Pak Vs NZ: ಬಾಬರ್ ಅಜಂ ಶತಕ : ಎರಡನೇ ಪಂದ್ಯದಲ್ಲೂ ಭರ್ಜರಿ ಗೆಲುವು ಸಾಧಿಸಿದ ಪಾಕಿಸ್ತಾನ
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಕೂಡ ಪಾಕಿಸ್ತಾನ ಭರ್ಜರಿ ಗೆಲುವು ಸಾಧಿಸಿದೆ. ನಾಯಕ ಬಾಬರ್ ಅಜಂ ಭರ್ಜರಿ ಶತಕ ಸಿಡಿಸುವ ಮೂಲಕ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 194 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ನ್ಯೂಜಿಲೆಂಡ್ ಪಾಕಿಸ್ತಾನದ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 154 ರನ್ ಗಳಿಸುವ ಮೂಲಕ 38 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಲಾಹೋರ್ ನ ಗಡಾಫಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ನಾಯಕ ಬಾಬರ್ ಅಜಂ ಮತ್ತು ಮೊಹಮ್ಮದ್ ರಿಜ್ವಾನ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 99 ರನ್ ಕಲೆಹಾಕಿತು. ನಂತರ ಆರು ರನ್ ಗಳಿಸುವಷ್ಟರಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ರಿಜ್ವಾನ್ 50 ರನ್ ಗಳಿಸಿ ಔಟಾದರೆ, ಫಖಾರ್ ಜಮಾನ್ ಮತ್ತು ಸೈಯಮ್ ಆಯುಬ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇಮಾದ್ ವಾಸಿಮ್ 2 ರನ್ ಗಳಿಸಿ ಔಟಾದರೆ, ನಂತರ ಬಂದ ಇಫ್ತಿಕರ್ ಅಹ್ಮದ್ 19 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 33 ರನ್ ಗಳಿಸಿದರು. ಕೊನೆಯವರೆಗೂ ಬ್ಯಾಟಿಂಗ್ ಮಾಡಿದ ನಾಯಕ ಬಾಬರ್ ಅಜಂ ಅಮೋಘ ಶತಕ ಗಳಿಸಿ ಮಿಂಚಿದರು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೂರನೇ ಶತಕ
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬಾಬರ್ ಅಜಂ ಮೂರನೇ ಶತಕ ಸಿಡಿಸಿ ಮಿಂಚಿದರು. 58 ಎಸೆತಗಳಲ್ಲಿ 11 ಬೌಂಡರಿ ಮೂರು ಸಿಕ್ಸರ್ ಸಹಿತ ಅಜೇಯ 101 ರನ್ ಗಳಿಸಿದರು. ಕೊನೆಯ ನಾಲ್ಕು ಎಸೆತಗಳಲ್ಲಿ ಒಂದು ಸಿಕ್ಸರ್, ಎರಡು ಬೌಂಡರಿಗಳನ್ನು ಸಿಡಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿದರು. 20 ಓವರ್ ಗಳಲ್ಲಿ ಪಾಕಿಸ್ತಾನ 4 ವಿಕೆಟ್ ಕಳೆದುಕೊಂಡು 192 ರನ್ ಗಳಿಸಿತು.

ಪಾಕಿಸ್ತಾನದ ಶಿಸ್ತಿನ ಬೌಲಿಂಗ್ ದಾಳಿ
195 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ನ್ಯೂಜಿಲೆಂಡ್ ಆರಂಭದಲ್ಲೇ ರನ್ ಗಳಿಸಲು ಪರದಾಡಿತು. ನಾಯಕ ಟಾಮ್ ಲಾಥಮ್ 20 ಎಸೆತಗಳಲ್ಲಿ 19 ರನ್ ಗಳಿಸಿದರು. ಚಡ್ ಬೌಸ್ 24 ಎಸೆತಗಳಲ್ಲಿ 26 ರನ್ ಗಳಿಸಿದರು. ವಿಲ್ ಯಂಗ್ 12 ಎಸೆತಗಳಲ್ಲಿ 9 ರನ್ ಗಳಿಸಿ ಔಟಾದರು. ಮಾರ್ಕ್ ಚಾಪ್‌ಮನ್ ಮಾತ್ರ ಅತ್ಯುತ್ತಮ ಬ್ಯಾಟಿಂಗ್ ಮಾಡಿದರು.
40 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 65 ರನ್ ಗಳಿಸಿದ ಅವರಿಗೆ, ಇತರೆ ಬ್ಯಾಟರ್ ನಿಂದ ಸರಿಯಾದ ಬೆಂಬಲ ಸಿಗಲಿಲ್ಲ. ಡೇರಿಲ್ ಮಿಚೆಲ್ 7 ಎಸೆತಗಳಲ್ಲಿ 9 ರನ್ ಗಳಿಸಿದರು. ಜೇಮ್ಸ್ ನೀಶಮ್ 1 ರನ್ ಗಳಿಸಿ ಔಟಾದರು. ರಚಿನ್ ರವೀಂದ್ರ 5, ಕೋಲೆ ಮಕೊಂಚಿ 12 ರನ್ ಗಳಿಸಿದರೆ, ಹೆನ್ರಿ ಶಿಪ್ಲೆ ಅಜೇಯ 1 ರನ್ ಗಳಿಸಿದರು.
ಹ್ಯಾರಿಸ್ ರೌಫ್ 4 ಓವರ್ ಗಳಲ್ಲಿ 27 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದು ಮಿಂಚಿದರು. ಇಮಾದ್ ವಾಸಿಂ, ಜಮಾನ್ ಖಾನ್ ಮತ್ತು ಶದಾಬ್ ಖಾನ್ ತಲಾ ಒಂದು ವಿಕೆಟ್ ಪಡೆದರು. ಈ ಗೆಲುವಿನ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ ಪಾಕಿಸ್ತಾನ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಮೂರನೇ ಪಂದ್ಯ ಸೋಮವಾರ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications