Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಮಹತ್ವದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಆಘಾತ: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕಿಲ್ಲ ಪ್ರಮುಖ ವೇಗಿ

ಸತತ ಸೋಲುಗಳಿಂದ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ತಂಡ ಶುಕ್ರವಾರ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಮಹತ್ವದ ಪಂದ್ಯವನ್ನಾಡಲಿದೆ. ಈಗಾಗಲೇ ಮೂರು ಪಂದ್ಯಗಳಲ್ಲಿ ಸೋಲು ಕಂಡಿರುವ ಪಾಕ್ ತಂಡ ಈ ಪಂದ್ಯದಲ್ಲಿ ಗೆದ್ದು ತನ್ನ ಸ್ಥಾನವನ್ನು ಉತ್ತಮಪಡಿಸಿಕೊಳ್ಳುವ ಪ್ರಯತ್ನ ನಡೆಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪಾಕ್ ತಂಡಕ್ಕೆ ಹಿನ್ನಡೆಯೊಂದು ಉಂಟಾಗಿದ್ದು ತಂದ ಪ್ರಮುಖ ವೇಗದ ಬೌಲರ್ ಅನಾರೋಗ್ಯಕ್ಕೆ ಒಳಗಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ.

ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿ ಅನಾರೋಗ್ಯಕ್ಕೆ ತುತ್ತಾಗಿರುವ ವೇಗದ ಬೌಲರ್. ಹೀಗಾಗಿ ಹಸನ್ ಅಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮಹತ್ವದ ಪಂದ್ಯಕ್ಕೆ ಅಲಭ್ಯವಾಗಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದ ವೈದ್ಯಕೀಯ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಿಂದ ಹಸನ್ ಅಲಿ ವಿಶ್ರಾಂತಿಗೆ ಸೂಚನೆ ನೀಡಿದೆ. ಆದರೆ ಉಳಿದ ಪಂದ್ಯಗಳಿಗೆ ಅವರು ಲಭ್ಯವಾಗಲಿದ್ದಾರೆ.

Pak vs SA: Pakistan pacer Hasan Ali ruled out due to illness for match against South Africa

ಪಾಕಿಸ್ತಾನ ತಂಡಕ್ಕೆ ಹಸನ್ ಅಲಿ ಯುವ ವೇಗಿ ನಸೀಮ್ ಶಾ ಗಾಯದಿಂದಾಗಿ ಹೊರಬಿದ್ದ ಕಾರಣ ಸೇರ್ಪಡೆಯಾಗಿದ್ದರು. ವಿಶ್ವಕಪ್‌ನಲ್ಲಿ ಈವರೆಗೆ ನಡೆದ ಪಂದ್ಯಗಳಲ್ಲಿ ಹಸನ್ ಅಲಿ ಉತ್ತಮ ಪ್ರದರ್ಶನ ನೀಡಿದ್ದು ಗಮನಸೆಳೆದಿದ್ದಾರೆ. ಆಡಿದ ಐದು ಪಂದ್ಯಗಳಲ್ಲಿ 5.82ರ ಎಕಾನಮಿಯಲ್ಲಿ ಬೌಲಿಂಗ್ ನಡೆಸಿದ್ದು 8 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಇನ್ನು ಹಸನ್ ಅಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಅಲಭ್ಯವಾಗಲಿರುವ ಕಾರಣದಿಂದಾಗಿ ಮೊಹಮ್ಮದ್ ವಾಸಿಮ್ ಜೂನಿಯರ್ ದಕ್ಷಿಣ ಆಪ್ರಿಕಾ ವಿರುದ್ಧದ ಪಂದ್ಯಕ್ಕೆ ಲಭ್ಯವಾಗುವ ನಿರೀಕ್ಷೆಯಿದೆ. ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಮಡ ವಿಶ್ವಕಪ್‌ನ ಆರಂಭಿಕ ಎರಡು ಪಂದ್ಯಗಳಲ್ಲಿ ಗೆದ್ದ ಬಳಿಕ ಸತತ ಮೂರು ಪಂದ್ಯಗಳಲ್ಲಿ ಸೋಲು ಅನುಭವಿಸಿ ಭಾರೀ ಹಿನ್ನಡೆ ಅನುಭವಿಸಿದೆ.

ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಸೌದ್ ಶಕೀಲ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಶಾಹೀನ್ ಅಫ್ರಿದಿ, ಉಸಾಮಾ ಮಿರ್, ಹಸನ್ ಅಲಿ, ಹಾರಿಸ್ ರೌಫ್, ಮೊಹಮ್ಮದ್ ವಾಸಿಂ ಜೂನಿಯರ್, ಫಖರ್ ಜಮಾನ್, ಅಘಾ ಸಲ್ಮಾನ್, ಮೊಹಮ್ಮದ್ ನವಾಜ್

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್(ನಾಯಕ), ಹೆನ್ರಿಚ್ ಕ್ಲಾಸೆನ್(ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲಿಜಾಡ್ ವಿಲಿಯಮ್ಸ್, ಟೆಂಬಾ ಬಾವುಮಾ, ಆಂಡಿಲೆ ಲ್ಯುಂಗ್‌ವೇ, , ತಬ್ರೈಜ್ ಶಮ್ಸಿ

Story first published: Friday, October 27, 2023, 13:17 [IST]
Other articles published on Oct 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+