಮ ಕೆಲಸವನ್ನು ಪಡೆಯಲು ಎದುರು ನೋಡುತ್ತಿದ್ದೇವೆ," ಎಂದು ಅಭಿಪ್ರಾಯಪಟ್ಟರು.

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡ
ಮೊದಲ ಟೆಸ್ಟ್ ಡಿಸೆಂಬರ್ 26ರಂದು ಕರಾಚಿಯಲ್ಲಿ ಆರಂಭವಾಗಲಿದ್ದರೆ, ಎರಡನೇ ಟೆಸ್ಟ್ ಜನವರಿ 3ರಿಂದ ಮುಲ್ತಾನ್‌ನಲ್ಲಿ ನಡೆಯಲಿದೆ.
ಟಿಮ್ ಸೌಥಿ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಕೇನ್ ವಿಲಿಯಮ್ಸನ್, ಟಾಮ್ ಬ್ಲಂಡೆಲ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್ (ಉಪನಾಯಕ), ಡ್ಯಾರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ, ಬ್ಲೇರ್ ಟಿಕ್ನರ್, ನೀಲ್ ವ್ಯಾಗ್ನರ್, ವಿಲ್ ಯಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications