PAK vs NZ 1st ODI : ಮಿಂಚಿದ ನಸೀಮ್ ಶಾ, ಮೊಹಮ್ಮದ್ ರಿಜ್ವಾನ್; ಕಿವೀಸ್ ವಿರುದ್ಧ ಪಾಕ್‌ಗೆ ಭರ್ಜರಿ ಗೆಲುವು

ಕರಾಚಿಯ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಅಜೇಯ 77 ರನ್ ಮತ್ತು ನಾಯಕ ಬಾಬರ್ ಅಜಂ ಅವರ 66 ರನ್‌ಗಳ ಸಹಾಯದೊಂದಿಗೆ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡವು 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
256 ರನ್‌ಗಳನ್ನು ಬೆನ್ನಟ್ಟಿದ ಪಾಕಿಸ್ತಾನ ತಂಡ 4 ವಿಕೆಟ್ ಕಳೆದುಕೊಂಡು ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ ಗುರಿಯನ್ನು ಬೆನ್ನಟ್ಟಿತು ಮತ್ತು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದರು.
ಇದಕ್ಕೂ ಮೊದಲು ಪಾಕಿಸ್ತಾನ ವೇಗದ ಬೌಲರ್ ನಸೀಮ್ ಶಾ ಅವರ ಎರಡನೇ ಬಾರಿಯ ಐದು ವಿಕೆಟ್ ಗೊಂಚಲು ಪ್ರವಾಸಿ ನ್ಯೂಜಿಲೆಂಡ್ ತಂಡವನ್ನು 50 ಓವರ್‌ಗಳಲ್ಲಿ 9 ವಿಕೆಟ್‌ಗೆ 255 ರನ್‌ಗಳಿಗೆ ನಿರ್ಬಂಧಿಸಲು ಸಹಾಯ ಮಾಡಿದರು.

ಮೊದಲು ಬ್ಯಾಟಿಂಗ್ ಅವಕಾಶ ಪಡೆದುಕೊಂಡ ನ್ಯೂಜಿಲೆಂಡ್ ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡಿದ್ದರ ಫಲವಾಗಿ, ಅತಿಥೇಯ ಪಾಕಿಸ್ತಾನಕ್ಕೆ ಬೃಹತ್ ಗುರಿ ನೀಡಲು ವಿಫಲವಾಯಿತು.
ನಸೀಮ್ ಶಾ ಐದು ವಿಕೆಟ್ ಪಡೆಯುವ ಮೂಲಕ ಏಕದಿನ ಕ್ರಿಕೆಟ್ ಸ್ವರೂಪದಲ್ಲಿ ಸತತ ಎರಡನೇ ಪಂದ್ಯದಲ್ಲಿ ಐದು ವಿಕೆಟ್ ಪಡೆದ 12ನೇ ಬೌಲರ್ ಮತ್ತು ಪಾಕಿಸ್ತಾನದ ಆರನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ನಸೀಮ್ ಶಾ ಹೊರತುಪಡಿಸಿ, ಚೊಚ್ಚಲ ಪಂದ್ಯವಾಡಿದ ಸ್ಪಿನ್ನರ್ ಉಸಾಮಾ ಮಿರ್ ಎರಡು ವಿಕೆಟ್ ಪಡೆದರು. ಮೊಹಮ್ಮದ್ ವಾಸಿಂ ಜೂನಿಯರ್ ಮತ್ತು ಮೊಹಮ್ಮದ್ ನವಾಜ್ ತಲಾ ಒಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications